
hdrForward: 0; shaking: 0.015224; highlight: 1; algolist: 0;
multi-frame: 1;
brp_mask: 8;
brp_del_th: 0.0024,0.0001;
brp_del_sen: 0.1000,0.1000;
delta:null;
module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 259.0;aec_lux_index: 0;albedo: ;confidence: ;motionLevel: 0;weatherinfo: null;temperature: 43;zeissColor: bright;
ಸದಸ್ಯರಾದ ಶ್ರೀ ನೀಲಯ್ಯ ಗೌಡ ರವರು ಮಾತನಾಡಿ “ಶಾಖೆ ಆರಂಭದಿAದಲು ಉತ್ತಮ ವ್ಯವಹಾರ ನಡೆಸುತ್ತಿದ್ದು, ಸಂಘದ ಸದಸ್ಯರ ಬೇಡಿಕೆಗಳನ್ನು ಈಡೇರಿಸುತ್ತಿದೆ” ಎಂದು ಶ್ಲಾಘಿಸಿದರು.
ಸದಸ್ಯರಾದ ಶ್ರೀಮತಿ ಸುರೇಖ ರವರು ಮಾತನಾಡಿ “ ಉಳಿತಾಯದ ದೃಷ್ಟಿಯಿಂದ ಆವರ್ತನ ಖಾತೆಯಲ್ಲಿ ಹಣವನ್ನು ಉಳಿತಾಯ ಮಾಡಿದ್ದು, ಇದರಿಂದ ನನಗೆ ತುಂಬಾ ಪ್ರಯೋಜನವಾಗಿದೆ” ಎಂದು ಸಂಘದ ಉಳಿತಾಯ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ, “ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಇಂದಿಗೆ ೩೩ ಶಾಖೆಯನ್ನು ಹೊಂದಲು ಸಾಧ್ಯವಾಗಿದೆ. ಸಂಘದ ಪಾಲುಬಂಡವಾಳವು ೨೨.೫ ಲಕ್ಷದಿಂದ ಪ್ರಾರಂಭವಾಗಿ ಇಂದು ೩೦೦ ಕೋಟಿ ಠೇವಣಿಯಾಗಲು ಗ್ರಾಹಕರೇ ಕಾರಣ ಎಂದು ಪ್ರಶಂಸಿದರು . ಸಂಸ್ಥೆಯು ಕೇವಲ ಬ್ಯಾಂಕಿAಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ, ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿರುತ್ತದೆ. ಆರೋಗ್ಯ ಶಿಬಿರವನ್ನು ಸಹ ನಮ್ಮ ಸಂಘ ಹಮ್ಮಿಕೊಂಡು ಬರುತ್ತಿದೆ. ಮುಂದಿನ ದಿನಗಳಲ್ಲಿ ಅಳದಂಗಡಿ ಶಾಖೆಯಲ್ಲೂ ಆರೋಗ್ಯ ಶಿಬಿರವನ್ನು ನಡೆಸಲ್ಲಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಶ್ರೀ ಗೋಪಾಲ್ ಎಮ್. ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು.
ಸಂಘದ ಅಳದಂಗಡಿ ಶಾಖೆಯ ಶಾಖಾಧಿಕಾರಿಯಾದ ಶ್ರೀಮತಿ ಕಾವ್ಯಶ್ರೀ ಎಸ್ ಸ್ವಾಗತಿಸಿ, ಶಾಖೆಯ ಸಿಬ್ಬಂದಿಯಾದ ಶ್ರೀಮತಿ ಲೋಶಿತ ರವರು ವಂದಿಸಿದರು. ಶಾಖೆಯ ಸಿಬ್ಬಂದಿಯಾದ ಶ್ರೀಮತಿ ಸ್ವಾತಿ ಎಸ್ ಕಾರ್ಯಕ್ರಮ ನಿರೂಪಿಸಿದರು.