ಸದಸ್ಯರಾದ ಶ್ರೀಮತಿ ಪ್ರಮೀಳಾ ಸದಾಶಿವ ಶೆಟ್ಟಿ ರವರು ಮಾತನಾಡಿ “ಸಂಘದ ಶಾಖೆಗಳಲ್ಲಿ ಸಿಬ್ಬಂದಿಗಳ ಸಹಕಾರವು ಅತ್ಯುತ್ತಮವಾಗಿದ್ದು. ದೈನಂದಿನ ವ್ಯವಹಾರಕ್ಕೆ ತುಂಬಾ ಉಪಯುಕ್ತ ಸಂಘವಾಗಿದೆ” ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿಯನ್ನು ಹೊಂದಲು ಸಾಧ್ಯವಾಗಿದೆ. ಸಂಘವು ಕೇವಲ ಬ್ಯಾಂಕಿAಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಜೊತೆಯಲ್ಲಿ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದೆ. ಸಂಘದ ಸದಸ್ಯರಿಗೆ ಸ್ಮರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯಗಳನ್ನು ನೀಡುತ್ತಿದೆ. ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ ಪ್ರಯುಕ್ತ ೫೦೦ ದಿನಗಳ ಠೇವಣಿಗಳಿಗೆÂ ವಿಶೇಷ ಬಡ್ಡಿ ದರ ಶೇ. ೧೦ ಹಾಗೂ ೧೦೦೦ ದಿನಗಳ ಠೇವಣಿಗಳಿಗೆÂ ವಿಶೇಷ ಬಡ್ಡಿ ದರ ಶೇ. ೧೦.೫೦ ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. ೧೨,೦೦೦/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು” ಎಂದರು.
ಈ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಶ್ರೀ ಗೋಪಾಲ್ ಎಮ್, ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್ ಮತ್ತಿತರರರು ಉಪಸ್ಥಿತರಿದ್ದರು.
ಶಾಖೆಯ ಸಿಬ್ಬಂದಿಯಾದ ಕುಮಾರಿ ಅನುಜಿತ ರವರು ಸ್ವಾಗತಿಸಿ, ಸಿಬ್ಬಂದಿಯಾದ ಶ್ರೀಮತಿ ಸುಮಲತಾ ರವರು ವಂದಿಸಿದರು. ಶಾಖೆಯ ಪ್ರಭಾರ ಶಾಖಾಧಿಕಾರಿಯಾದ ಶ್ರೀ ವರಣ್ ರಾಜ್ ರವರು ಕಾರ್ಯಕ್ರಮ ನಿರೂಪಿಸಿದರು.