ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಗಣ್ಯರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ತದನಂತರ ಮಾತಾನಾಡಿದ ಸಂಘದ ಅಧ್ಯಕ್ಷರು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ಸಂಘದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ಶ್ರೀ ಪತಾಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ (ರಿ.) ಇದರ ರಾಜ್ಯ ಸಂಚಾಲಕರಾದ ಶ್ರೀ ರವೀಶ್ ರವರು ಸಂಘದ ಸಿಬ್ಬಂದಿಗಳಿಗೆ ಯೋಗಾಸನ ಮಾಡಿಸುವ ಮೂಲಕ ಯೋಗ ದಿನಾಚರಣೆಯನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಶ್ರೀ ಪತಾಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ […]
Category: News & Events
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೊಟ್ಟಾರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಯುವವಾಹಿನಿ (ರಿ.) ಮಂಗಳೂರು ಘಟಕ, ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ , ಪ್ರಗತಿ ಮಹಿಳಾ ಮಂಡಲ (ರಿ.) ಉರ್ವಸ್ಟೋರ್ ಹಾಗೂ ಬ್ರಹ್ಮ ಕುಮಾರೀಸ್ ಮಂಗಳೂರು, ಇವರುಗಳ ಸಂಯುಕ್ತ ಆಶ್ರಯದಲ್ಲಿ ಪ್ರಗತಿ ಮಹಿಳಾ ಮಂಡಲ (ರಿ.) ಶ್ರೀ ಮಹಾಗಣಪತಿ ದೇವಸ್ಥಾನದ ಹತ್ತಿರ, ಉರ್ವಸ್ಟೋರ್ ಇಲ್ಲಿ ಜರುಗಿತು .
ಈ ಕಾರ್ಯಕ್ರಮವನ್ನು ಬ್ರಹ್ಮ ಕುಮಾರಿ ಜಯಶ್ರೀ ಇವರು ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ತುಂಬಾ ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದೆ. ಪ್ರತಿಯೊಬ್ಬರಿಗೂ ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ಇರುವ ಸಂದರ್ಭದಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸುವ ಮೂಲಕ ಸ್ವಸ್ಥ ಆರೋಗ್ಯ ಪೂರ್ಣ ಸಮಾಜಕ್ಕೆ ಮಹತ್ತರವಾದ ಕೊಡುಗೆಯನ್ನು ನೀಡುತ್ತಿದೆ. ಶಾರೀರಿಕ ಆರೋಗ್ಯದ ಜೊತೆಗೆ ಮನಸ್ಥಿತಿಯು ಚೆನ್ನಾಗಿರಬೇಕು. ಈ ನಿಟ್ಟಿನಲ್ಲಿ ಧ್ಯಾನವು ತುಂಬಾ ಪ್ರಯೋಜನಕಾರಿಯಾಗಿದೆ. ಉತ್ತಮ ಆರೋಗ್ಯಕ್ಕಾಗಿ ಔಷಧಿಗಳ ಜೊತೆಗೆ ಪ್ರತಿ ದಿನ […]
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ನೀರುಮರ‍್ಗ ಶಾಖೆಯ ೨ನೇ ವರ‍್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ (ರಿ.) ಸುಬ್ರಹ್ಮಣ್ಯ ನಗರ,ನೀರುಮರ‍್ಗ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ (ರಿ.) ನೀರುಮರ‍್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ಸಭಾಭವನ, ನೀರುಮರ‍್ಗದಲ್ಲಿ ಜರುಗಿತು . ಈ ಕರ‍್ಯಕ್ರಮವನ್ನು ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ (ರಿ.) ನೀರುಮರ‍್ಗ ಇದರ ಗೌರವ ಸಲಹೆಗಾರರಾದ ಶ್ರೀ ಎನ್ ಪ್ರೇಮಚಂದ್ರ ಭಟ್ ಇವರ ಗೌರವ ಉಪಸ್ಥಿತಿಯಲ್ಲಿ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ (ರಿ.) ನೀರುಮರ‍್ಗ ಇದರ ಅಧ್ಯಕ್ಷರಾದ ಶ್ರೀ ಶೇಷಾಧ್ರಿ ಭಟ್ ಇವರು ಉದ್ಘಾಟಿಸಿದರು.
ನವಚೇತನ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ಸಿಎ.ಅನಂತಪದ್ಮನಾಭ ಇವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತನ್ನ ಲಾಭಾಂಶದಲ್ಲಿ ಒಂದು ಭಾಗವನ್ನು ಇಂತಹ ಉಚಿತ ಆರೋಗ್ಯ ಶಿಬಿರ ಹಾಗೂ ಸಮಾಜಮುಖಿ ಕೆಲಸಗಳಿಗೆ ವಿನಿಯೋಗಿಸುವುದು ಸಂತಸದ ವಿಷಯ. ನಾನು ಸಂಘದ ಪ್ರಗತಿಯನ್ನು ಕಂಡಾಗ ಪ್ರತಿಯೊಂದು ಕರ‍್ಯಕ್ರಮಗಳು ಗ್ರಾಹಕಸ್ನೇಹಿಯಾಗಿ ಸಂಘವು ಅತೀ ಕಡಿಮೆ ಅವಧಿಯಲ್ಲಿ ಶಾಖೆಗಳನ್ನು ತೆರೆದು ಆ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು. ಅತಿಥಿಗಳಾಗಿ ಭಾಗವಾಹಿಸಿದ ಇಂಜಿನಿಯರ್ ಸತೀಶ್ ಕುಮಾರ್ ಕುಂಡೇವು ಮಾತನಾಡಿ ಸುಬ್ರಹ್ಮಣ್ಯ ಭಜನಾ ಮಂದಿರದಲ್ಲಿ […]
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ಸಸಿನೆಡುವ ಕಾರ್ಯಕ್ರಮವನ್ನು ಸಂಘದ ಪ್ರಧಾನ ಕಛೇರಿ “ಆತ್ಮಶಕ್ತಿ ಸೌಧ” ಪಡೀಲ್ ಇಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು “ಪರಿಸರ ಸೇವಾ ರತ್ನ” ರಾಜ್ಯ ಪ್ರಶಸ್ತಿ ಪುರಸ್ಕöÈತರು ಹಾಗೂ ತಾರಸಿ ಕೃಷಿಕರಾದ ಶ್ರೀ ಕೃಷ್ಣಪ್ಪ ಗೌಡ ಪಡ್ಡಂಬೈಲ್ ರವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರು ಮನೆಯಲ್ಲಿ ಒಂದು ಗಿಡವನ್ನು ಬೆಳೆಸಬೇಕು. ಗಿಡ ನೆಡುವುದರ ಜೊತೆಗೆ ನೆಟ್ಟ ಗಿಡಗಳನ್ನು ಚೆನ್ನಾಗಿ ಪೋಷಿಸಿ ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಮನೆಯ […]
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ಮಾಡೂರು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಶಿರಡಿ ಸಾಯಿಬಾಬಾ ಮಂದಿರ (ರಿ.) ಮಾಡೂರು ಇವರ ಜಂಟಿ ಸಹಯೋಗದೊಂದಿಗೆ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿAದ ಉಚಿತ ದಂತ ತಪಾಸಣೆ ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ನುರಿತ ತಜ್ಞ ವೈದ್ಯರ ತಂಡದವರಿOದ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ ಮಾತೃಶ್ರೀ ಕಾಂಪ್ಲೆಕ್ಸ್, ಮಾಡೂರು ಶಾಖೆಯ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.
ಈ ಕಾರ್ಯಕ್ರಮವನ್ನು ಸಮುದಾಯ ದಂತ ಆರೋಗ್ಯ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳ ಕಟ್ಟೆ ಇಲ್ಲಿನ ವೈದ್ಯರಾದ ಡಾ| ಶ್ರೀಮತಿ ಅಪೂರ್ವ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ ಸಮಾಜದ ಎಲ್ಲಾ ಜನರು ಉದ್ಯೋಗದ ಜೊತೆ ತಮ್ಮ ಆರೋಗ್ಯದ ಕಾಲಜಿಯನ್ನು ನೋಡಿಕೊಳ್ಳಬೇಕು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಯ ಹಸಿರು ಕಾರ್ಡನ್ನು ವಿತರಿಸಲಾಗುವುದು ಶಿಬಿರಾರ್ಥಿಗಳು ಇದರ ಸದುಪಯೋಗವನ್ನು ಪಡೆಡುಕೊಳ್ಳಬೇಕೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ […]
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಹಿರಿಯ ನ್ಯಾಯವಾದಿ ಪಿ.ಪಿ ಹೆಗ್ಡೆಯವರಿಗೆ ಸನ್ಮಾನ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ಅಧ್ಯಕ್ಷತೆಯಲ್ಲಿ ಜರುಗಿತು.
ರಾಜ್ಯದ ಎಲ್ಲಾ ಸಹಕಾರಿ ಸಂಘಗಳ ಪರವಾಗಿ ಉಚ್ಚ ನ್ಯಾಯಾಲಯದಲ್ಲಿ ಸಹಕಾರ ಸಂಘಗಳಿಗೆ ಹೊರಡಿಸಿದ ರಾಜ್ಯ ಸರಕಾರದ ಸುತ್ತೋಲೆ “ಕೃಷಿಯೇತರ ಪತ್ತಿನ ಸಹಕಾರಿ ಸಂಘಗಳು, ವಿವಿಧೋದ್ದೇಶ ಸಹಕಾರ ಸಂಘಗಳು ಸಂಗ್ರಹಿಸುತ್ತಿರುವ ಠೇವಣಿಗೆ ಮತ್ತು ವಿತರಿಸುವ ಸಾಲಗಳಿಗೆ ಬಡ್ಡಿದರ ನಿಗಧಿ ಪಡಿಸಿರುವ ಕುರಿತು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ೧೯೫೯ರ ಪ್ರಕರಣ ೩೦ಬಿ ಅಡಿಯಲ್ಲಿ ನಿರ್ದೇಶನ ನೀಡುವ ಕುರಿತು” ಉಚ್ಚ ನ್ಯಾಯಾಲಯದಲ್ಲಿ ಉಚಿತವಾಗಿ ವಾದವನ್ನು ಮಂಡಿಸಿ ನ್ಯಾಯಾಲಯದಲ್ಲಿ ತಡೆಯಾಜ್ಞೆಯನ್ನು ಒದಗಿಸಿಕೊಟ್ಟ ಹಿರಿಯ ನ್ಯಾಯವಾದಿಗಳಾದ ಶ್ರೀ ಪದ್ಮ ಪ್ರಸಾದ್ ಹೆಗ್ಡೆಯವರಿಗೆ ಜಿಲ್ಲೆಯ […]
ಟರ್ಟಲ್‌ಮಿಂಟ್ ಬ್ರೋಕಿಂಗ್ ಇನ್ಸೂರೆನ್ಸ್ ಕಂಪೆನಿಯ ರಿಟೇಲ್ ಬಿಸಿನೆಸ್‌ನಲ್ಲಿ ೨೦೨೩-೨೪ನೇ ಸಾಲಿನಲ್ಲಿ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರಿಗೆ ಟರ್ಟಲ್‌ಮಿಂಟ್ ಬ್ರೋಕಿಂಗ್ ಇನ್ಸೂರೆನ್ಸ್ ಕಂಪೆನಿಯ ಮಂಗಳೂರಿನ ಬ್ಯುಸಿನೆಸ್ ಮ್ಯಾನೇಜರ್ ಆದ ಶ್ರೀಮತಿ ಶ್ವೇತಾ ದಿನೇಶ್‌ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಗೋಪಾಲ್ ಎಮ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಲಹೆಗಾರರಾದ ಶ್ರೀ ಅಶೋಕ್ ಕುಮಾರ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ ಮತ್ತಿತ್ತರರು ಉಪಸ್ಥಿತರಿದ್ದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ಸೇವೆಯ ಜೊತೆಗೆ ಆರೋಗ್ಯ ಪೂರ್ಣ ಸ್ವಸ್ಥ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಆರೋಗ್ಯ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದೆ. ಟರ್ಟಲ್‌ಮಿಂಟ್ ಬ್ರೋಕಿಂಗ್ ಇನ್ಸೂರೆನ್ಸ್ ಕಂಪೆನಿಯ ಜೊತೆ ಒಡಂಬಡಿಕೆ ಮಾಡಿಕೊಂಡು ಆರೋಗ್ಯ, ವಾಹನ ಹಾಗೂ ಜೀವ ವಿಮಾ ಸೇವೆಯನ್ನು ಸಂಘದ ಸದಸ್ಯರಿಗೆ ಸ್ಮರ್ಧಾತಕ ದರದಲ್ಲಿ ನೀಡುತ್ತಾ ಬರುತ್ತಿದ್ದು, ಹೆಚ್ಚಿನ ಗ್ರಾಹಕರು ಇದರ ಪ್ರಯೋಜನವನ್ನು ಪಡೆದಿದ್ದಾರೆ. ಸಂಘವು ವಿಮಾ ಕ್ಷೇತ್ರದಲ್ಲಿ ಪ್ರತೀ ವರ್ಷ ಗರಿಷ್ಟ ಗುರಿಯನ್ನು ತಲುಪುತ್ತಿದ್ದು, ಸಾಧನೆಗೆ ಸತತ ೮ ವರ್ಷಗಳಿಂದ ವಿವಿಧ […]
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ ದಶಮಾನೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸದಸ್ಯರಾದ ಶ್ರೀ ಚಂದಪ್ಪ ಕುಂದರ್ ಹಾಗೂ ಶ್ರೀ ಪ್ರದೀಪ್ ಕುಮಾರ್ ಸುವರ್ಣ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಪ್ರದೀಪ್ ಕುಮಾರ್ ಸುವರ್ಣ ಇವರು ಆತ್ಮಶಕ್ತಿಯ ಪ್ರಗತಿಯಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಚುರುಕುತನ ಹಾಗೂ ಸಿಬ್ಬಂದಿಗಳ ನಗುಮೊಗದ ಸೇವೆಯಿಂದಾಗಿ ಅತೀ ಹೆಚ್ಚಿನ ವ್ಯವಹಾರ ಹೊಂದಲು ಕಾರಣವೆಂದು ಶ್ಲಾಘಿಸಿದರು. ಸಂಘವು ಅತೀ ಕಿರು ಅವಧಿಯಲ್ಲಿ ಸ್ವಂತ ಕಟ್ಟಡ ಹೊಂದಿ ಸಹಕಾರ ರಂಗದಲ್ಲಿಯೇ ಅತೀ ಉತ್ತಮ ಸ್ಥಾನ ಗಳಿಸಿದೆ. ಸಂಘದಲ್ಲಿ ಸದಸ್ಯರು ಪಡೆದ ಸಾಲವನ್ನು ಸರಿಯಾಗಿ ಮರುಪಾವತಿ ಮಾಡಿದ್ದಲ್ಲಿಮಾತ್ರ ಲಾಭ ಗಳಿಸಲು ಸಾಧ್ಯವಿದೆ ಎಂದರು.
ಸಂಘದ ಸದಸ್ಯರಾದ ಶ್ರೀ ಮಾಧವ ಎಮ್ ಅಮೀನ್ ರವರು ಮಾತನಾಡಿ ಸಿಬ್ಬಂದಿಗಳು ದೊಡ್ದ ಆಲದ ಮರದ ಬೇರುಗಳಿದ್ದಂತೆ. ಬೇರುಗಳು ಎಲ್ಲಾ ಕಡೆ ಹರಡಿ ಮರವನ್ನು ಭದ್ರವಾಗಿ ನಿಲ್ಲಿಸುವಲ್ಲಿ ಕಾರಣವಾಗುತ್ತದೆ. ಅಂತೆಯೇ ಸಿಬ್ಬಂದಿಗಳು ಸಂಘವನ್ನು ಮುನ್ನಡೆಸುವಲ್ಲಿ ಕಾರಣಕರ್ತರೆಂದು ಶ್ಲಾಘಿಸಿದರು. ಶ್ರೀ ವೈ ಕೃಷ್ಣಮೂರ್ತಿ ರಾವ್ ರವರು ಮಾತನಾಡಿ ಸಂಘದಲ್ಲಿ ೯೫% ಮಹಿಳಾ ಸಿಬ್ಬಂದಿಗಳು ಇದ್ದು, ಇದು ಮಹಿಳಾ ಸಬಲೀಕರಣಕ್ಕೆ ಕಾರಣವಾಗಿದ್ದು, ೧೦ ವರ್ಷಗಳಲ್ಲಿ ೩೦ ಶಾಖೆಗಳನ್ನು ತೆರೆದು ಎಲ್ಲಾ ಶಾಖೆಗಳಲ್ಲಿ ಶಾಖಾಧಿಕಾರಿಗಳು ಮಹಿಳೆಯರೇ ಇರುವುದನ್ನು ಶ್ಲಾಘಿಸಿದರು. ಶ್ರೀ ವಿಶ್ವನಾಥ್ […]
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಘದ ಪ್ರಧಾನ ಕಛೇರಿ ಪಡೀಲ್‌ನಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾದನೆಗೈದಿರುವ ಸಾಧಕ ಮಹಿಳೆಯರಾದ ಸಿ.ಸಿ.ಬಿ ಕ್ರೆöÊಮ್, ಮಂಗಳೂರು ಇದರ ಸಹಾಯಕ ಪೋಲೀಸ್ ಆಯುಕ್ತರಾಗಿರುವ ಶ್ರೀಮತಿ ಗೀತಾ ಕುಲಕರ್ಣಿ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ಇವರಿಗೆ “ಆತ್ಮಸಮ್ಮಾನ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ನೀಡಿ ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿ.ಸಿ.ಬಿ. ಕ್ರೆöÊಮ್, ಮಂಗಳೂರು ಇದರ ಸಹಾಯಕ ಪೋಲೀಸ್ ಆಯುಕ್ತರಾಗಿರುವ ಶ್ರೀಮತಿ ಗೀತಾ ಕುಲಕರ್ಣಿ “ಹೆಣ್ಣು ಎಲ್ಲರಿಗೂ ಆದರ್ಶಪ್ರಾಯಳು. ಏಕೆಂದರೆ ಎಲ್ಲಾ ಕೆಲಸಗಳನ್ನು ನಿಭಾಯಿಸಬಲ್ಲ ಶಕ್ತಿಯನ್ನು ಹೊಂದಿರುತ್ತಾಳೆ. ಒಂದು ಕಡೆ ಮನೆ ಜವಾಬ್ದಾರಿ, ಇನ್ನೊಂದು ಕಡೆ ಮನೆ , ಮಕ್ಕಳ ಜವಾಬ್ದಾರಿಯ ಜೊತೆ ಕೆಲಸದ ಹೊಣೆಗಾರಿಕೆ. ಹೆಣ್ಣು ಸಹನಾಮಯಿ, ಹಾಗೂ ಹೆಣ್ಣು ಮನಸ್ಸು ಮಾಡಿದರೆ ಯಾವುದೇ ಕೆಲಸವನ್ನು ಯಾವುದೇ ಹಿಂಜರಿಕೆ ಇಲ್ಲದೆ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲೇ ನಿಭಾಯಿಸುವಳು ಎಂದು ಕೆಲವು ಆದರ್ಶ ಮಹಿಳೆಯರ ಹೆಸರುಗಳನ್ನು […]
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ಅಳದಂಗಡಿ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಜೆಸಿಐ ಬೆಳ್ತಂಗಡಿ ಮಂಜುಶ್ರೀ, ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ, ನಾರಾಯಣ ಗುರು ಸ್ವಾಮಿ ಸೇವಾ ಸಂಘ ಅಳದಂಗಡಿ ವಲಯ, ರೋಟರಿ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮತ್ತು ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ವೈದರ ತಂಡದವರಿAದ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಭಾರತೀಯ ಅಂಚೆ ಇಲಾಖೆ- ಬೆಳ್ತಂಗಡಿ ವಿಭಾಗದ ವತಿಯಿಂದ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವು ಶ್ರೀಗುರು ಸಭಾಭವನ , ಅಳದಂಗಡಿ ಇಲ್ಲಿ ನಡೆಸಲಾಯಿತು.
ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ, ಇದರ ಅಧ್ಯಕ್ಷರಾದ ಶ್ರೀಯುತ ರಂಜಿತ್ ಯಚ್.ಡಿ ಇವರು ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಶಿಬಿರವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಾಡುತ್ತಿರುವುದು ಒಂದು ಒಳ್ಳೆಯ ಕೆಲಸ, ಯಾಕೆಂದರೆ ಆರೋಗ್ಯದಿಂದ ಇದ್ದರೆ ಮಾತ್ರ ಬೇರೆ ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯ. ಈ ಆರೋಗ್ಯ ಶಿಬಿರದ ಮುಖ್ಯ ಉದ್ದೇಶವೆನೆಂದರೆ ಮಂಗಳೂರಿಗೆ ಹೋಗಿ ಆರೋಗ್ಯ ತಪಾಸಣೆ ಮಾಡುವುದು ಕೆಲವರಿಗೆ ಅಸಾಧ್ಯ ಅಂತವರಿಗೆ ಈ ಶಿಬಿರವು ತುಂಬಾ ಸಹಕಾರಿಯಾಗುತ್ತದೆ. ಇಂತಹ ಉತ್ತಮ ಸಮಾಜಮುಖಿ ಕಾರ್ಯವನ್ನು ಮಾಡಿರುವ […]