ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ (ನಿ.) ಬೆಂಗಳೂರು ಇದರ 20ನೇ ವಾರ್ಷಿಕ ಸಾಮಾನ್ಯ ಸಭೆಯು ಕೆ.ಇ.ಬಿ ಇಂಜಿನಿಯರ್ಸ್, ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣ, ಸಿಲ್ವರ್ ಜುಬಿಲಿ ಬಿಲ್ಡಿಂಗ್, ಬೆಂಗಳೂರಿನಲ್ಲಿ ಮಹಾಮಂಡಳದ ಅಧ್ಯಕ್ಷರಾದ ಶ್ರೀ ವಿ. ರಾಜು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಾಮಾನ್ಯ ಸಭೆಯಲ್ಲಿ ರಾಜ್ಯದಲ್ಲಿ ಹೆಚ್ಚು ಮುದ್ರಾಂಕ ಶುಲ್ಕ ಪಡೆದು ಹಾಗೂ ಇ-ಸ್ಟಾಂಪಿ0ಗ್ ಪ್ರತಿಗಳನ್ನು ಮುದ್ರಿಸಿ ಮಾರಾಟ ಮಾಡಿರುವ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭವು ಜರುಗಿತು.

ಈ ಸಂದರ್ಭದಲ್ಲಿ 2023-24 ನೇ ಸಾಲಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ “ಅತಿ ಹೆಚ್ಚು ಮೊತ್ತದ ಇ-ಸ್ಟಾಂಪಿAಗ್ ಮುದ್ರಿಸಿರುವ ಸಂಘ” ಪ್ರಶಸ್ತಿಯನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಮಹಾಮಂಡಳದ ನಿರ್ದೇಶಕರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರ್ ರವರಿಗೆ ಮಹಾಮಂಡಳದ ಅಧ್ಯಕ್ಷರಾದ ಶ್ರೀ ವಿ. ರಾಜು ರವರು ನೀಡಿ ಗೌರವಿಸಿದರು. ಈ ಸನ್ಮಾನ ಸಮಾರಂಭದಲ್ಲಿ ಮಹಾಮಂಡಳ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಕೆ. ಲಲಿತ ಜಿ.ಟಿ. ದೇವೇಗೌಡ, ಉಪಾಧ್ಯಕ್ಷರಾದ ಶ್ರೀ ಕೆ. ಕೆ ಮಹೇಂದ್ರ ಪ್ರಸಾದ್ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2023-24ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2023-24” ಪ್ರಶಸ್ತಿಯನ್ನು ದಿನಾಂಕ 14/08/2024 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2023-24ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್‌ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. ಪ್ರಸ್ತುತ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ 33 ಶಾಖೆಗಳನ್ನು ಹೊಂದಿರುವ ಸಂಘವು, 2023-24ನೇ ಸಾಲಿನಲ್ಲಿ ದುಡಿಯುವ ಬಂಡವಾಳ 23652.68 ಲಕ್ಷ ಹೊಂದಿದ್ದು, ರೂ. 3.03 ಕೋಟಿಗೂ ಮಿಕ್ಕಿ ಲಾಭ ಗಳಿಸಿರುತ್ತದೆ. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಎಂ. ವಾದಿರಾಜ್ […]

ಮಂಗಳೂರಿನ ನಾರಾಯಣಗುರು ಯುವ ವೇದಿಕೆಯ ರಜತ ಸಂಭ್ರಮ ಸಲುವಾಗಿ ಇಲ್ಲಿನ ಪುರಭವನದಲ್ಲಿ ಬ್ರಹ್ಮಶ್ರೀ ಬಂಗಾರದ ಪದಕ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ, ಸಾಧನಾಶೀಲರಿಗೆ ಸನ್ಮಾನ ಕಾರ್ಯಕ್ರಮವು ಜರುಗಿತು. ನಾರಾಯಣ ಗುರು ಯುವ ವೇದಿಕೆ ಅಧ್ಯಕ್ಷ ಶ್ರೀ ಸುದರ್ಶನ್ ಕೊಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ.ಕೆ ಹರಿಪ್ರಸಾದ್‌ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರನ್ನು ಸನ್ಮಾನಿಸುವ ಮೂಲಕ ಗೌರವಿಸಿದರು. ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್, ಮಾಜಿ ಸಚಿವ ಶ್ರೀ ಕೃಷ್ಣ ಜೆ ಪಾಲೆಮಾರ್, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಶ್ರೀ ಪದ್ಮರಾಜ್ ಆರ್. ಪೂಜಾರಿ, ನಮ್ಮ ಕುಡ್ಲ ಸಂಸ್ಥೆಯ ಮುಖ್ಯಸ್ಥ ಶ್ರೀ ಲೀಲಾಕ್ಷ ಕರ್ಕೆರಾ, ಡೀನೆಟ್ ಮೆನೇಜಿಂಗ್ ಡೈರೆಕ್ಟರ್ ಶ್ರೀ […]

ರಾಷ್ಟಿಯ ಪತ್ರಿಕಾ ದಿನಾಚರಣೆ ಮತ್ತು ಸುವರ್ಣ ಕರ್ನಾಟಕ ಸಂಭ್ರಮದ ಪ್ರಯುಕ್ತ ಪತ್ರಕರ್ತರ ವೇದಿಕೆ ಬೆಂಗಳೂರು, ಡಾ. ಸಿದ್ದಯ್ಯ ಪುರಾಣಿಕ್ ಸ್ಮಾರಕ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಬೆಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭವು ಜರುಗಿತು.

ಸಹಕಾರ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ಸಲ್ಲಿಸಿದ ಅಭೂತಪೂರ್ವ ಸೇವೆಯನ್ನು ಗುರುತಿಸಿ ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಚಿಂತಕರು ಮತ್ತು ನಿವೃತ್ತ ಡಿ.ಸಿ.ಪಿ.ಯವರಾದ ಶ್ರೀ ಬಸವರಾಜ್ ಮಾಲಗತ್ತಿಯವರು ನೀಡಿ ಗೌರವಿಸಿದರು. ಈ ಕಾರ್ಯಕ್ರಮವು ಬೆಳಗಾಂನ ಹಿರಿಯ ನ್ಯಾಯವಾದಿಗಳಾದ ಶ್ರೀ ಕೆ.ಎಲ್ ಕುಂದರಗಿಯವರ ಸಮ್ಮೇಳನ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಶ್ರೀ ವಿ.ಎಸ್. ಕೃಷ್ಣ, ಹಿರಿಯ ಪತ್ರಕರ್ತರಾದ ಶ್ರೀ ಜಾಣಗೆರೆ ವೆಂಕಟರಾಮಯ್ಯ, […]

70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023 ಇದರ ಪ್ರಯುಕ್ತ ದಿನಾಂಕ 18.11.2023 ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.)ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ನಿ.) ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.), ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.), ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವರಾದ ಶ್ರೀ ಕೆ. ಎನ್. ರಾಜಣ್ಣ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್.ರಾಜೇಂದ್ರ ಕುಮಾರ್ ರವರ ಗೌರವ ಉಪಸ್ಥಿತಿಯಲ್ಲಿ, ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಜಿ.ಟಿ. ದೇವೇಗೌಡರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ 2023 ನೇ ಸಾಲಿನ “ಉತ್ತಮ ವಿವಿಧೋದ್ದೇಶ ಸಹಕಾರಿ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ […]

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ( ನಿ.) ಬೆಂಗಳೂರು ಇದರ ೧೯ ನೇ ವಾರ್ಷಿಕ ಸಾಮಾನ್ಯ ಸಭೆಯು ಕೆ.ಇ.ಬಿ ಇಂಜಿನಿಯರ್ಸ್,ಸರ್.ಎ ವಿಶ್ವೇಶ್ವರಯ್ಯ ಸಭಾಂಗಣ, ಸಿಲ್ವರ್ ಜುಬಿಲಿ ಬಿಲ್ಡಿಂಗ್, ಬೆಂಗಳೂರಿನಲ್ಲಿ ಮಹಾಮಂಡಳದ ಅಧ್ಯರಾದ ಆದ ಶ್ರೀಮತಿ ಕೆ. ಲಲಿತ ಜಿ. ಟಿ. ದೇವೇಗೌಡ ಇವರ ಅಧ್ಯಕ್ಷತೆಯಲ್ಲಿ ಜರುಗಿತು.ಈ ಸಾಮಾನ್ಯ ಸಭೆಯಲ್ಲಿ ರಾಜ್ಯದಲ್ಲಿ ಹೆಚ್ಚು ಮುದ್ರಾಂಕ ಶುಲ್ಕ ಪಡೆದು ಹಾಗೂ ಇ-ಸ್ಟಾಂಪಿಗ್ ಪ್ರತಿಗಳನ್ನು ಮುದ್ರಿಸಿ ಮಾರಾಟ ಮಾಡಿರುವ ಸಹಕಾರ ಸಂಘಗಳಿಗೆ ಸನ್ಮಾನ ಸಮಾರಂಭವು ಜರುಗಿತು.

ಈ ಸಂದರ್ಭದಲ್ಲಿ ೨೦೨೨-೨೩ ನೇ ಸಾಲಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ “ಅತಿ ಹೆಚ್ಚು ಮೊತ್ತದ ಇ ಸ್ಟಾಂಪಿAಗ್ ಮುದ್ರಿಸಿರುವ ಸಂಘ ಎಂಬ ಪ್ರಶಂಸಾ ಪಲಕವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಹಾಗೂ ಮಹಾಮಂಡಳದ ನಿರ್ದೇಶಕರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರ್ ರವರಿಗೆ ಮಹಾಮಂಡಳದ ಅಧ್ಯಕ್ಷೆ ಆದ ಶ್ರೀಮತಿ ಕೆ. ಲಲಿತ ಜಿ. ಟಿ. ದೇವೇಗೌಡ ಇವರು ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸನ್ಮಾನ ಸಮಾರಂಭದಲ್ಲಿ ಮಹಾಮಂಡಳ ಉಪಾಧ್ಯಕ್ಷರದ ಶ್ರೀ ಕೆ.ಕೆ ಮಹೇಂದ್ರ […]

ಕೊಪ್ಪಳ ಜಿಲ್ಲೆ ಕುಕನೂರಿನ ಕನ್ನಡ ಸಾಹಿತ್ಯ, ಅಭಿವೃದ್ಧಿ ಟ್ರಸ್ಟ್ ಹಾಗೂ ಮೈಸೂರಿನ ಚಿತ್ಕಲಾ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಅಖಿಲ ಕರ್ನಾಟಕ ೫ನೇ ಸಾಂಸ್ಕೃತಿಕ ಸಮ್ಮೇಳನ ಹಾಗೂ ಸಾಹಿತ್ಯೋತ್ಸವ- 2023 ಎಂಬ ಕಾರ್ಯಕ್ರಮ ಸೆಪ್ಟೆಂಬರ್ 10 ರ ಭಾನುವಾರದಂದು ಮೈಸೂರಿನಲ್ಲಿ ನಡೆಯಿತು.

“ವಿಜಯನಗರದಿಂದ ಮೈಸೂರು ಕಡೆಗೆ ಒಂದು ಸಾಂಸ್ಕೃತಿಕ ಪಯಣ – ಎಂಬ ಧ್ಯೇಯ ವಾಕ್ಯದಡಿಯಲ್ಲಿ ಈ ಕಾಯಕ್ರಮವು ಮೈಸೂರಿನ ಕುತ್ತೇತ್ತೂರು ಸೀತಾಮರಾವ್ ಭವನದಲ್ಲಿ ನಡೆಯಿತು. ಈ ಸಾಂಸ್ಕೃತಿಕ ಸಮ್ಮೇಳನ ಅಧ್ಯಕ್ಷರಾದ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಹಿರಿಯ ಸಾಹಿತಿಗಳಾದ ಡಾ.ಕೆ ಮಹಾದೇವ ನಾಯಕ್‌ರವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಪೂಜ್ಯ ಶ್ರೀ ಶಶಿಶೇಖರ ದೀಕ್ಷಿತ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರ್ ಇವರಿಗೆ […]

ಐಕಾನ್ಸ್ ಆಫ್ ಇಂಡಿಯನ್ ಬುಸಿನೆಸ್ ಮ್ಯಾಗಸಿನ್ ನೀಡುತ್ತಿರುವ ಕರ್ನಾಟಕ ಗ್ಲೋರಿ ಅವಾರ್ಡ್ಸ್ – 2023, ಪ್ರಶಸ್ತಿ ಪ್ರಧಾನ ಸಮಾರಂಭವು ಬೆಂಗಳೂರಿನ ಗಾಂಧಿನಗರದಲ್ಲಿ ನಡೆಯಿತು. ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸಾಧನೆಗಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‍ರವರಿಗೆ ಸೂಕ್ಷ, ಇಲೆಕ್ಟ್ರೋನಿಕ್ಸ್ ಸಿಸ್ಟಮ್ಸ್ ವಿನ್ಯಾಸ ಮತ್ತು ಉತ್ಪಾದನೆ ಹಾಗೂ ಮಾಹಿತಿ ತಂತ್ರಜ್ನಾನದ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ ಭಾರತೀಯ ಒಕ್ಕೂಟದ ಮಹಾನಿರ್ದೇಶಕರು ಮತ್ತು ಸಂಸ್ಥಾಪಕರಾದ ಶ್ರೀ ಜೈರಾಜ್ ಶ್ರೀನಿವಾಸ್‍ರವರು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ “ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‍ಶಿಪ್ ಅವಾರ್ಡ್ -2023 ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಮುಖ್ಯ ಅತಿಥಿಗಳಾಗಿ ಕಿಮ್ಸ್‍ನ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರಾದ ಡಾ|| ಟಿ ಎಂ, ಅಂಜನಪ್ಪ, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯ ಅಂತರಾಷ್ಟ್ರೀಯ ವ್ಯವಹಾರಗಳ ಸಮಿತಿಯ ಅಧ್ಯಕ್ಷರಾದ ಉಮಾ ರೆಡ್ಡಿ, ಬೆಂಗಳೂರು ವಿಸ್ತಾರ ನ್ಯೂಸ್‍ನ ಉಪಾಧ್ಯಕ್ಷರಾದ ಶ್ರೀ ನವನೀತ್ ಸಿ.ಎಂ, ಯುಕೊ ಬ್ಯಾಂಕಿನ ಕರ್ನಾಟಕ ವಲಯದ ಡಿಜಿಎಮ್ ಶ್ರೀ ಮನೋಜ್ ಕುಮಾರ್ ಸಾಹು, ಬೆಂಗಳೂರಿನ ಗ್ಲೋಬಲ್ ಪಿ.ಸಿ.ಸಿ.ಎಸ್ ಇದರ ಸಂಸ್ಥಾಪಕರಾದ ಶ್ರೀ ಪ್ರಭಾಕರ್ ವೈ.ಬಿ. , ಐಕಾನ್ಸ್ ಆಫ್ ಇಂಡಿಯನ್ ಬುಸಿನೆಸ್ ಮ್ಯಾಗಸಿನ್‍ನ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ದಶಮಾನೋತ್ಸವದ ಪ್ರಯುಕ್ತ ಕೋ-ಆಪರೇಟರ್ಸ್ ಕ್ಲಬ್, ಮಂಗಳೂರು ಇವರ ಸಹಭಾಗಿತ್ವದಲ್ಲಿ ದ.ಕ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಸಹಕಾರಿ ಕ್ರೀಡಾ ಸಂಗಮವು ವಿಶ್ವವಿದ್ಯಾಲಯ ಕಾಲೇಜು, ಹಂಪನಕಟ್ಟೆ, ಮಂಗಳೂರು ಇದರ ಕ್ರೀಡಾಂಗಣದಲ್ಲಿ ಜರುಗಿತು.

ಮಂಗಳ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಕೆ.ಜೆ.ದೇವಾಡಿಗ ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಕ್ರೀಡಾ ಸಂಗಮಕ್ಕೆ ಚಾಲನೆ ನೀಡಿದರು. ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಎ.ಎಸ್. ವೆಂಕಟೇಶ್ ಇವರು ಕ್ರೀಡಾ ಧ್ವಜಾರೋಹಣ ನಡೆಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್, ವಿಶ್ವಕರ್ಮ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಹರೀಶ್ ಆಚಾರ್, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ […]

69ನೇ ಅಖಿಲ ಭಾರತ ಸಹಕಾರ ಸಪ್ತಾಹ 2022 ಇದರ ಪ್ರಯುಕ್ತ ದಿನಾಂಕ 18.11.2022 ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿಯಮಿತ, ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ, ಮಂಗಳೂರು ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ರಿ., ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು,ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ರಾಜ್ಯದ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮದಲ್ಲಿಕರ್ನಾಟಕ ರಾಜ್ಯಸರ್ಕಾರ ಮಾನ್ಯ ಸಹಕಾರಿ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಸ್ ಟಿ ಸೋಮಶೇಖರ್ ರವರ ಗೌರವ ಉಪಸ್ಥಿತಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ “ಉತ್ತವi ಸಹಕಾರ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ನೀಡಿ ಗೌರವಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ […]