ಬಸವಶ್ರೀ ಫೌಂಡೇಷನ್ (ರಿ.) ಬೆಂಗಳೂರು ಇದರ ವತಿಯಿಂದ ಭಗವಾನ್ ಬುದ್ದ, ಶ್ರೀ ಬಸವೇಶ್ವರ, ಡಾ|| ಬಿ.ಆರ್ ಅಂಬೇಡ್ಕರ್ ಮತ್ತು ಡಾ|| ಶಿವಕುಮಾರ ಸ್ವಾಮೀಜಿ ಜಯಂತಿ ಪ್ರಯುಕ್ತ ಮಹಾಸಂಗಮ ಸಮಾವೇಶ, ಶಾಸಕರ ಜನಸ್ಪಂದನ ಪತ್ರಿಕೆಯ 15 ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆಯ ಬಿಡುಗಡೆ ಸಮಾರಂಭವು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿಯ ಕನ್ನಡದ ನ್ಯಾಯವಾದಿಗಳಾದ ಸನ್ಮಾನ್ಯ ಶ್ರೀ ಕೆ . ಎಲ್. ಕುಂದರಗಿರವರು ವಹಿಸಿದ್ದರು. ಈ ಸಮಾರಂಭದಲ್ಲಿ ವಿಶೇಷ ಸೇವೆ ಸಲ್ಲಿಸಿದ ಗಣ್ಯರಿಗೆ “ ಸಿದ್ಧಗಂಗಾ ರಾಷ್ಟಿçÃಯ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ತುಮಕೂರು ಜಿಲ್ಲೆಯ ಶ್ರೀ ಅರೇ ಶಂಕರ ಮಠದ ಶ್ರೀ ಸಿದ್ದರಾಮ ಚೈತನ್ಯ ಮಹಾ ಸ್ವಾಮಿಗಳು ಹಾಗೂ ತುಮಕೂರು ಜಿಲ್ಲೆಯ ಶ್ರೀ ಬಸವೇಶ್ವರ ಪ್ರಾಚಿ ಯೋಗ ಮಠದ ಶ್ರೀ ತೋಟಾಪುರಿ ಸೋಮಶೇಖರ್ ಗುರೂಜಿಯವರ ಗೌರವ ಉಪಸ್ಥಿತಿಯಲ್ಲಿ ಕರ್ನಾಟಕ ಸರ್ಕಾರದ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಸನ್ಮಾನ್ಯ ಶ್ರೀ ಪಿ. ಕೃಷ್ಣಭಟ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರಿಗೆ “ ಸಿದ್ಧಗಂಗಾ ರಾಷ್ಟಿçÃಯ ರತ್ನ” […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಕೊಟ್ಟಾರ ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಜಯರಾಮ್ ಕಾರಂದೂರು, ಶ್ರೀಮತಿ ರಮಣಿ ಕೆ,ಶ್ರೀ ಪಿ ಸುರೇಶ್, ಶ್ರೀ ಬಿ ಜಯರಾಮ್,ಶ್ರೀಮತಿ ಶುಭ ರಾಜೇಂದ್ರ,ಶ್ರೀ ಎಚ್ ಜನಾರ್ಧನ ಗಡಿಯಾರ್ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.

ಸಂಘದ ಸದಸ್ಯರಾದ ಶ್ರೀ ಜಯರಾಮ್ ಕಾರಂದೂರು ರವರು ಮಾತನಾಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಗ್ರಾಹಕರ ಸಭೆಗೆ ಸಂತಸವನ್ನು ವ್ಯಕ್ತ ಪಡಿಸಿದರು. ಶಾಖೆಯನ್ನು ತೆರೆಯುವಲ್ಲಿ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಹಾಗೂ ಆಡಳಿತ ಮಂಡಳಿಯ ಪ್ರಯತ್ನವನ್ನು ಶ್ಲಾಘಿಸಿದರು. ೨೦೨೩ ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಸಂಘದ ಅಧ್ಯಕ್ಷರಿಗೆ ಅಭಿನಂದನೆಯನ್ನು ಸಲ್ಲಿಸಿದರು. ಸಿಬ್ಬಂದಿಗಳ ಕಾರ್ಯವೈಖರಿ ಸೇವೆಯ ಕುರಿತು ಉತ್ತಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು. ಸಂಘದ ಸದಸ್ಯರಾದ ಶ್ರೀಮತಿ ರಮಣಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ಪಂಜಿಮೊಗರು ಶಾಖೆ ಹಾಗೂ ಶ್ರೀ ಶಾರದೋತ್ಸವ ಸೇವಾ ಟ್ರಸ್ಟ್ (ರಿ), ಹಿಂದೂ ಯುವಸೇನೆ ವಿದ್ಯಾನಗರ ಶಾಖೆ, ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ದಂತ ಚಿಕಿತ್ಸಾ ಶಿಬಿರ ಮತ್ತು ಕಣ್ಣಿನ ತಪಾಸಣೆ ಹಾಗೂ ರಕ್ತದಾನ ಶಿಬಿರವು ದಿನಾಂಕ 19.11.2023ರಂದು ಶ್ರೀ ಕೃಷ್ಣ ಭಜನಾ ಮಂದಿರದ ಅಂಗಣ ವಿದ್ಯಾನಗರ ಪಂಜಿಮೊಗರು ಇಲ್ಲಿನಡೆಯಿತು.

ಈ ಕಾರ್ಯಕ್ರಮದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಪಂಜಿಮೊಗರಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಲಯನ್ಸ್ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ಲಯನ್ ಶೀನಾ ಪೂಜಾರಿಯವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ , ನಿರ್ದೆಶಕರಾದ ಶ್ರೀ ಚಂದ್ರಹಾಸ್ ಮರೋಳಿ ಹಾಗೂ ಶ್ರೀ ಶಾರದೋತ್ಸವ ಸೇವಾ ಟ್ರಸ್ಟ್ ವಿದ್ಯಾನಗರದ ಅಧ್ಯಕ್ಷರಾದ ಉಮೇಶ್ ಪೂಜಾರಿ ,ಹಾಗೂ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2022-23ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ ೨೦೨೨-೨೩” ಪ್ರಶಸ್ತಿಯನ್ನು ದಿನಾಂಕ ೧೯/೦೮/೨೦೨೩ ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ೨೦೨೨-೨೩ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012 ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್ ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. 2023 ನೇ ಸಾಲಿನಲ್ಲಿ 2000 ಕೋಟಿಗೂ ಮಿಕ್ಕಿ ವ್ಯವಹಾರದೊಂದಿಗೆ, ದುಡಿಯುವ ಬಂಡವಾಳ 22118.10 ಲಕ್ಷ ಹೊಂದಿದ್ದು, ರೂ. 2.32 ಕೋಟಿಗೂ ಮಿಕ್ಕಿ ಲಾಭ ಗಳಿಸಿರುತ್ತದೆ. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶ್ರೀ ಬಿ. ನಿರಂಜನ್, ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಎಂ. […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉತ್ತಮ ಬೆಳವಣಿಗೆಯನ್ನು ದಾಖಲಿಸುತ್ತ ಬಂದಿದೆ. ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ತಂಡವು ಅತ್ಯಂತ ಪ್ರಾಮಾಣಿಕವಾಗಿ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಆತ್ಮಶಕ್ತಿ ಸಂಘವು ರಾಜ್ಯದಾದ್ಯಂತ ಶಾಖೆಗಳನ್ನು ತೆರೆದು ನಾಡಿನ ಜನತೆಯ ಆತ್ಮಬಲ ವೃದ್ಧಿಯಾಗಲಿ ಎಂದು ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಟ್ರಸ್ಟಿನ ಗೌರವಾಧ್ಯಕ್ಷ ಈಶ್ವರ ಪೂಜಾರಿ ಹೇಳಿದರು.

ಅವರು ಎ. 30 ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 30ನೇ ಶಾಖೆಯನ್ನು ಮಾಣಿ ಕೊಡಾಜೆ ಎ.ಆರ್.ಕಾಂಪ್ಲೆಕ್ಸ್‍ನಲ್ಲಿ ಉದ್ಘಾಟಿಸಿ, ಮಾತನಾಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿ, ಸಂಘವು ನಿರ್ದೇಶಕರ ಮತ್ತು ಸದಸ್ಯರ ಸಹಕಾರದಲ್ಲಿ ಪ್ರಗತಿ ಸಾಧಿಸಿದೆ. ಸಿಬಂದಿಗಳ ಉತ್ತಮ ಸೇವೆ ಗ್ರಾಹಕರಿಗೆ ಸಂತೃಪ್ತಿಯನ್ನು ಕೊಟ್ಟಿದೆ. ನಾಲ್ಕೈದು ಗ್ರಾಮಗಳ ಸಂಗಮವಾಗಿರುವ ಮಾಣಿಯಲ್ಲಿ 30ನೇ ಶಾಖೆ ತೆರೆಯುವ ಕನಸು ನನಸಾಗಿದೆ ಎಂದು ಹೇಳಿದರು. ಕ್ಯಾಂಪ್ಕೋ ಮಾಜಿ ಅಧ್ಯಕ್ಷರಾದ ಪದ್ಮನಾಭ ಕೊಂಕೋಡಿ ಮಾತನಾಡಿ, ಸಹಕಾರಿ […]

ಆತ್ಮಶಕ್ತಿ ವಿವಿದ್ಧೋದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಮಾಡೂರು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಮಾಡೂರು ಹಾಗೂ ವಿಶ್ವಭಾರತಿ (ರಿ.) ಸತ್ಯನಾರಾಯಣ ಮಂದಿರ ಮಾಡೂರು ಇವರ ಜಂಟಿ ಸಹಯೋಗದೊಂದಿಗೆ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ , ದೇರಳಕಟ್ಟೆ ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಉಚಿತ ಕಣ್ಣಿನ ತಪಾಸಣೆ ಮತ್ತು ಮಾತಾ ಅಮೃತಾನಂದಮಯಿ ಮಠ ಬೋಳೂರು ಇಲ್ಲಿಯ ನುರಿತ ವೈದ್ಯರಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಮಾತೃಶ್ರೀ ಕಾಂಪ್ಲೆಕ್ಸ್, ಮಾಡೂರುನಲ್ಲಿರುವ ಮಾಡೂರು ಶಾಖೆಯ ಆವರಣದಲ್ಲಿ ಆಯೋಜಿಸಲಾಯಿತು.

ಈ ಕಾರ್ಯಕ್ರಮವನ್ನು ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಪೆÇ್ರಪೆಸರ್ ಹಾಗೂ ಎಚ್.ಓ.ಡಿ ಡಾ| ಬದ್ರಿನಾಥ್ ತಲ್ವಾರ್ , ಮಾತಾ ಅಮೃತಾನಂದಮಯಿ ಮಠದ ವೈದ್ಯರಾದ ಡಾ| ದೇವದಾಸ್ ಹಾಗೂ ಡಾ| ಸುಚಿತ್ರಾ ಸೊರಕೆರವರು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ| ಬದ್ರಿನಾಥ್ ತಲ್ವಾರ್ ಇವರು ಮಾತನಾಡಿ ವೈದ್ಯಕೀಯ ಚಿಕಿತ್ಸೆಯ ಖರ್ಚು ವೆಚ್ಚಗಳ ಬಗ್ಗೆ ವಿವರಿಸಿದರು. ಇಂತಹ ಶಿಬಿರಗಳಿಂದ ಬಡ ಜನರಿಗೆ ಉತ್ತಮ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ|| ದೇವದಾಸ್ ರವರು ಮಾತನಾಡಿ […]

ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಜಪ್ಪಿನಮೊಗರು ಮತ್ತು ಗುರುಗಳ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು, ಇದರ ಮೆಗಾ ಆರೋಗ್ಯ ಶಿಬಿರವು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ ಬೋಳೂರು ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಜ್ಜೋಡಿ, ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಬ್ರಹ್ಮಶ್ರೀ ನಾರಾಯಣಗುರು ಮಂದಿರ , ಜಪ್ಪಿನಮೊಗರು ಇಲ್ಲಿ ನಡೆಯಿತು.

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ನ ಅಧ್ಯಕ್ಷರಾದ ಶ್ರೀ ವಾಮನ್ ಕೆ. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯೊಂದಿಗೆ ವೈದ್ಯಕೀಯ ಸೇವೆಯನ್ನು ಮಾಡುತ್ತಿರುವುದು ತುಂಬಾ ಒಳ್ಳೆಯ ಕೆಲಸವಾಗಿದೆ. ಜನರು ಇನ್ನಷ್ಟು ಹೆಚ್ಚಿನ ಪ್ರಯೋಜನವನ್ನು ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಮಾತನಾಡಿ ಸಂಘವು ಹಣಕಾಸಿನ ವ್ಯವಹಾರದೊಂದಿಗೆ ಸಾಮಾಜಿಕ ಸೇವೆಗೂ […]

ಆತ್ಮಶಕ್ತಿ ಕರಾವಳಿಯಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಒಂದು ಮಾದರಿ ಸಂಸ್ಥೆ. ಆದ್ದರಿಂದ ಸಂಸ್ಥೆಯ ಬಗ್ಗೆ ಆರಂಭದಿಂದಲೂ ಗೌರವ ಭಾವನೆಯಿದೆ. ಮುಂದಿನ ದಿನಗಳಲ್ಲಿಯೂ ಉತ್ತಮ ಕೆಲಸಗಳನ್ನು ಮುಂದುವರಿಸಬೇಕು ಎಂದು ಕೇಂದ್ರದ ಮಾಜಿ ವಿತ್ತ ಸಚಿವ ಶ್ರೀ ಬಿ. ಜನಾರ್ಧನ ಪೂಜಾರಿ ಹೇಳಿದರು.

ಪಡೀಲ್‍ನ ಆತ್ಮಶಕ್ತಿ ಸೌಧÀದಲ್ಲಿ ರವಿವಾರ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ದಶ ಸಂಭ್ರಮದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆತ್ಮಶಕ್ತಿಯಿದ್ದರೆ ಮಾತ್ರ ಮನುಷ್ಯ ಜೀವನದಲ್ಲಿ ಮುಂದೆ ಬರಲು ಸಾಧ್ಯ ಆದ್ದರಿಂದ ಹೆಸರಿಗೆ ಪೂರಕವಾಗಿ ಸಂಸ್ಥೆ ಜನರ ಪಾಲಿಗೂ ಆತ್ಮಶಕ್ತಿಯಾಗಿದೆ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಸಂಸ್ಥೆ ವತಿಯಿಂದ ಪಡೀಲ್‍ನಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ತಂಗುದಾಣ ಉದ್ಘಾಟಿಸಿದರು. ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಕೆ. […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯಲ್ಲಿ ಸಹಕಾರಿ ಸಪ್ತಾಹದ ಅಂಗವಾಗಿ ವಿಶೇಷ ಸಾಲ ಮೇಳ ಯೋಜನೆಗೆ ಚಾಲನೆ ನೀಡಲಾಯಿತು.

ಈ ಸಾಲ ಯೋಜನೆಯ ಪ್ರಯುಕ್ತ ಮೈಕ್ರೋ ಸಾಲವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‍ರವರು ಸಂಘದ ಸದಸ್ಯರಾದ ಶ್ರೀಮತಿ ಶಾಲಿ, ಶ್ರೀಮತಿ ಶಕುಂತಲ ಹಾಗೂ ಶ್ರೀಮತಿ ನಂದಿನಿರವರಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ, ನೀರುಮಾರ್ಗ ಶಾಖೆಯ ಶಾಖಾಧಿಕಾರಿ ಶ್ರೀ ಸಂದೀಪ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು, ಇದರ ದಶಮಾನೋತ್ಸವದ ಪ್ರಯುಕ್ತ ಮೆಗಾ ಆರೋಗ್ಯ ಶಿಬಿರವು ಕುದ್ರೋಳಿ ಯುವಕ ಸಂಘ (ರಿ.) ಇವರ ಜಂಟಿ ಸಹಯೋಗದೊಂದಿಗೆ ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್‍ನ ದೇರಳಕಟ್ಟೆ ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಕುದ್ರೋಳಿ ಯುವಕ ಸಂಘ (ರಿ.) ಕುದ್ರೋಳಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ2022ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕುದ್ರೋಳಿ ಯುವಕ ಸಂಘ (ರಿ.) ಇದರ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೆ. ಹಾಗೂ ಸಂಘದ ಪಧಾದಿಕಾರಿಗಳನ್ನು ಆತ್ಮಶಕ್ತಿ ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರುಗಳಾದ ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ಬಿ.ಪಿ. ದಿವಾಕರ್, ಶ್ರೀ ಗೋಪಾಲ್ ಎಂ., ಶ್ರೀಮತಿ ಉಮಾವತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಜಸ್ಟಿಸ್ […]