ತುಳುನಾಡ ರಕ್ಷಣಾ ವೇದಿಕೆ ಹಾಗೂ ತುಳುನಾಡ ಸೂರ್ಯ ಪತ್ರಿಕೆ ವತಿಯಿಂದ ಸಹಕಾರ ಸಪ್ತಾಹ-2025ರ ಅಂಗವಾಗಿ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷರಾದ ಶ್ರೀ ಯೋಗಿಶ್ ಶೆಟ್ಟಿ ಜಪ್ಪು ರವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಉರ್ವಸ್ಟೋರ್‌ನ ತುಳುಭವನದ ಸಿರಿ ಚಾವಡಿಯಲ್ಲಿ ಜರುಗಿತು.

ಸಮಾರಂಭದಲ್ಲಿ ದಿವ್ಯ ಸಾನ್ನಿದ್ಯವನ್ನು ವಹಿಸಿದ್ದ ಮೂಡಬಿದಿರೆ ಜೈನ ಮಠದ ಜಗದ್ಗುರು ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಆಶೀರ್ವಚನವನ್ನು ನೀಡುತ್ತಾ “ಮಾನವ ಆದಿಯಿಂದಲೂ ಹುಟ್ಟಿನಾರಭ್ಯ ಸಹಕಾರ ತತ್ವದಿಂದಲೇ ಬದುಕನ್ನು ಬಹುವಾಗಿ ಸಿರಿವಂತಗೊಳಿಸಿದವ. ಅದರ ಮುಂದುವರಿದ ಭಾಗವೇ ಇಂದಿನ ಸಹಕಾರ ಸಂಘಗಳ ಸೇವಾ ಭಾವ, ಮನುಕುಲೋದ್ದಾರಕ್ಕೆ ಸಹಕಾರಿ ಸಂಘಗಳು ಮತ್ತಷ್ಟೂ ಹಿರಿದಾದ ಪಾಲನ್ನು ಸಲ್ಲಿಸುವಂತಾಗಲಿ. ಈ ನಿಟ್ಟಿನಲ್ಲಿ ಇವತ್ತಿನ ಈ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿರುವ ತುಳುನಾಡ ರಕ್ಷಣಾ ವೇದಿಕೆಯ ಕಾರ್ಯವು ಶ್ಲಾಘನೀಯ” ಎಂದು ಹರಸಿದರು. ಮಾಡೂರಿನ ಶಿವ ದುರ್ಗಾಂಭ […]

ಅಖಿಲ ಭಾರತ ಸಹಕಾರ ಸಪ್ತಾಹ 2025 ಇದರ ಪ್ರಯುಕ್ತ ದಿನಾಂಕ 16.11.2025 ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.) ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (.) ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.), ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.), ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ದ ಸಹಕಾರ ಸಂಘಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಜಿ.ಟಿ. ದೇವೇಗೌಡರು ರವರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್. ರಾಜೇಂದ್ರ ಕುಮಾರ್ ರವರ ಗೌರವ ಉಪಸ್ಥಿತಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ 2025 ನೇ ಸಾಲಿನ “ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರಿಗೆ ನೀಡಿ ಗೌರವಿಸಿದರು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2024-25” ಪ್ರಶಸ್ತಿಯನ್ನು ದಿನಾಂಕ 30.08.2025 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್‌ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. ಪ್ರಸ್ತುತ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ 33 ಶಾಖೆಗಳನ್ನು ಹೊಂದಿರುವ ಸಂಘವು, 2024-25ನೇ ಸಾಲಿನಲ್ಲಿ ದುಡಿಯುವ ಬಂಡವಾಳ ರೂ. 25749.48 ಲಕ್ಷ ಹೊಂದಿದ್ದು, ರೂ. 3.06 ಕೋಟಿಗೂ ಮಿಕ್ಕಿ ಲಾಭ ಗಳಿಸಿರುತ್ತದೆ. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಎಂ. […]

ಒಳಮೊಗ್ರು ಗ್ರಾಮದ ಪರ್ಪುಂಜದಲ್ಲಿರುವ ಇತಿಹಾಸ ಪ್ರಸಿದ್ಧ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಶ್ರೀ ಬ್ರಹ್ಮಬೈದೇರುಗಳ ಜಾತ್ರೋತ್ಸವವು ಜರುಗಿತು. ಜಾತ್ರೋತ್ಸವದ ಅಂಗವಾಗಿ ನಡೆದ ಶ್ರೀ ಕೂರೇಲುಗುತ್ತು ಸುಬ್ಬಪ್ಪ ಪೂಜಾರಿ ಧರ್ಮಚಾವಡಿಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ರವರು ದೀಪ ಬೆಳಗಿಸಿ, ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಧರ್ಮದ ಅರಿವು ನಮ್ಮಲ್ಲಿ ಬರಬೇಕಾದರೆ ನಾವು ಧರ್ಮ ಗ್ರಂಥಗಳನ್ನು ಓದುವವರಾಗಬೇಕು, ಕೇವಲ ಭಾಷಣದಿಂದ ನಮ್ಮಲ್ಲಿ ಧರ್ಮದ ಅರಿವು ಮೂಡಲು ಅಸಾಧ್ಯ ಪುಸ್ತಕ ಭಂಡಾರದಿ0ದ ಹಾಗೂ ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ನಮ್ಮಲ್ಲಿ ಧರ್ಮದ ಅರಿವು ಹೆಚ್ಚಾಗಲು ಸಾಧ್ಯವಿದೆ” ಎಂದರು.

ಈ ಕಾರ್ಯಕ್ರಮದಲ್ಲಿ ರಾಮಜಾಲು ಗರಡಿಯ ಗೌರವವಾಗಿ “ರಾಮಜಾಲು ಗರಡಿ ಗೌರವ ಪ್ರಶಸ್ತಿ’ಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರಿಗೆ ಪ್ರದಾನ ಮಾಡಿದರು. ಪ್ರತಿಷ್ಠಿತ “ರಾಮಜಾಲು ಗರಡಿ ಗೌರವ” ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮಂಗಳೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು, “ರಾಮಜಾಲುವಿನ ಗರಡಿ […]

71ನೇ ಅಖಿಲ ಭಾರತ ಸಹಕಾರ ಸಪ್ತಾಹ 2024 ಇದರ ಪ್ರಯುಕ್ತ ದಿನಾಂಕ 16.11.2024 ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.)ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ನಿ.) ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.), ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.), ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವರಾದ ಶ್ರೀ ಕೆ. ಎನ್. ರಾಜಣ್ಣ , ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಜಿ.ಟಿ. ದೇವೇಗೌಡರು ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್. ರಾಜೇಂದ್ರ ಕುಮಾರ್ ರವರ ಗೌರವ ಉಪಸ್ಥಿತಿಯಲ್ಲಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕರಾದ ಶ್ರೀ ಲಕ್ಷ್ಮಣ ಸಂಗಪ್ಪ ಸವದಿ ಯವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ೨೦೨೪ ನೇ ಸಾಲಿನ […]

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ (ನಿ.) ಬೆಂಗಳೂರು ಇದರ 20ನೇ ವಾರ್ಷಿಕ ಸಾಮಾನ್ಯ ಸಭೆಯು ಕೆ.ಇ.ಬಿ ಇಂಜಿನಿಯರ್ಸ್, ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣ, ಸಿಲ್ವರ್ ಜುಬಿಲಿ ಬಿಲ್ಡಿಂಗ್, ಬೆಂಗಳೂರಿನಲ್ಲಿ ಮಹಾಮಂಡಳದ ಅಧ್ಯಕ್ಷರಾದ ಶ್ರೀ ವಿ. ರಾಜು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಾಮಾನ್ಯ ಸಭೆಯಲ್ಲಿ ರಾಜ್ಯದಲ್ಲಿ ಹೆಚ್ಚು ಮುದ್ರಾಂಕ ಶುಲ್ಕ ಪಡೆದು ಹಾಗೂ ಇ-ಸ್ಟಾಂಪಿ0ಗ್ ಪ್ರತಿಗಳನ್ನು ಮುದ್ರಿಸಿ ಮಾರಾಟ ಮಾಡಿರುವ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭವು ಜರುಗಿತು.

ಈ ಸಂದರ್ಭದಲ್ಲಿ 2023-24 ನೇ ಸಾಲಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ “ಅತಿ ಹೆಚ್ಚು ಮೊತ್ತದ ಇ-ಸ್ಟಾಂಪಿAಗ್ ಮುದ್ರಿಸಿರುವ ಸಂಘ” ಪ್ರಶಸ್ತಿಯನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಮಹಾಮಂಡಳದ ನಿರ್ದೇಶಕರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರ್ ರವರಿಗೆ ಮಹಾಮಂಡಳದ ಅಧ್ಯಕ್ಷರಾದ ಶ್ರೀ ವಿ. ರಾಜು ರವರು ನೀಡಿ ಗೌರವಿಸಿದರು. ಈ ಸನ್ಮಾನ ಸಮಾರಂಭದಲ್ಲಿ ಮಹಾಮಂಡಳ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಕೆ. ಲಲಿತ ಜಿ.ಟಿ. ದೇವೇಗೌಡ, ಉಪಾಧ್ಯಕ್ಷರಾದ ಶ್ರೀ ಕೆ. ಕೆ ಮಹೇಂದ್ರ ಪ್ರಸಾದ್ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2023-24ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2023-24” ಪ್ರಶಸ್ತಿಯನ್ನು ದಿನಾಂಕ 14/08/2024 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2023-24ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್‌ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. ಪ್ರಸ್ತುತ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ 33 ಶಾಖೆಗಳನ್ನು ಹೊಂದಿರುವ ಸಂಘವು, 2023-24ನೇ ಸಾಲಿನಲ್ಲಿ ದುಡಿಯುವ ಬಂಡವಾಳ 23652.68 ಲಕ್ಷ ಹೊಂದಿದ್ದು, ರೂ. 3.03 ಕೋಟಿಗೂ ಮಿಕ್ಕಿ ಲಾಭ ಗಳಿಸಿರುತ್ತದೆ. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಎಂ. ವಾದಿರಾಜ್ […]

ಮಂಗಳೂರಿನ ನಾರಾಯಣಗುರು ಯುವ ವೇದಿಕೆಯ ರಜತ ಸಂಭ್ರಮ ಸಲುವಾಗಿ ಇಲ್ಲಿನ ಪುರಭವನದಲ್ಲಿ ಬ್ರಹ್ಮಶ್ರೀ ಬಂಗಾರದ ಪದಕ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ, ಸಾಧನಾಶೀಲರಿಗೆ ಸನ್ಮಾನ ಕಾರ್ಯಕ್ರಮವು ಜರುಗಿತು. ನಾರಾಯಣ ಗುರು ಯುವ ವೇದಿಕೆ ಅಧ್ಯಕ್ಷ ಶ್ರೀ ಸುದರ್ಶನ್ ಕೊಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ.ಕೆ ಹರಿಪ್ರಸಾದ್‌ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರನ್ನು ಸನ್ಮಾನಿಸುವ ಮೂಲಕ ಗೌರವಿಸಿದರು. ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್, ಮಾಜಿ ಸಚಿವ ಶ್ರೀ ಕೃಷ್ಣ ಜೆ ಪಾಲೆಮಾರ್, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಶ್ರೀ ಪದ್ಮರಾಜ್ ಆರ್. ಪೂಜಾರಿ, ನಮ್ಮ ಕುಡ್ಲ ಸಂಸ್ಥೆಯ ಮುಖ್ಯಸ್ಥ ಶ್ರೀ ಲೀಲಾಕ್ಷ ಕರ್ಕೆರಾ, ಡೀನೆಟ್ ಮೆನೇಜಿಂಗ್ ಡೈರೆಕ್ಟರ್ ಶ್ರೀ […]

ರಾಷ್ಟಿಯ ಪತ್ರಿಕಾ ದಿನಾಚರಣೆ ಮತ್ತು ಸುವರ್ಣ ಕರ್ನಾಟಕ ಸಂಭ್ರಮದ ಪ್ರಯುಕ್ತ ಪತ್ರಕರ್ತರ ವೇದಿಕೆ ಬೆಂಗಳೂರು, ಡಾ. ಸಿದ್ದಯ್ಯ ಪುರಾಣಿಕ್ ಸ್ಮಾರಕ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಬೆಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭವು ಜರುಗಿತು.

ಸಹಕಾರ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ಸಲ್ಲಿಸಿದ ಅಭೂತಪೂರ್ವ ಸೇವೆಯನ್ನು ಗುರುತಿಸಿ ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಚಿಂತಕರು ಮತ್ತು ನಿವೃತ್ತ ಡಿ.ಸಿ.ಪಿ.ಯವರಾದ ಶ್ರೀ ಬಸವರಾಜ್ ಮಾಲಗತ್ತಿಯವರು ನೀಡಿ ಗೌರವಿಸಿದರು. ಈ ಕಾರ್ಯಕ್ರಮವು ಬೆಳಗಾಂನ ಹಿರಿಯ ನ್ಯಾಯವಾದಿಗಳಾದ ಶ್ರೀ ಕೆ.ಎಲ್ ಕುಂದರಗಿಯವರ ಸಮ್ಮೇಳನ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಶ್ರೀ ವಿ.ಎಸ್. ಕೃಷ್ಣ, ಹಿರಿಯ ಪತ್ರಕರ್ತರಾದ ಶ್ರೀ ಜಾಣಗೆರೆ ವೆಂಕಟರಾಮಯ್ಯ, […]

70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023 ಇದರ ಪ್ರಯುಕ್ತ ದಿನಾಂಕ 18.11.2023 ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.)ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ನಿ.) ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.), ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.), ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವರಾದ ಶ್ರೀ ಕೆ. ಎನ್. ರಾಜಣ್ಣ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್.ರಾಜೇಂದ್ರ ಕುಮಾರ್ ರವರ ಗೌರವ ಉಪಸ್ಥಿತಿಯಲ್ಲಿ, ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಜಿ.ಟಿ. ದೇವೇಗೌಡರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ 2023 ನೇ ಸಾಲಿನ “ಉತ್ತಮ ವಿವಿಧೋದ್ದೇಶ ಸಹಕಾರಿ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ […]