ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ಮಾತನಾಡಿ ಸಂಘದ ಅಭಿವೃದ್ಧಿಯಲ್ಲಿ ಆಡಳಿತ ಮಂಡಳಿಯೊಂದಿಗೆ ಸಿಬ್ಬಂದಿ ವರ್ಗ, ಎಲ್ಲಾ ಸದಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ಪ್ರತಿ ವರ್ಷದಂತೆ ಈ ವರ್ಷŒವು ಸಂಘವು ಹೆಚ್ಚಿನ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಸಂಘವು 2022-23 ನೇ ಆರ್ಥಿಕ ವರ್ಷದಲ್ಲಿ ರೂ 2 ಸಾವಿರ ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿ ಎರಡೂವರೆ ಕೋಟಿ ಲಾಭಗಳಿಸುವಲ್ಲಿ ಸದಸ್ಯರು ಹಾಗೂ ಗ್ರಾಹಕರು ನಮ್ಮಲ್ಲಿ ವಿಶ್ವಾಸವಿಟ್ಟು ವ್ಯವಹಾರ ನಡೆಸಿರುವುದೇ ಸಾಧನೆ ಎಂದರು. ಸಂಘದಲ್ಲಿ ಲಭ್ಯವಿರುವ […]








