ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸ0ಘ (ನಿ) ಬಿ.ಸಿ ರೋಡ್ ಶಾಖೆ ಇದರ 7ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಗ್ರಾಹಕರಾದ ಶ್ರೀ ರಮಾನಾಥ ಕಾರಂದೂರು, ಶ್ರೀ ರೋನಾಲ್ಡ್ ಡಿ’ಸೋಜ ಮತ್ತು ಶ್ರೀಮತಿ ಪ್ರೇಮರವರು ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಗ್ರಾಹಕರಾದ ಶ್ರೀ ರೋನಾಲ್ಡ್ ಡಿ’ಸೋಜರವರು “ಸಂಘದ ಸಿಬ್ಬಂದಿಗಳ ಶೀಘ್ರ ಹಾಗೂ ನಗು ಮೊಗದ ಸೇವೆ ಮತ್ತು ಆಡಳಿತ ಮಂಡಳಿಯವರ ಭಾವನಾತ್ಮಕ ಸೇವೆಯಿಂದ ಗ್ರಾಹಕರ ವ್ಯವಹಾರಕ್ಕೆ ಬಹಳ ಸಹಕಾರಿಯಾಗಿದೆ. ಈ ಸೇವೆ ಆತ್ಮಶಕ್ತಿ ಸಹಕಾರಿ ಸಂಘದಲ್ಲಿ ಸಿಗುತ್ತಿದೆ” ಎಂದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಸಂಘವು ಮಾಡಿರುವ ಸಾಧನೆ ಹಾಗೂ ಸಂಘವು ತಮ್ಮ ಗ್ರಾಹಕರಿಗೆ ನಿರಂತರವಾಗಿ ಆಯ್ದ ಸರಕಾರಿ ರಜಾ ದಿನಗಳಲ್ಲೂ ಇ-ಸ್ಟ್ಯಾಂಪ್ ಸೇವೆಯನ್ನು […]

ಅಂತಾರಾಷ್ಟ್ರೀಯ ಮಾನವ ಹಕ್ಕುಗಳು ಪ್ರಶಸ್ತಿ ಪ್ರಧಾನ ಸಮಾರಂಭವು ಡಿಸೆಂಬರ್ 25ರಂದು ಪ್ರಬೋಧಂಕರ್ ಥಾಕ್ರೆ ಆಡಿಟೋರಿಯಂ, ಮುಂಬೈ ಯಲ್ಲಿ ಅಂತರಾಷ್ರೀಯ ಮಾನವ ಹಕ್ಕುಗಳು ಪೀಪಲ್ಸ್ ಕೌನ್ಸಿಲ್ ಇದರ ಅಧ್ಯಕ್ಷರಾದ ಲಯನ್ ಡಾ. ಶಂಕರ್ ಕೆ. ಶೆಟ್ಟಿ, ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಅನಿವಾಸಿ ಭಾರತೀಯ ಹಾಗೂ ಬಹರೈನ್ ರಾಷ್ಟ್ರೀಯ ಮಾನವ ಹಕ್ಕುಗಳ ಅಧ್ಯಕ್ಷರಾದ ಶ್ರೀ ಲೀಲಾದರ್ ಬೈಕಂಪಾಡಿ ಇವರು ಉದ್ಘಾಟಿದರು. ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರು ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸಾಧನೆಗಾಗಿ ಅಂತರಾಷ್ರೀಯ ಮಾನವ ಹಕ್ಕುಗಳ ಭಾರತ ರತ್ನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಿದರು. ಶ್ರೀಯುತರು ಸಹಕಾರ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯೊಂದಿಗೆ ಸೇವೆಗೈದು ರಾಜ್ಯದಲ್ಲಿ ಅಲ್ಲದೆ ರಾಷ್ಟ್ರ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಮೂಲ್ಕಿ ಶಾಖೆ ಮತ್ತು ಲಯನ್ಸ್ ಮತ್ತು ಲಿಯೋ ಕ್ಲಬ್ ಮೂಲ್ಕಿ ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ ಬೋಳೂರು, ಸಮುದಾಯ ದಂತ ವಿಭಾಗ ಕಸ್ತುರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಅತ್ತಾವರ, ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣಾ ಶಿಬಿರವು ಇತ್ತೀಚಿಗೆ ನಾಗರಾಜ್ ಟವರ್ಸ್ ಮೂಲ್ಕಿಯಲ್ಲಿ ನಡೆಯಿತು.

ಈ ಕಾರ್ಯಕ್ರಮದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಸಂಘದ ಮೂಲ್ಕಿ ಶಾಖೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಆನಂದ ಎಸ್ ಕೊಂಡಾಣ, ಶ್ರೀ ಸೀತಾರಾಮ್ ಎನ್, ,ಶ್ರೀ ಚಂದ್ರಹಾಸ್ ಮರೋಳಿ, ಲಯನ್ಸ್ ಕ್ಲಬ್ ಮೂಲ್ಕಿ ಇದರ ಅಧ್ಯಕ್ಷರಾದ ರೊ. ವೆಂಕಟೇಶ್ ಹೆಬ್ಬಾರ್ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಕಾರ್ಯದರ್ಶಿಯಾದ ಶ್ರೀ ವಿನೋದ್ ಸಾಲ್ಯಾನ್, […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಮುಲ್ಕಿ ಶಾಖೆ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮುಲ್ಕಿ ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ, ಬೋಳೂರು ಹಾಗೂ ಸಮುದಾಯ ದಂತ ವಿಭಾಗ ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಯನ್ಸಸ್ ಮತ್ತು ಆಸ್ಪತ್ರೆ ಅತ್ತಾವರ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿOದ ಉಚಿತ ವೈದ್ಯಕೀಯ ತಪಾಸಣಾ, ದಂತ ಚಿಕಿತ್ಸಾ ಮತ್ತು ಕಣ್ಣಿನ ತಪಾಸಣೆ ಶಿಬಿರವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಮುಲ್ಕಿಯ ನಾಗರಾಜ್ ಟವರ್ಸ್, ಬಿಲ್ಲವ ಸಮಾಜ ಸೇವಾ ಸಂಘದ ಎದುರುಗಡೆ ಜರುಗಿತು.

ಸಂಘದ ಹಿರಿಯ ಸದಸ್ಯರು ಹಾಗೂ ಮಾರ್ಗದರ್ಶಕರಾದ ಡಾ. ಹರೀಶ್ಚಂದ್ರ ಪಿ. ಸಾಲ್ಯಾನ್ ಇವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿದ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದರಿಂದ ಹಲವಾರು ಬಡ ಜನರಿಗೆ ಸಹಾಯವಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಈ ಸಂಸ್ಥೆಯು ವಿವಿಧ ಜನೋಪಯೋಗಿ ಕಾರ್ಯಕ್ರಮಗಳಿಂದ ಇನ್ನೂ ಉತ್ತಮ ರೀತಿಯಲ್ಲಿ ಮುನ್ನಡೆಯಲಿ ಎಂದು ಹಾರೈಸಿದರು. ಲಯನ್ಸ್ ಕ್ಲಬ್ ಮುಲ್ಕಿ ಇದರ ಅಧ್ಯಕ್ಷರಾದ ಶ್ರೀ ವೆಂಕಟೇಶ್ ಹೆಬ್ಬಾರ್ ಇವರು ಮಾತನಾಡಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್‍ಭಾಗ್ ಶಾಖೆಯ 5ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಂಘದ ಗ್ರಾಹಕರಾದ ಶ್ರೀ ನವೀನ್ ಕುಮಾರ್ ಎಮ್.ಜಿ. ಮತ್ತು ಶ್ರೀಮತಿ ಲ್ಯಾನಿ ಎಮ್ ಪಿಂಟೋ ರವರು ದೀಪ ಪ್ರಜ್ವಲಿಸಿ ಚಾಲನೆ ನೀಡಿ ಮಾತನಾಡಿ, ಸಂಘವು ಅತ್ಯಂತ ಕಡಿಮೆ ಅವಧಿಯಲ್ಲಿ ಉನ್ನತ ಶ್ರೇಣಿಯನ್ನು ಪಡೆದು, ಹಲವು ಪ್ರಶಸ್ತಿ ಪಡೆದು ಬೆಳೆಯುತ್ತಿರುವ ಈ ಸಂಘ ನೀಡುತ್ತಿರುವ ಉತ್ತಮ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಘದ ಸದಸ್ಯರಾದ ಶ್ರೀ ಸದಾಶಿವ ಪೂಜಾರಿ ಮತ್ತು ಶ್ರೀ ಮೋಹನ್‍ದಾಸ್ ಕೆ ಮಾತನಾಡಿ ಸಂಘವು ನೀಡುತ್ತಿರುವ ಸೇವೆಗೆ ಮತ್ತು ಸಿಬ್ಬಂದಿಗಳು ನೀಡುತ್ತಿರುವ ಸೇವೆಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಸಂಘದ ಸದಸ್ಯರಾದ ಶ್ರೀಮತಿ ಜಯಕುಮಾರಿ ಮಾತನಾಡಿ ಸಂಘವು ಹೆಚ್ಚು ಶಾಖೆಗಳನ್ನು ತೆರೆದು ಗ್ರಾಹಕರಿಗೆ ಇನ್ನೂ ಉತ್ತಮ ರೀತಿಯ ಸೇವೆಯನ್ನು ನೀಡಲಿ ಎಂದು ಶುಭ ಹಾರೈಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಸಂಘ ಮಾಡಿರುವ ಸಾಧನೆ ಮತ್ತು ಸರ್ವತೋಮುಖ ಪ್ರಗತಿಗೆ ದ.ಕ.ಜಿಲ್ಲಾ […]

66ನೇ ಅಖಿಲ ಭಾರತ ಸಹಕಾರಿ ಸಪ್ತಾಹ 2019 ಇದರ ಪ್ರಯುಕ್ತ ದಿನಾಂಕ 18.11.2019ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.ಬೆಂಗಳೂರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ಸಹಕಾರ ಇಲಾಖೆ ಮತ್ತು ಇತರ ಎಲ್ಲಾ ವಿಧದ ಮಹಾಮಂಡಳ ಹಾಗೂ ಸಹಕಾರ ಸಂಘಗಳ ಸಹಯೋಗದೊಂದಿಗೆ ಉಡುಪಿಯಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ರಾಜ್ಯದ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಮಾನ್ಯ ಶ್ರೀ ಎನ್. ಗಂಗಣ್ಣನವರ ಗೌರವ ಉಪಸ್ತಿತಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ “ಉತ್ತಮ ಸಹಕಾರ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಮುಖ್ಯಕಾರ್ಯನೀರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ನೀಡಿ ಗೌರವಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಘುಪತಿ ಭಟ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಂಜಿಮೊಗರು ಶಾಖೆಯ 3 ನೇ ವಾರ್ಷಿಕೋತ್ಸವ ಮತ್ತು ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನವಂಬರ್ 4 ರಂದು ಜರುಗಿತು.

ಕಾರ್ಯಕ್ರವನ್ನು ಸಂಘದ ಗ್ರಾಹಕರಾದ ಶ್ರೀ ಚಂದ್ರಶೇಖರ ಪೂಜಾರಿ ಮತ್ತು ಶ್ರೀ ದಯಾನಂದರವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಂಘವು ಮುಂದಿನ ದಿನಗಳಲ್ಲಿ ಸ್ವಂತ ಕಟ್ಟಡ ನಿರ್ಮಿಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಪಂಜಿಮೊಗರು ಶಾಖೆಯು ಅತ್ಯಂತ ಕಡಿಮೆ ಅವದಿಯಲ್ಲಿ ಗರಿಷ್ಠ ಬಂಡವಾಳ ಹಾಗೂ ಚಿನ್ನಾಭರಣ ಸಾಲ ಹೊಂದಿರುವ ಬಗ್ಗೆ ಹೆಮ್ಮೆಯನ್ನು ವ್ಯಕ್ತ ಪಡಿಸಿದರು. ಗ್ರಾಹಕರು ಹಾಗೂ ಸಿಬ್ಬಂದಿಗಳ ಪರಸ್ಪರ ಅನ್ಯೋನ್ಯತೆ […]

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ (ನಿ.) ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀಮತಿ ಲಲಿತಾ ಜಿ.ಟಿ. ದೇವೆಗೌಡ ಅವರು ನಮ್ಮ ಸಂಘದ ಪ್ರಧಾನ ಕಚೇರಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ವತಿಯಿಂದ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ .ಪಿ, ನಿರ್ದೇಶಕರಾದ ಶ್ರೀ ವಾಮನ್ ಕೆ., ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಸುರೇಶ್ ವಿ. ಪೂಜಾರಿ, s ಶ್ರಿ ರಮನಾಥ್ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ ಹಾಗೂ ಮುಖ್ಯಕಾರ್ಯನೀರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಡಿಪು ಶಾಖೆಯ 3ನೇ ವಾರ್ಷಿಕೋತ್ಸವ ಮತ್ತು ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಕಾರ್ಯಕ್ರಮ ಉದ್ಘಾಟಿಸಿದ ಸಂಘದ ಗ್ರಾಹಕರಾದ ಶ್ರೀ ನಾರಾಯಣಯ್ಯ ಮತ್ತು ಶ್ರೀ ಗುರುವಪ್ಪ ಪೂಜಾರಿಯವರು ದೀಪ ಪ್ರಜ್ವಲಿಸಿ ಚಾಲನೆ ನೀಡಿ ಮಾತನಾಡಿ ಸಂಘದ ಎಲ್ಲಾ ಸಿಬ್ಬಂದಿಗಳು ಗ್ರಾಹಕರಿಗೆ ನಗುಮೊಗದಿಂದ ಸೇವೆ ನೀಡುತ್ತಿರುವ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಸಂಘವು ಮಾಡಿರುವ ಸಾಧನೆ ಹಾಗೂ ನಮ್ಮ ಸಂಘವು ಗ್ರಾಹಕ ಸ್ನೇಹಿಯಾಗಿದ್ದು, ಶಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಸದುಪಯೋಗಿಸುವಂತೆ ಸದಸ್ಯರಲ್ಲಿ ವಿನಂತಿಸಿದರು. ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ […]

ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣೆ ಮಾಡುವ ಕಾರ್ಯಕ್ರಮವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಪುತ್ತೂರಿನಲ್ಲಿ ನಡೆಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪುತ್ತೂರು ಶಾಖೆ ಮತ್ತು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ, ಬೋಳೂರು ಹಾಗೂ ಸಮುದಾಯ ದಂತ ವಿಭಾಗ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿAದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆ […]