ಶ್ರೀ ಕೃಷ್ಣ ಮಠ ಪರ್ಯಾಯ ಕೃಷ್ಣಪುರ ಮಠ ಹಾಗೂ ಕಥಾಬಿಂದು ಪ್ರಕಾಶನ ಆಶ್ರಯದಲ್ಲಿ ಶ್ರೀವಿದ್ಯಾಸಾಗರ ತೀರ್ಥ ಶ್ರೀ ಪಾದಂಗಳವರು ಇವರ ದಿವ್ಯ ಸಾನಿಧ್ಯದಲ್ಲಿ sಶ್ರೀ ಪಿ.ವಿ ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ಹಾಗೂ ಶ್ರೀ ಕೃಷ್ಣಾನುಗ್ರಹ ರಾಜ್ಯಪ್ರಶಸ್ತಿ ಪ್ರಧಾನ ಸಮಾರಂಭವು `ರಾಜಾಂಗಣ’ ಶ್ರೀ ಕೃಷ್ಣ ಮಠ ಉಡುಪಿಯಲ್ಲಿ ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ರವರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸಾಧನೆಗಾಗಿ ಶ್ರೀವಿದ್ಯಾಸಾಗರ ತೀರ್ಥ ಶ್ರೀ ಪಾದಂಗಳವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರಿಗೆ “ಶ್ರೀ ಕೃಷ್ಣಾನುಗ್ರಹ ರಾಜ್ಯಪ್ರಶಸ್ತಿ”ಯನ್ನು ನೀಡಿ ಗೌರವಿಸಿದರು. ಮುಖ್ಯ ಅತಿಥಿಗಳಾಗಿ ಯುಗಪುರಷ ಪತ್ರಿಕೆಯ ಸಂಪಾದಕರಾದ ಶ್ರೀ ಭುವನಾಭಿರಾಮ ಉಡುಪ , ತಾರಸಿಯಲ್ಲಿ ಬತ್ತದ ಬೆಳೆ ಖ್ಯಾತಿಯ ಡಾ. […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕರಂಗಲ್ಪಾಡಿ ಶಾಖೆಯ 7ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಗ್ರಾಹಕರಾದ ನ್ಯಾಯವಾದಿ ಅರಿಲ್ ಕೆ.ಎಸ್., ಕುಮಾರಿ ಡೀನಾ ಲವಿನ ಡಿಕುನ್ಹ, ದಯಾನಂದ ಆರ್ ಕೆ, ಅಜಿತ್ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.

ಶ್ರಿ ಅರಿಲ್ ಕೆ.ಎಸ್. ಮಾತನಾಡಿ ಸಂಘವು 6 ಗಂಟೆಯವರೆಗೆ ಇ -ಸ್ಟಾಂಪಿಂಗ್ ಸೇವೆಯನ್ನು ನೀಡುತ್ತಿರುವುದರಿಂದ ನ್ಯಾಯವಾದಿಗಳಿಗೆ ಅನುಕೂಲವಾಗಿದೆ ಎಂದರು. ಮತ್ತೋರ್ವ ಗ್ರಾಹಕ ಶ್ರೀ ದಯಾನಂದ ಅರ್.ಕೆ. ಮಾತನಾಡಿ ಸಂಘವು ಪಿಗ್ಮಿ ಮೊಬೈಲ್ ಆಪ್ ಮೂಲಕ ಪಿಗ್ಮಿ ಹಣ ಸಂಗ್ರಹಣೆ ಮಾಡುವ ಸೇವೆಯನ್ನು ಆರಂಬಿಸಿದ್ದು ಪಿಗ್ಮಿ ಹಣ ಪಾವತಿಯ ಸಂದೇಶವು ನೇರವಾಗಿ ಪಿಗ್ಮಿ ಖಾತೆದಾರರ ಮೊಬೈಲ್‍ಗೆ ಸಂದೇಶ ರವಾನೆಯಾಗುವುದು ಗ್ರಾಹಕರಿಗೆ ಉತ್ತಮ ಸೇವೆಯಾಗಿದೆ ಎಂದರು. “ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ ಸಂಘವು ಸಣ್ಣ ವ್ಯಾಪಾರಸ್ಥರಿಗೆ ಪರಿಚಯಿಸಿದ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್, ಮಂಗಳೂರು ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಜಪ್ಪಿನಮೊಗರು, ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಉಚಿತ ಕನ್ನಡಕ ವಿತರಣಾ ಸಮಾರಂಭವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಜರುಗಿತು.

ಈ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಲ್ಲಿ ಒಟ್ಟು 200 ಜನರಿಗೆ ಉಚಿತವಾಗಿ ಕನ್ನಡಕವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬ್ರಹ್ಮsಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ ಅಧ್ಯಕ್ಷರಾದ ಶ್ರೀ ನಾಗರಾಜ್ ಬಿ.ವಿ, ಆರೋಗ್ಯ ಸಂಚಾಲಕರಾದ ಶ್ರೀ ರಂಜನ್ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಗಣೇಶ್, ಶ್ರೀ ಮನೋಜ್ ಕುಮಾರ್ ಉಪಸ್ಥಿತರಿದ್ದರು. ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ ಕಾರ್ಯದರ್ಶಿ ಶ್ರೀ ಚಂದ್ರಹಾಸ ಕಟ್ಟಪುಣಿ ಸ್ವಾಗತಿಸಿ, ಮಂದಿರದ ಮೇಲ್ವಿಚರಕರಾದ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತುಂಬೆ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್‌ರವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಸಂಘದ ಗ್ರಾಹಕರಾದ ಶ್ರೀ ಮೋಹನ್ ಕುಲಾಲ್, ಶ್ರೀ ಗುರುಪ್ರಸಾದ್, ಶ್ರೀ ಅಬ್ದುಲ್ ರಹಿಮಾನ್ ಹಾಗೂ ಶ್ರೀ ಗಿರೀಶ್‌ರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂಘದ ಗ್ರಾಹಕರಾದ ಶ್ರೀ ಮೊಹಮ್ಮದ್ ಶರೂನ್‌ರವರು ಮಾತನಾಡಿ ಸಂಘವು ತ್ವರಿತಗತಿಯಲ್ಲಿ ಚಿನ್ನಾಭರಣ ಸಾಲ ಸೇವೆ ನೀಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮತ್ತೋರ್ವ ಸಂಘದ ಗ್ರಾಹಕರು ಹಾಗೂ ತುಂಬೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಪ್ರವೀಣ್ ಬಿ ತುಂಬೆ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಶ್ರೀ ಚಿತ್ತರಂಜನ್ ಬೋಳಾರ್‌ರವರ ದಕ್ಷ ನಾಯಕತ್ವದಲ್ಲಿ ಬಂಡೆ ಕಲ್ಲಿನಲ್ಲಿಯೂ ನೀರು ತೆಗೆಯುವಂತಹ ಸಾಹಸ ಪ್ರವೃತ್ತಿಯಿಂದ ಸಂಘವು ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸಂಘವು ನಿರುದ್ಯೋಗಿಗಳಿಗೆ ಉದ್ಯೋಗವಕಾಶವನ್ನು ಕಲ್ಲಿಸಿಕೊಟ್ಟಿದೆ. ಸಂಘದ ಅಭಿವೃದ್ಧಿ ಹಾಗೂ ಸಿಬ್ಬಂದಿಗಳು […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ದಶಮಾನೋತ್ಸವ ಸವಿನೆನಪಿನ ಆಡಳಿತ ಕಚೇರಿ ಮತ್ತು ಹಾಸ್ಟಲ್ ಕಟ್ಟಡ “ಆತ್ಮಶಕ್ತಿ ಸೌಧ” ದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ ಎಸ್. ಟಿ. ಸೋಮಶೇಖರ್ ರವರು ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಸನ್ಮಾನ್ಯ ಶ್ರಿ ಪ್ರೇಮಾನಂದ ಶೆಟ್ಟಿಯವರ ಗೌರವ ಉಪಸ್ಥಿತಿಯಲ್ಲಿ ಸಂಘದ ಅದ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಉಪಾಧ್ಯಕ್ಷ ಶ್ರೀ ನೇಮಿರಾಜ್ ಪಿ. ರವರಿಗೆ ಸಂಘದ ದಶಮಾನೋತ್ಸವ ಸವಿನೆನಪಿನಗಾಗಿ ಸನ್ಮಾನಿಸುವ ಮೂಲಕ ಗೌರವಿಸಿದರು.

ಮುಖ್ಯ ಅತಿಥಿಗಳಾಗಿ ಮುಡಾ ಅಧ್ಯಕ್ಷರಾದ ಶ್ರೀ ರವಿಶಂಕರ ಮಿಜಾರ್, ಮೈಸೂರು ಪ್ರಾಂತ್ಯದ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಶ್ರೀ ಪ್ರಕಾಶ್ ರಾವ್, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಶ್ರೀ ಪ್ರವೀಣ್ ನಾಯಕ್, ಕಾರ್ಪೊರೇಟರ್‌ಗಳಾದ ಶ್ರೀ ಸಂದೀಪ್ ಗರೋಡಿ, ಶ್ರೀಮತಿ ರೂಪಶ್ರೀ ಪೂಜಾರಿ ಮತ್ತು ಶ್ರೀ ಅನಿಲ್ ಕುಮಾರ್, ಸಹಕಾರ ಸಚಿವರ ಸಹಾಯಕ ಶ್ರೀ ರೇವಣ್ಣ ಹಾಗೂ ಆತ್ಮಶಕ್ತಿ ಪತ್ರಿಕೆಯ ಸಂಪಾದಕರಾದ ಶ್ರೀ ವಾಮನ್ ಕೆ. ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ನಿರ್ದೇಶಕರಾದ ಶ್ರೀ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇವರ ಸಮನ್ವಯದಲ್ಲಿ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಮ್) ಬೆಂಗಳೂರು ಇವರಿಂದ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೋಮ (ಎಚ್.ಡಿ.ಸಿ.ಎಮ್) ೩೬ನೇ ಅಧಿವೇಶನದ ಶಿಕ್ಷಣಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ “ಆತ್ಮಶಕ್ತಿ ಸೌಧ” ಸಭಾ ಭವನ ಬೈರಾಡಿಕೆರೆ, ಪಡೀಲ್‌ನಲ್ಲಿ ಜರಗಿತು.

ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ ಪ್ರಸ್ತುತ ಸಹಕಾರ ಕಾಯ್ದೆ ಮತ್ತು ನಿಯಮಗಳಲ್ಲಿ ಪತ್ತಿನ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ನೇಮಕಾತಿ ಹಾಗೂ ನೌಕರರನ್ನು ಉನ್ನತ ಹುದ್ದೆಗೆ ಪದೋನ್ನತಿ ಪಡೆಯಬೇಕಾದರೆ ಅವರ ಅರ್ಹತೆಯಲ್ಲಿ ಹೈಯರ್ ಡಿಪ್ಲೋಮ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ (ಎಚ್.ಡಿ.ಸಿ.ಎಮ್) ಕೋರ್ಸನ್ನು ಸರಕಾರ ನಿಗದಿಪಡಿಸಿರುವುದರಿಂದ ಮುಂದಿನ ದಿನಗಳಲ್ಲಿ ಈ ಶಿಕ್ಷಣ ಅತೀ ಅಗತ್ಯವಿರುತ್ತದೆ. ಈ ಅಗತ್ಯವನ್ನು ಮನಗಂಡು ಸಂಘದ ಸಮನ್ವಯದಲ್ಲಿ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಮ್) ಬೆಂಗಳೂರು ಇವರ ಮೂಲಕ ಜಿಲ್ಲೆಯ ಸಹಕಾರ ಸಂಘದ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ದಶಮಾನೋತ್ಸವದ ಪ್ರಯುಕ್ತ ಮೆಗಾ ಆರೋಗ್ಯ ಶಿಬಿರವನ್ನು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಹಾಗೂ ಶ್ರೀ ಗುರು ಆಯುರ್ವೇದ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್, ದೇರಳಕಟ್ಟೆ ಇಲ್ಲಿಯ ನುರಿತ ವೈದ್ಯರ ತಂಡದವರಿAದ ಉಚಿತ ವೈದ್ಯಕೀಯ ತಪಾಸಣಾ ಹಾಗೂ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಜಪ್ಪಿನಮೊಗರುವಿನಲ್ಲಿ ಜರುಗಿತು.

ಕಾರ್ಯಕ್ರಮ ಉದ್ಗಾಟಿಸಿ ಮಾತಾನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ ಕಾಮತ್ ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್‌ರವರ ದಕ್ಷ ಮುಂದಾಳ್ವತದಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳ ಜೊತೆಗೆ ಉಚಿತ ವೈದ್ಯಕೀಯ ಶಿಬಿರಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿದೆ. ಇನ್ನು ಮುಂದೆಯೂ ಹೆಚ್ಚು ಹೆಚ್ಚು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಜನರ ಮೆಚ್ಚುಗೆಯನ್ನು ಪಡೆಯುವಂತಾಗಲಿ ಎಂದು ಹೇಳಿದರು. ಜನರು ಉಚಿತ ವೈದ್ಯಕೀಯ ಶಿಬಿರದಲ್ಲಿ ಸಿಗುವ ಸೌಲಭ್ಯವನ್ನು ಪಡೆದು, ಅದರ ಪ್ರಯೋಜನವನ್ನು ಪಡೆಯಬೇಕೆಂದು ವಿನಂತಿಸಿದರು. […]

ಮಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸಹಕಾರಿ ವ್ಯವಸ್ಥೆಯ ಮೂಲಕ 30.86 ಲಕ್ಷರೈತರಿಗೆ 20,810 ಕೋ. ರೂ. ಸಾಲ ವಿತರಿಸುವ ಗುರಿ ಇದ್ದು , ಈಗಾಗಲೇ 20 ಲಕ್ಷರೈತರಿಗೆ 14000 ಕೋಟಿ. ರೂ ಸಾಲ ವಿತರಿಸಲಾಗಿದೆ. ಇನ್ನುಳಿದ ರೈತರಿಗೆ ಸಾಲ ವಿತರಣೆಯನ್ನು ಮಾ.25 ರೊಳಗೆ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಅವರು ರವಿವಾರ ಮಂಗಳೂರಿನ ಪಡೀಲ್ ಬೈರಾಡಿಕೆರೆಯ ಬಳಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಆಡಳಿತ ಕಚೇರಿ ಮತ್ತು ಹಾಸ್ಟಲ್ ಒಳಗೊಂಡ 10 ಸಾವಿರ ಚದರಡಿ ವಿಸ್ತೀರ್ಣದ ಕಟ್ಟಡ ‘ಆತ್ಮಶಕ್ತಿ ಸೌಧ’ ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಆಡಳಿತ ಮಂಡಳಿ ಸಭಾಭವನವನ್ನು ಸಂಸದ ನಳಿನ್‌ಕುಮಾರ್ ಕಟೀಲು, ಕೇಂದ್ರಕಚೇರಿಯ ಶಾಖೆಯನ್ನು ಶಾಸಕ ಉಮಾನಾಥ ಕೋಟ್ಯಾನ್, ಆಡಳಿತ ಕಚೇರಿಯನ್ನು ವಿಧಾನ ಪರಿಷತ್ ಸದಸ್ಯ ಹರೀಶಕುಮಾರ್, ಹಾಸ್ಟೆಲ್ ಕಟ್ಟಡವನ್ನು ಕಿಯಾನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಭದ್ರತೆ ಕೊಠಡಿಯನ್ನು ಮುಡಾ ಅಧ್ಯಕ್ಷ ರವಿಶಂಕರ ಮಿಜಾರ್, […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ 2022ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಜರುಗಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್‍ರವರ ಗೌರವ ಉಪಸ್ಥಿತಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಕೆ. ರವರು ಸಂಘದ 2022ರ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸಂದೀಪ್ ಗರೋಡಿ, ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಮ್ಯಾನೆಜರ್ ಕಿಶೋರ್ ಕುಮಾರ್, ಕ್ಷೇತ್ರದ ಆಡಳಿತ ಮೋಕ್ತೆಸರರಾದ ಶ್ರೀ ದಾಮೋದರ ನಿಸರ್ಗ, […]