ಮಂಗಳೂರು: ಸ್ಥಾಪನೆಯಾಗಿ 14 ವರ್ಷಗಳಲ್ಲಿ ಭಾರಿ ವೇಗದಲ್ಲಿ ಅಭಿವೃದ್ಧಿ ಸಾಧಿಸುವ ಜೊತೆಗೆ ಸಹಕಾರಿ ಕ್ಷೇತ್ರದಲ್ಲಿ ಯಾವ ರೀತಿಯಲ್ಲಿ ಪರಿವರ್ತನೆ ಮಾಡಬಹುದು ಎಂಬುದನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ತೋರಿಸಿಕೊಟ್ಟಿದ್ದಾರೆ. ಜೊತೆಗೆ ಜಿಲ್ಲೆಯಲ್ಲೂ ಆತ್ಮಶಕ್ತಿ ಸಹಕಾರ ಸಂಘಕ್ಕೆ ಒಳ್ಳೆಯ ಹೆಸರು ತಂದುಕೊಟ್ಟಿದ್ದಾರೆ ಎಂದು ಮಂಗಳೂರು ದಕ್ಷಿಣ ಶಾಸಕರಾದ ಶ್ರೀ ವೇದವ್ಯಾಸ ಕಾಮತ್ ಶ್ಲಾಘಿಸಿದರು.

ಮಂಗಳೂರಿನ ಪಡೀಲಿನ ಬೈರಾಡಿ ಕೆರೆ ಸಮೀಪದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ ಭಾನುವಾರ ನಡೆದ ಆರೋಗ್ಯ ಸೇವಾ ಸಂಗಮದ ಸಮಾರೋಪ ಹಾಗೂ ಸಂಘದ ೧೪ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ದುಡಿಯುವ ಬಂಡವಾಳ, ಠೇವಣಾತಿ ಸಂಗ್ರಹ, ಗಳಿಸಿದ ಲಾಭ, ಮಾಡಿದ ಶಾಖೆಗಳ ಸಂಖ್ಯೆ, ನೀಡಿದ ಡಿವಿಡೆಂಡ್‌ಗಳನ್ನು ತುಲನೆ ಮಾಡಿದರೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ೧೪ ವರ್ಷ ಗಳಲ್ಲಿ ಅಸಾಮಾನ್ಯ ಸಾಧನೆಯನ್ನು ಮಾಡಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಕೇವಲ ಶಾಖೆಗಳನ್ನು ವಿಸ್ತರಿಸುತ್ತ ಹೋಗಿಲ್ಲ, ಸಹಕಾರಿ ಕ್ಷೇತ್ರದಲ್ಲಿ ಯಾವೆಲ್ಲ ವ್ಯವಸ್ಥೆಯನ್ನು ಜೋಡಿಸಬಹುದೋ ಅದನ್ನು ಮಾಡಿಕೊಂಡು ಸಾಧಿಸಿ ತೋರಿಸಿದ್ದಾರೆ. ಸಹಕಾರಿ ಸಂಘವೊAದು ಹೇಗೆ ಸಮಾಜಮುಖಿಯಾಗಿ ಕೆಲಸ ಮಾಡಬಹುದು ಎಂಬುದನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಾಡಿ ತೋರಿಸಿದೆ. ಆತ್ಮಶಕ್ತಿ ಸಹಕಾರ ಸಂಘವು ಪಡೀಲ್‌ನಲ್ಲಿ ಸ್ವಂತ ಆಡಳಿತ ಕಚೇರಿಯೊಂದಿಗೆ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ ೩೩ ಶಾಖೆಗಳನ್ನು ಹೊಂದಿದೆ. ಸ್ವಂತ ಕಚೇರಿ ಮಾಡುವಾಗ ಆ ಆರ್ಥಿಕ ವರ್ಷ ದಲ್ಲಿ ಲಾಭ ಗಳಿಕೆಯ ಪ್ರಮಾಣ ಕಡಿಮೆಯಾಗಬಹುದು. ಆದರೆ ಲಾಭ ಕಡಿಮೆಯಾಗಬಾರದು ಎಂಬ ದೃಷ್ಟಿಯಿಂದ ಹೆಚ್ಚು ಠೇವಣಿ ಸಂಗ್ರಹಿಸಿ ಎರಡರಲ್ಲೂ ಸಮತೋಲನ ಕಾಯ್ದುಕೊಂಡು ಬರುತ್ತಿರುವುದು ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ನೇತೃತ್ವದ ಆತ್ಮಶಕ್ತಿ ಸಹಕಾರಿ ಸಂಘದ ಆಡಳಿತ ಮಂಡಳಿಯ ಬಹುದೊಡ್ಡ ಸಾಧನೆ. ಹೀಗೆಯೇ ಮುಂದುವರಿದು ೩೩ ಶಾಖೆಗಳು ೧೩೩ ಶಾಖೆಗಳು ಆಗಲಿ ಎಂದು ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಸಂಘದ ಬೆಳವಣಿಗೆಗೆ ಸಹಕಾರ ನೀಡಿದ ಸರ್ವರನ್ನು ಅಭಿನಂದಿಸಿ “ಸಂಘದ ಆಡಳಿತ ಮಂಡಳಿಯ ಕಾರ್ಯಯೋಜನೆಯಿಂದ, ಸಿಬ್ಬಂದಿಗಳ ಶ್ರಮದಿಂದ, ಸಲಹಾ ಸಮಿತಿ ಸದಸ್ಯರು ಹಾಗೂ ಎಲ್ಲಾ ಸದಸ್ಯರ ಸಹಕಾರದಿಂದ ಠೇವಣಿಗಳ ಸಂಗ್ರಹಣೆಯಲ್ಲಿ, ಸಾಲ ನೀಡುವಿಕೆಯಲ್ಲಿ ಹಾಗೂ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸಿದೆ. ಸಂಘದಲ್ಲಿ ಲಭ್ಯವಿರುವ ವಿವಿಧ ಸೇವೆಗಳ ಬಗ್ಗೆ ಮಾಹಿತಿ ಪಡೆದು ಇದರ ಸದುಪಯೋಗವನ್ನು sಸದಸ್ಯರು ಹಾಗೂ ಸಾರ್ವಜನಿಕರು ಪಡೆಯಬೇಕಾಗಿ ವಿನಂತಿಸಿದರು. ಶಾಖೆಗಳ ಪ್ರಗತಿಗೆ ಕಾರಣರಾದ ಸಿಬ್ಬಂದಿ ವರ್ಗವನ್ನು ಅಭಿನಂದಿಸಿದರು.
ಈ ಸಮಾರಂಭದಲ್ಲಿ ಸಂಘದ ಶಾಖೆಗಳ ವಿವಿಧ ಸೇವೆಯ ಪ್ರಗತಿಗೆ ಕಾರಣಕರ್ತರಾದ ಶಾಖೆಯ ಶಾಖಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಸಂಘವು ನಡೆಸಿರುವ ೧೦೦ ಆರೋಗ್ಯ ಶಿಬಿರಗಳಲ್ಲಿ ಸಂಘದ ಜೊತೆ ಕೈ ಜೊಡಿಸಿರುವ ವೈದ್ಯರನ್ನು, ಆರೋಗ್ಯ ಸೇವಾ ಕಾರ್ಯಕರ್ತರನ್ನು ಸಮಾರೋಪ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು.

ಕಣಚೂರು ವೈದ್ಯಕೀಯ ಸಂಸ್ಥೆಯ ನಿರ್ದೇಶಕರಾದ ಶ್ರಿ ಅಬ್ದುಲ್ ರೆಹಮಾನ್, ಆತ್ಮಶಕ್ತಿ ಸಹಕಾರ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಸೀತಾರಾಮ ಎನ್., ಶ್ರೀ ರಮಾನಾಥ ಸನಿಲ್, ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ದಿವಾಕರ್ ಬಿ.ಪಿ., ಶ್ರೀ ಗೋಪಾಲ್ ಎಂ., ಶ್ರೀಮತಿ ಚಂದ್ರಾವತಿ, ಶ್ರೀಮತಿ ಉಮಾವತಿ, ಬ್ರಹ್ಮಶ್ರೀ ನಾರಾಯಣ ಗುರು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ನ ಗೌರವ ಅಧ್ಯಕ್ಷರಾದ ಶ್ರೀ ವಾಮನ್ ಕೆ., ಅಧ್ಯಕ್ಷರಾದ ಶ್ರೀ ಗೋಪಾಲ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಸ್ವಾಗತಿಸಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯಾ ವಿಜಯ್ ರವರು ವಂದಿಸಿದರು. ಬ್ರಹ್ಮಶ್ರೀ ನಾರಾಯಣ ಗುರು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ನ ಜೊತೆ ಕಾರ್ಯದರ್ಶಿ ಶ್ರೀ ವಿಶ್ವನಾಥ ರೆಂಜಾಳ ಹಾಗೂ ಸಂಘದ ಶಾಖಾಧಿಕಾರಿ ಶ್ರೀಮತಿ ಧನಲಕ್ಷಿ÷್ಮ ರವರು ಕರ‍್ಯಕ್ರಮ ನಿರೂಪಿಸಿದರು.