ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ( ನಿ.) ಬೆಂಗಳೂರು ಇದರ ೧೯ ನೇ ವಾರ್ಷಿಕ ಸಾಮಾನ್ಯ ಸಭೆಯು ಕೆ.ಇ.ಬಿ ಇಂಜಿನಿಯರ್ಸ್,ಸರ್.ಎ ವಿಶ್ವೇಶ್ವರಯ್ಯ ಸಭಾಂಗಣ, ಸಿಲ್ವರ್ ಜುಬಿಲಿ ಬಿಲ್ಡಿಂಗ್, ಬೆಂಗಳೂರಿನಲ್ಲಿ ಮಹಾಮಂಡಳದ ಅಧ್ಯರಾದ ಆದ ಶ್ರೀಮತಿ ಕೆ. ಲಲಿತ ಜಿ. ಟಿ. ದೇವೇಗೌಡ ಇವರ ಅಧ್ಯಕ್ಷತೆಯಲ್ಲಿ ಜರುಗಿತು.ಈ ಸಾಮಾನ್ಯ ಸಭೆಯಲ್ಲಿ ರಾಜ್ಯದಲ್ಲಿ ಹೆಚ್ಚು ಮುದ್ರಾಂಕ ಶುಲ್ಕ ಪಡೆದು ಹಾಗೂ ಇ-ಸ್ಟಾಂಪಿಗ್ ಪ್ರತಿಗಳನ್ನು ಮುದ್ರಿಸಿ ಮಾರಾಟ ಮಾಡಿರುವ ಸಹಕಾರ ಸಂಘಗಳಿಗೆ ಸನ್ಮಾನ ಸಮಾರಂಭವು ಜರುಗಿತು.

ಈ ಸಂದರ್ಭದಲ್ಲಿ ೨೦೨೨-೨೩ ನೇ ಸಾಲಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ “ಅತಿ ಹೆಚ್ಚು ಮೊತ್ತದ ಇ ಸ್ಟಾಂಪಿAಗ್ ಮುದ್ರಿಸಿರುವ ಸಂಘ ಎಂಬ ಪ್ರಶಂಸಾ ಪಲಕವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಹಾಗೂ ಮಹಾಮಂಡಳದ ನಿರ್ದೇಶಕರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರ್ ರವರಿಗೆ ಮಹಾಮಂಡಳದ ಅಧ್ಯಕ್ಷೆ ಆದ ಶ್ರೀಮತಿ ಕೆ. ಲಲಿತ ಜಿ. ಟಿ. ದೇವೇಗೌಡ ಇವರು ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸನ್ಮಾನ ಸಮಾರಂಭದಲ್ಲಿ ಮಹಾಮಂಡಳ ಉಪಾಧ್ಯಕ್ಷರದ ಶ್ರೀ ಕೆ.ಕೆ ಮಹೇಂದ್ರ […]

ಕೊಪ್ಪಳ ಜಿಲ್ಲೆ ಕುಕನೂರಿನ ಕನ್ನಡ ಸಾಹಿತ್ಯ, ಅಭಿವೃದ್ಧಿ ಟ್ರಸ್ಟ್ ಹಾಗೂ ಮೈಸೂರಿನ ಚಿತ್ಕಲಾ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಅಖಿಲ ಕರ್ನಾಟಕ ೫ನೇ ಸಾಂಸ್ಕೃತಿಕ ಸಮ್ಮೇಳನ ಹಾಗೂ ಸಾಹಿತ್ಯೋತ್ಸವ- 2023 ಎಂಬ ಕಾರ್ಯಕ್ರಮ ಸೆಪ್ಟೆಂಬರ್ 10 ರ ಭಾನುವಾರದಂದು ಮೈಸೂರಿನಲ್ಲಿ ನಡೆಯಿತು.

“ವಿಜಯನಗರದಿಂದ ಮೈಸೂರು ಕಡೆಗೆ ಒಂದು ಸಾಂಸ್ಕೃತಿಕ ಪಯಣ – ಎಂಬ ಧ್ಯೇಯ ವಾಕ್ಯದಡಿಯಲ್ಲಿ ಈ ಕಾಯಕ್ರಮವು ಮೈಸೂರಿನ ಕುತ್ತೇತ್ತೂರು ಸೀತಾಮರಾವ್ ಭವನದಲ್ಲಿ ನಡೆಯಿತು. ಈ ಸಾಂಸ್ಕೃತಿಕ ಸಮ್ಮೇಳನ ಅಧ್ಯಕ್ಷರಾದ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಹಿರಿಯ ಸಾಹಿತಿಗಳಾದ ಡಾ.ಕೆ ಮಹಾದೇವ ನಾಯಕ್‌ರವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಪೂಜ್ಯ ಶ್ರೀ ಶಶಿಶೇಖರ ದೀಕ್ಷಿತ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರ್ ಇವರಿಗೆ […]

ಐಕಾನ್ಸ್ ಆಫ್ ಇಂಡಿಯನ್ ಬುಸಿನೆಸ್ ಮ್ಯಾಗಸಿನ್ ನೀಡುತ್ತಿರುವ ಕರ್ನಾಟಕ ಗ್ಲೋರಿ ಅವಾರ್ಡ್ಸ್ – 2023, ಪ್ರಶಸ್ತಿ ಪ್ರಧಾನ ಸಮಾರಂಭವು ಬೆಂಗಳೂರಿನ ಗಾಂಧಿನಗರದಲ್ಲಿ ನಡೆಯಿತು. ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸಾಧನೆಗಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‍ರವರಿಗೆ ಸೂಕ್ಷ, ಇಲೆಕ್ಟ್ರೋನಿಕ್ಸ್ ಸಿಸ್ಟಮ್ಸ್ ವಿನ್ಯಾಸ ಮತ್ತು ಉತ್ಪಾದನೆ ಹಾಗೂ ಮಾಹಿತಿ ತಂತ್ರಜ್ನಾನದ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ ಭಾರತೀಯ ಒಕ್ಕೂಟದ ಮಹಾನಿರ್ದೇಶಕರು ಮತ್ತು ಸಂಸ್ಥಾಪಕರಾದ ಶ್ರೀ ಜೈರಾಜ್ ಶ್ರೀನಿವಾಸ್‍ರವರು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ “ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‍ಶಿಪ್ ಅವಾರ್ಡ್ -2023 ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಮುಖ್ಯ ಅತಿಥಿಗಳಾಗಿ ಕಿಮ್ಸ್‍ನ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರಾದ ಡಾ|| ಟಿ ಎಂ, ಅಂಜನಪ್ಪ, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯ ಅಂತರಾಷ್ಟ್ರೀಯ ವ್ಯವಹಾರಗಳ ಸಮಿತಿಯ ಅಧ್ಯಕ್ಷರಾದ ಉಮಾ ರೆಡ್ಡಿ, ಬೆಂಗಳೂರು ವಿಸ್ತಾರ ನ್ಯೂಸ್‍ನ ಉಪಾಧ್ಯಕ್ಷರಾದ ಶ್ರೀ ನವನೀತ್ ಸಿ.ಎಂ, ಯುಕೊ ಬ್ಯಾಂಕಿನ ಕರ್ನಾಟಕ ವಲಯದ ಡಿಜಿಎಮ್ ಶ್ರೀ ಮನೋಜ್ ಕುಮಾರ್ ಸಾಹು, ಬೆಂಗಳೂರಿನ ಗ್ಲೋಬಲ್ ಪಿ.ಸಿ.ಸಿ.ಎಸ್ ಇದರ ಸಂಸ್ಥಾಪಕರಾದ ಶ್ರೀ ಪ್ರಭಾಕರ್ ವೈ.ಬಿ. , ಐಕಾನ್ಸ್ ಆಫ್ ಇಂಡಿಯನ್ ಬುಸಿನೆಸ್ ಮ್ಯಾಗಸಿನ್‍ನ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ದಶಮಾನೋತ್ಸವದ ಪ್ರಯುಕ್ತ ಕೋ-ಆಪರೇಟರ್ಸ್ ಕ್ಲಬ್, ಮಂಗಳೂರು ಇವರ ಸಹಭಾಗಿತ್ವದಲ್ಲಿ ದ.ಕ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಸಹಕಾರಿ ಕ್ರೀಡಾ ಸಂಗಮವು ವಿಶ್ವವಿದ್ಯಾಲಯ ಕಾಲೇಜು, ಹಂಪನಕಟ್ಟೆ, ಮಂಗಳೂರು ಇದರ ಕ್ರೀಡಾಂಗಣದಲ್ಲಿ ಜರುಗಿತು.

ಮಂಗಳ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಕೆ.ಜೆ.ದೇವಾಡಿಗ ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಕ್ರೀಡಾ ಸಂಗಮಕ್ಕೆ ಚಾಲನೆ ನೀಡಿದರು. ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಎ.ಎಸ್. ವೆಂಕಟೇಶ್ ಇವರು ಕ್ರೀಡಾ ಧ್ವಜಾರೋಹಣ ನಡೆಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್, ವಿಶ್ವಕರ್ಮ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಹರೀಶ್ ಆಚಾರ್, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ […]

69ನೇ ಅಖಿಲ ಭಾರತ ಸಹಕಾರ ಸಪ್ತಾಹ 2022 ಇದರ ಪ್ರಯುಕ್ತ ದಿನಾಂಕ 18.11.2022 ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿಯಮಿತ, ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ, ಮಂಗಳೂರು ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ರಿ., ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು,ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ರಾಜ್ಯದ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮದಲ್ಲಿಕರ್ನಾಟಕ ರಾಜ್ಯಸರ್ಕಾರ ಮಾನ್ಯ ಸಹಕಾರಿ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಸ್ ಟಿ ಸೋಮಶೇಖರ್ ರವರ ಗೌರವ ಉಪಸ್ಥಿತಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ “ಉತ್ತವi ಸಹಕಾರ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ನೀಡಿ ಗೌರವಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ […]

ಶ್ರೀ ಅಂಬಲಪಾಡಿ ದೇವಾಲಯದ ಆಶ್ರಯದಲ್ಲಿ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯ ವತಿಯಿಂದ ಕನ್ನಡ ಸೇವಾ ಸಂಘ ಪಾವಾಯಿ ಇದರ ಬೆಳ್ಳಿ ಹಬ್ಬ ಹಾಗೂ ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಗೌರವಾರ್ಥ ಪ್ರಪ್ರಥಮ ಮುಂಬೈ ವಾಪಸಿಗರ ಸಮ್ಮಿಲನ ಕಾರ್ಯಕ್ರಮದಲ್ಲಿ “ತುಳುನಾಡ ರಜತ ಸಿರಿ ರಾಜ್ಯ ಪ್ರಶಸ್ತಿ” ಹಾಗೂ “ತುಳುನಾಡ ರಜತ ಸಂಘ ಸಿರಿ” ಗೌರವ ಪ್ರಶಸ್ತಿ ಪ್ರಧಾನ ಸಮಾರಂಭವು ಶ್ರೀ ಮಹಾಕಾಳಿ ಮತ್ತು ಜನಾರ್ದನ ದೇವಸ್ಥಾನದ ಭವಾನಿ ಮಂಟಪದಲ್ಲಿ ಜರುಗಿತು.

ಈ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶೇಷ ಸಾಧನೆಗಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ “ತುಳುನಾಡ ರಜತ ಸಂಘ ಸಿರಿ” ಗೌರವ ಪ್ರಶಸ್ತಿಯನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‍ರವರಿಗೆ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸೇವಾ ಸಂಘ ಪಾವಾಯಿ ಇದರ ಸ್ಥಾಪಕಾಧ್ಯಕ್ಷರಾದ ಡಾ. ಶೇಖರ ಅಜೆಕಾರುರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಮಹಾಕಾಳಿ ಮತ್ತು ಜನಾರ್ದನ ದೇವಾಲಯದ ಆಡಳಿತ ಮೊಕ್ತೇಸರರಾದ ಡಾ. ನಿ. ಬೀ. ವಿಜಯ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2021-22ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2021-22” ಪ್ರಶಸ್ತಿಯನ್ನು ದಿನಾಂಕ 05.08.2022 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2021-22ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಬಿ. ನಿರಂಜನ್, ಶ್ರೀ ಎಂ. ವಾದಿರಾಜ್ ಶೆಟ್ಟಿ, ಶ್ರೀ ಸದಾಶಿವ ಉಳ್ಳಾಲ್, ಶ್ರೀ ಎಸ್.ರಾಜು ಪೂಜಾರಿ, ಶ್ರೀ ಶಶಿಕುಮಾರ್ ರೈ ಬಿ., ಶ್ರೀ ರಾಜೇಶ್ ರಾವ್, ಶ್ರೀ ಎಸ್.ಬಿ.ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಶ್ರೀ ಮೋನಪ್ಪ ಶೆಟ್ಟಿ ಎಕ್ಕಾರು, ಶ್ರೀ ಕೆ. ಜೈರಾಜ್ ಬಿ. ರೈ, ಶ್ರೀ […]

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಹಾಗೂ ಚಂದನ ಸಾಹಿತ್ಯ ವೇದಿಕೆ ಸುಳ್ಯ ಜಂಟಿಯಾಗಿ ಆಯೋಜಿಸಿದ್ದ ಭಾವೈಕ್ಯತಾ ಕವಿಗೋಷ್ಠಿ ಮತ್ತು ಸಜ್ಜನ ಚಂದನ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭವು ರೋಟರಿ ಟ್ರಸ್ಟ ಹಾಲ್ ಪುತ್ತೂರಿನಲ್ಲಿ ಖ್ಯಾತ ಹಿರಿಯ ಸಾಹಿತಿಗಳಾದ ಶ್ರೀ ನಾರಾಯಣ ರೈ ಕುಕ್ಕುವಳ್ಳಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತರಾದ ಅಕ್ಷರ ಸಂತ ಹರೇಕಳ ಹಾಜಬ್ಬರವರು ಹಾಗೂ ಖ್ಯಾತ ಹಿರಿಯ ಸಾಹಿತಿಗಳಾದ ಶ್ರೀ ನಾರಾಯಣ ರೈ ಕುಕ್ಕುವಳ್ಳಿಯವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರಿಗೆ ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸಾಧನೆಗಾಗಿ “ಸಜ್ಜನ ಚಂದನ ಸದ್ಭಾವನಾ ಪ್ರಶಸ್ತಿ” ಯನ್ನು ಪ್ರದಾನ ಮಾಡಿದರು. ಶ್ರೀಯುತರು ಸಹಕಾರ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯೊಂದಿಗೆ ಸೇವೆಗೈದು ರಾಜ್ಯದಲ್ಲಿ ಅಲ್ಲದೆ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಇವರಿಗೆ 2016ರಲ್ಲಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2019-20ನೇ ಸಾಲಿನ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಹಾಗೂ ಬ್ಯಾಂಕ್‍ನೊಂದಿಗೆ ಉತ್ತಮ ಭಾಂದವ್ಯ ಹೊಂದಿರುವುದಕ್ಕೆ ಅಭಿನಂದಿಸಿ “ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2019-20” ಪ್ರಶಸ್ತಿಯನ್ನು ದಿನಾಂಕ 27.11.2020 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2019-20ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್.ರಾಜೇಂದ್ರಕುಮಾರ್ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿ ಗೌರವಿಸಿದರು.

ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ ನಿರ್ದೇಶಕರುಗಳಾದ ಶ್ರೀ ಬಿ. ನಿರಂಜನ್, ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಎಸ್.ರಾಜು ಪೂಜಾರಿ, ಶ್ರೀ ಕೆ.ಎಸ್. ದೇವರಾಜ್, ಶ್ರೀ ಎಂ.ವಾದಿರಾಜ್ ಶೆಟ್ಟಿ, ಶ್ರೀ ಶಶಿಕುಮಾರ್ ರೈ ಬಿ., ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಎಸ್.ಬಿ.ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಶ್ರೀ ಕೆ. ಹರಿಶ್ಚಂದ್ರ, ಶ್ರೀ ಎಂ. ಮಹೇಶ್ ಹೆಗ್ಡೆ, ಶ್ರೀ ಬಿ. ಅಶೋಕ್ ಕುಮಾರ್ ಶೆಟ್ಟಿ, ಶ್ರೀ ಮೋನಪ್ಪ […]

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ಸಹಕಾರ ಇಲಾಖೆ ಮತ್ತು ಇತರ ಎಲ್ಲಾ ವಿಧದ ಮಹಾಮಂಡಳ ಹಾಗೂ ಸಹಕಾರ ಸಂಘಗಳ ಸಹಯೋಗದೊಂದಿಗೆ 67ನೇ ಅಖಿಲ ಭಾರತ ಸಹಕಾರಿ ಸಪ್ತಾಹ 2020 ಇದರ ಪ್ರಯುಕ್ತ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಸಹಕಾರ ಕ್ಷೇತ್ರದಲ್ಲಿ ಸಾಧನೆಗೈದ ದ.ಕ ಮತ್ತು ಉಡುಪಿ ಜಿಲ್ಲೆಗಳ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ , ಶ್ರೇಷ್ಠ ಸಹಕಾರಿ ಗಳಿಗೆ ಪ್ರಶಸ್ತಿ, ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವಿಶೇಷ ಪ್ರಶಸ್ತಿ ಹಾಗೂ ಉತ್ತಮ ನವೋದಯ ಸ್ವಸಹಾಯ ಸಂಘಗಳಿಗೆ ರಾಜ್ಯದ ಉತ್ತಮ ಸಹಕಾರ ಸಂಘಗಳಿಗೆ ಪುರಸ್ಕಾರ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಮಾನ್ಯ ಶ್ರೀ ನಳಿನ್ ಕುಮಾರ್ ಕಟೀಲುರವರು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ ಡಿ. ಕಾಮತ್ ರವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರು ಆದ ಸಹಕಾರ ರತ್ನ ಡಾ! ಎಂ. ಎನ್. ರಾಜೇಂದ್ರ ಕುಮಾರ್ ರವರ ಗೌರವ ಉಪಸ್ತಿತಿಯಲ್ಲಿ ಕರ್ನಾಟಕ ಸರ್ಕಾರದ ಸಹಕಾರ ಸಚಿವರಾದ ಮಾನ್ಯ […]