ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ನಡೆದ 71 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜ ಸೇವೆ ಸಂಘ ಸಂಸ್ಥೆ ಕ್ಷೇತ್ರದಲ್ಲಿ ಅನುಪಮ ಸಾಧನೆಯನ್ನು ಮಾಡಿದ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರಿಗೆ ನೀಡಿ ಗೌರವಿಸಿದರು.

ಈ ಸಮಾರಂಭದಲ್ಲಿ ಶಾಸಕರಾದ ಯು.ಟಿ.ಖಾದರ್, ಡಾ! ವೈ. ಭರತ್ ಶೆಟ್ಟಿ, ಡಿ. ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜ, ಭೋಜೇಗೌಡ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ವಾಮನ್ ಕೆ., ಶ್ರೀ ಜಿ. ಪರಮೇಶ್ವರ […]

ಅಂತಾರಾಷ್ಟ್ರೀಯ ಮಾನವ ಹಕ್ಕುಗಳು ಪ್ರಶಸ್ತಿ ಪ್ರಧಾನ ಸಮಾರಂಭವು ಡಿಸೆಂಬರ್ 25ರಂದು ಪ್ರಬೋಧಂಕರ್ ಥಾಕ್ರೆ ಆಡಿಟೋರಿಯಂ, ಮುಂಬೈ ಯಲ್ಲಿ ಅಂತರಾಷ್ರೀಯ ಮಾನವ ಹಕ್ಕುಗಳು ಪೀಪಲ್ಸ್ ಕೌನ್ಸಿಲ್ ಇದರ ಅಧ್ಯಕ್ಷರಾದ ಲಯನ್ ಡಾ. ಶಂಕರ್ ಕೆ. ಶೆಟ್ಟಿ, ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಅನಿವಾಸಿ ಭಾರತೀಯ ಹಾಗೂ ಬಹರೈನ್ ರಾಷ್ಟ್ರೀಯ ಮಾನವ ಹಕ್ಕುಗಳ ಅಧ್ಯಕ್ಷರಾದ ಶ್ರೀ ಲೀಲಾದರ್ ಬೈಕಂಪಾಡಿ ಇವರು ಉದ್ಘಾಟಿದರು. ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರು ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸಾಧನೆಗಾಗಿ ಅಂತರಾಷ್ರೀಯ ಮಾನವ ಹಕ್ಕುಗಳ ಭಾರತ ರತ್ನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಿದರು. ಶ್ರೀಯುತರು ಸಹಕಾರ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯೊಂದಿಗೆ ಸೇವೆಗೈದು ರಾಜ್ಯದಲ್ಲಿ ಅಲ್ಲದೆ ರಾಷ್ಟ್ರ […]

66ನೇ ಅಖಿಲ ಭಾರತ ಸಹಕಾರಿ ಸಪ್ತಾಹ 2019 ಇದರ ಪ್ರಯುಕ್ತ ದಿನಾಂಕ 18.11.2019ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.ಬೆಂಗಳೂರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ಸಹಕಾರ ಇಲಾಖೆ ಮತ್ತು ಇತರ ಎಲ್ಲಾ ವಿಧದ ಮಹಾಮಂಡಳ ಹಾಗೂ ಸಹಕಾರ ಸಂಘಗಳ ಸಹಯೋಗದೊಂದಿಗೆ ಉಡುಪಿಯಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ರಾಜ್ಯದ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಮಾನ್ಯ ಶ್ರೀ ಎನ್. ಗಂಗಣ್ಣನವರ ಗೌರವ ಉಪಸ್ತಿತಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ “ಉತ್ತಮ ಸಹಕಾರ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಮುಖ್ಯಕಾರ್ಯನೀರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ನೀಡಿ ಗೌರವಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಘುಪತಿ ಭಟ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ […]