ಕಳೆದ ಹದಿನೆಂಟು ವರುಷಗಳಿಂದ ಪ್ರಕಾಶನ, ಸಮಾಜ ಸೇವೆ, ಆರೋಗ್ಯ, ಶೈಕ್ಷಣಿಕ ಸಹಾಯ, ಆರ್ಥಿಕ ಕೊಡುಗೆಗಳ ಮೂಲಕ ತನ್ನ ಸೇವಾಕಾರ್ಯಗಳನ್ನು ಅನುಚಾನವಾಗಿ ನಡೆಸಿಕೊಂಡು ಸಮಾಜಮುಖಿ ಚಿಂತನೆಗಳಿಗೆ ಪ್ರೇರಣೆ ಮಾದರಿಯಾಗಿರುವ ಮಂಗಳೂರಿನ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟಬಲ್ ಟ್ರಸ್ಟ್ ರಿ. ಇದರ ವತಿಯಿಂದ ಆತ್ಮಶಕ್ತಿ ವಿವಿದ್ಧೋದ್ದೇಶ ಸಹಕಾರಿ ಸಂಘ ನಿ.    ಇದರ ಸಹಕಾರದೊಂದಿಗೆ ಇತ್ತೀಚೆಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಭವನ, ಕೊಡಿಯಲ್ ಬೈಲ್ ಇಲ್ಲಿ ಜರುಗಿದ ಸರಳ ಕಾರ್ಯಕ್ರಮದಲ್ಲಿ ಕಡು ಬಡತನದ ಅಸಹಾಯಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಹಾಗೂ ಹೃದಯ ಸಂಬಂಧಿ ಅನಾರೋಗ್ಯ ಪೀಡಿತರಿಗೆ ಧನಸಹಾಯವನ್ನು ವಿತರಿಸಲಾಯಿತು.

ಆತ್ಮಶಕ್ತಿ ಪತ್ರಿಕೆಯ ಸಂಪಾದಕರು ಹಾಗೂ ಸ್ಥಾಪಕ ಟ್ರಸ್ಟಿಗಳೂ ಆದ ಶ್ರೀ ವಾಮನ್ ಕೆ. ಇವರು ಈ ಸಂದರ್ಭದಲ್ಲಿ ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟಬಲ್ ಟ್ರಸ್ಟಿನ ವತಿಯಿಂದ ಪ್ರತೀ ವರ್ಷ ಕಡೂ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುತ್ತಿದೆ, ಪ್ರಸ್ತುತ ಕೊರೋನ ಸಂಕಷ್ಟ ಕಾಲದಲ್ಲಿ ಆರ್ಥಿಕ ಅಡಚಣೆಯಿಂದ ಬಹಳಷ್ಟು ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರಿಸಲು ಆಗದೆ ಮೊಟಕುಗೊಳಿಸಿರುವುದನ್ನು ಮನಗಂಡು ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಕಾಲೇಜು ಶುಲ್ಕವನ್ನು ಭರಿಸುವುದರ ಮೂಲಕ ಹಾಗೂ ಅನಾರೋಗ್ಯ ಪೀಡಿತರಾದ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.)ದ 2019-20ನೇ ಸಾಲಿನ 9ನೇ ವಾರ್ಷಿಕ ಸಾಮಾನ್ಯ ಸಭೆಯು ಘನವೆತ್ತ ಕರ್ನಾಟಕ ರಾಜ್ಯ ಸರಕಾರದ ಆಜ್ಞಾನು ಪ್ರಕಾರ ವೀಡಿಯೋ ಕಾನ್ಫರೆನ್ಸ್/ವರ್ಚುವಲ್ ಮುಖಾಂತರ ದಿನಾಂಕ 18-12-2020 ರ ಶುಕ್ರವಾರ ಪೂರ್ವಾಹ್ನ 9.30 ಕ್ಕೆ ಸರಿಯಾಗಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಂಘದ 2019-20 ನೇ ಸಾಲಿನ ವಾರ್ಷಿಕ ವರದಿ, ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ರವರು ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಂಡಿಸಿದರು. ಸಂಘವು 2019-20 ನೇ ಸಾಲಿನಲ್ಲಿ 17 ಶಾಖೆಗಳನ್ನು ಹೊಂದಿದ್ದು, ತನ್ನ ಕಾರ್ಯವ್ಯಾಪ್ತಿಯನ್ನು ಉಡುಪಿ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳ ಸಹಿತ 5 ಜಿಲ್ಲೆಗಳಿಗೆ ವ್ಯಾಪಿಸಿರುತ್ತದೆ . ಸಂಘವು 2020-21 ನೇ ಆರ್ಥಿಕ ಸಾಲಿನಲ್ಲಿ ಇಂದಿನವರೆಗೆ ರೂ. 120 ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದ್ದು ಇದನ್ನು ಮಾರ್ಚ್ ಅಂತ್ಯಕ್ಕೆ ರೂ. 150 ಕೋಟಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ 2021ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಜರುಗಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್‍ರವರ ಗೌರವ ಉಪಸ್ಥಿತಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಕೆ. ರವರು ಸಂಘದ 2021ರ ಕ್ಯಾಲೆಂಡರ್‍ನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅರ್ಚಕರಾದ ಶ್ರೀ ಪೂವಪ್ಪ ಶಾಂತಿ, ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ಸಂಘದ ನಿರ್ದೇಶಕರಾದ ಶ್ರೀಮತಿ ಸುಜಯ ಹೇಮಚಂದ್ರ, ಶ್ರೀಮತಿ ಕುಶಲಾಕ್ಷಿ ಯಶವಂತ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಲೆಕ್ಕಧಿಕಾರಿ ಶ್ರೀ ವಿಶ್ವನಾಥ ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿ. ಮಂಗಳೂರು ಇವರ ಸಮನ್ವಯದಲ್ಲಿ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು ಇವರಿಂದ ಸಹಕಾರ ನಿರ್ವಹಣೆಯಲ್ಲಿ ಉನ್ನತ Diploma 19ನೇ ಅಧಿವೇಶನದ Rank ವಿಜೇತರಿಗೆ ಪದಕ ಪ್ರಧಾನ ಸಮಾರಂಭವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು, ಇದರ ನಿರ್ದೇಶಕರಾದ ಶ್ರೀ ಎಸ್.ಆರ್. ಸತೀಶ್ಚಂದ್ರರವರು ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿ 25 ವರ್ಷದ ಹಿಂದೆ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯ 3 ದಿನದ ತರಬೇತಿ ಶಿಬಿರದಲ್ಲಿ ಪಾಲ್ಕೊಂಡಿಯಿರುವುದನ್ನು ಸ್ಮರಸಿ ಪ್ರಸ್ತುತ ಇದರ ಸದಸ್ಯರಾಗಿರುವುದೂ ಹೆಮ್ಮೆಯ ವಿಷಯ ಎಂದರು, ಭಾರತ ದೇಶದಲ್ಲಿ ಹಾಲಿನ ಸಹಕಾರಿ ಸಂಘಗಳು ಬೆಳೆದು ಬಂದ ಹಾದಿ ಹಾಗೂ ಪ್ರಸ್ತುತ ಸಹಕಾರಿಗಳು ವರ್ಷವಿಡಿ ತಮ್ಮ ವಿವಿಧ ಕಾರ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು. ಸಹಕಾರಿ ಸಂಘಗಳ ಉಪನಿಬಂಧಕರಾದ ಶ್ರೀ […]

ಆರೋಗ್ಯ ಶಿಬಿರ ಕಾರ್ಯಕ್ರಮದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಸಂಘದ ಉಳ್ಳಾಲ ಶಾಖೆಯಲ್ಲಿ ನಡೆಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆ, ಬಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ಘಟಕ, ಬಂಡಿಕೊಟ್ಯ, ಉಳ್ಳಾಲ, ವಿದ್ಯಾರಣ್ಯ ಯುವಕ ವೃಂದ (ರಿ) ಮತ್ತು ವಿದ್ಯಾರಣ್ಯ ಕಲಾವೃಂದ, ಉಳ್ಳಾಲ ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ, ಬೋಳೂರು , ಸಮುದಾಯ ದಂತ ವಿಭಾಗ ಯೆನೆಪೆಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು ಇಲ್ಲಿಯ ನುರಿತ ವೈದ್ಯರ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಮುಲ್ಕಿ ಶಾಖೆ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮುಲ್ಕಿ ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ, ಬೋಳೂರು ಹಾಗೂ ಸಮುದಾಯ ದಂತ ವಿಭಾಗ ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಯನ್ಸಸ್ ಮತ್ತು ಆಸ್ಪತ್ರೆ ಅತ್ತಾವರ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿOದ ಉಚಿತ ವೈದ್ಯಕೀಯ ತಪಾಸಣಾ, ದಂತ ಚಿಕಿತ್ಸಾ ಮತ್ತು ಕಣ್ಣಿನ ತಪಾಸಣೆ ಶಿಬಿರವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಮುಲ್ಕಿಯ ನಾಗರಾಜ್ ಟವರ್ಸ್, ಬಿಲ್ಲವ ಸಮಾಜ ಸೇವಾ ಸಂಘದ ಎದುರುಗಡೆ ಜರುಗಿತು.

ಸಂಘದ ಹಿರಿಯ ಸದಸ್ಯರು ಹಾಗೂ ಮಾರ್ಗದರ್ಶಕರಾದ ಡಾ. ಹರೀಶ್ಚಂದ್ರ ಪಿ. ಸಾಲ್ಯಾನ್ ಇವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿದ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದರಿಂದ ಹಲವಾರು ಬಡ ಜನರಿಗೆ ಸಹಾಯವಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಈ ಸಂಸ್ಥೆಯು ವಿವಿಧ ಜನೋಪಯೋಗಿ ಕಾರ್ಯಕ್ರಮಗಳಿಂದ ಇನ್ನೂ ಉತ್ತಮ ರೀತಿಯಲ್ಲಿ ಮುನ್ನಡೆಯಲಿ ಎಂದು ಹಾರೈಸಿದರು. ಲಯನ್ಸ್ ಕ್ಲಬ್ ಮುಲ್ಕಿ ಇದರ ಅಧ್ಯಕ್ಷರಾದ ಶ್ರೀ ವೆಂಕಟೇಶ್ ಹೆಬ್ಬಾರ್ ಇವರು ಮಾತನಾಡಿ […]