ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮುಡಿಪು ಶಾಖೆಯ ೭ನೇ ವಾರ್ಷಿಕೋತ್ಸದ ಪ್ರಯುಕ್ತ 55ನೇ ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಕಟ್ಟೆ ಪ್ರೆಂಡ್ಸ್ (ರಿ) ಮುಡಿಪು, ಬ್ರಹ್ಮಶ್ರೀ ಬಿಲ್ಲವ ವೇದಿಕೆ (ರಿ) ಬಾಳೆಪುಣಿ, ಲಯನ್ಸ್ ಮತ್ತು ಲಿಯೋ ಕ್ಲಬ್, ಮಂಗಳೂರು , ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ , ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ಹಾಗೂ ಸಮುದಾಯ ದಂತ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ , ದೇರಳಕಟ್ಟೆ ಇಲ್ಲಿಯ ನುರಿತ ತಜ್ಞ ವೈದ್ಯ ತಂಡದವರಿoದ ದಿನಾಂಕ 14.10.2023 ರಂದು ಗೋಪಾಲಕೃಷ್ಣ ಸಭಾಗೃಹ ಮುಡಿಪು ಇಲ್ಲಿ ಜರುಗಿತು. ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಕುರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲೋಲಾಕ್ಷಿ ರವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು.

ಆರೋಗ್ಯ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ಸ್ಥಾನವನ್ನು ವಹಿಸಿದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀಚಿತ್ತರಂಜನ್ ಬೋಳಾರ್ ರವರು ಮಾತಾಡಿ ಶಿಬಿರಕ್ಕೆ ಸಹಕರಿಸಿದ ಕಟ್ಟೆ ಪ್ರೆಂಡ್ಸ್ (ರಿ) ಮುಡಿಪು, ಬ್ರಹ್ಮಶ್ರೀ ಬಿಲ್ಲವ ವೇದಿಕೆ (ರಿ) ಬಾಳೆಪುಣಿ, ಲಯನ್ಸ್ ಮತ್ತು ಲಿಯೋ ಕ್ಲಬ್, ಮಂಗಳೂರು ,ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ಹಾಗೂ ಸಮುದಾಯ ದಂತ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ , ದೇರಳಕಟ್ಟೆ ಅಭಿನಂದನೆ ಹಾಗೂ ಧನ್ಯವಾದವನ್ನು ಸಲ್ಲಿಸಿದರು ನಂತರ ಮಾತಾನಾಡಿ ಸಂಘವು ಕೇವಲ ಶಿಬಿರ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಾಟೆಕಲ್ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ನಾಟೆಕಲ್ ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಹಾಗೂ ಮಂಜನಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸರೋಜಿನಿ, ಶ್ರೀ ಆನಂದ ಕೆ ಹಾಗೂ ಶ್ರೀ ಅಬ್ಬಾಸ್ ಎಮ್ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ನಾಟೆಕಲ್ ಶಾಖೆಯು ವ್ಯವಸ್ಥಿತವಾಗಿ ರೂಪಿಸಲು ಹಾಗೂ ಹೆಚ್ಚಿನ ಪ್ರಗತಿ ಹೊಂದಲು ನಾಟೆಕಲ್ ಪರಿಸರದವರ ಸಹಕಾರವೇ ಕಾರಣ. ಗ್ರಾಹಕರು ಒಳ್ಳೆಯ ವ್ಯವಹಾರವನ್ನು ನೀಡುತ್ತಿದ್ದು ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿ ಮಾಡುವುದರ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು. ಸಂಘದ ಪ್ರತಿ ಶಾಖೆಗಳಲ್ಲೂ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮುಡಿಪು ಪರಿಸರದಲ್ಲೂ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗುವುದು ಹಾಗೂ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗಂಜಿಮಠ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಗಂಜಿಮಠ ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಕೃಷ್ಣ ಕೆ. ಅಮೀನ್, ಕೆ.ನಾರಾಯಣ ಕಾರಂತ್ , ಶ್ರೀ ಸೋಹನ್ ಅತಿಕಾರಿ, ಶ್ರೀ ದಯಾನಂದ್, ಶ್ರೀ ಸುನೀಲ್ ಮನೋಜ್ ಫೆರ್ನಾಂಡಿಸ್ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಸಂಘದ ಅಭಿವೃದ್ಧಿಯಲ್ಲಿ ಆಡಳಿತ ಮಂಡಳಿಯೊoದಿಗೆ ಸಿಬ್ಬಂದಿ ವರ್ಗ ಹಾಗೂ ಎಲ್ಲಾ ಗ್ರಾಹಕರ ಸಹಕಾರದಿಂದ ಪ್ರತಿ ವರ್ಷದಂತೆ ಈ ವರ್ಷವು ಸಂಘವು ಹೆಚ್ಚಿನ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಸಂಘವು ಇ-ಸ್ಟಾಂಪಿAಗ್ ಸೇವೆಗೆ ಕಳೆದ 9 ವರ್ಷಗಳಿಂದ ನಿರಂತರವಾಗಿ ಪ್ರಶಸ್ತಿಯನ್ನು ಪಡೆಯುದರೊಂದಿಗೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿಯನ್ನು ಪಡೆದುಕೊಂಡ ಹೆಮ್ಮೆ ನಮ್ಮದಾಗಿದೆ. ಇ–ಸ್ಟಾಂಪಿoಗ್ ಸೇವೆಯು ಬೆಳಿಗ್ಗೆ 9 ಗಂಟೆಯಿoದ ಸಂಜೆ 6 […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ 2022-23 ನೇ ಸಾಲಿನ 12 ನೇ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 03.09.2023 ರ ಭಾನುವಾರ ಪೂರ್ವಾಹ್ನ ೧೦.೩೦ಕ್ಕೆ ಪಡೀಲಿನ ಬೈರಾಡಿಕೆರೆ ಹತ್ತಿರದ ಸಂಘದ ಪ್ರಧಾನ ಕಛೇರಿ “ಆತ್ಮಶಕ್ತಿ ಸೌಧ”ದ ಸಭಾಂಗಣದಲ್ಲಿ ಜರುಗಿತು.

ಸಂಘದ 2022-23ನೇ ಸಾಲಿನ ವಾರ್ಷಿಕ ವರದಿ ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್‌ರವರು ಸಭೆಯಲ್ಲಿ ಮಂಡಿಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಸಂಘವು ಪ್ರಸ್ತುತ ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 30 ಶಾಖೆಗಳನ್ನು ಹೊಂದಿದ್ದು, 2023-24ನೇ ಸಾಲಿನಲ್ಲಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಹೊಸ ಶಾಖೆಗಳನ್ನು ತೆರೆದು, ವಿವಿಧ ಯೋಜನೆಗಳ ಮೂಲಕ ಸದಸ್ಯರಿಂದ ರೂ. 250 ಕೋಟಿಗೂ ಮಿಕ್ಕಿ ಠೇವಣಿಗಳನ್ನು ಸಂಗ್ರಹಿಸಿ, ರೂ.200 ಕೋಟಿಗೂ ಮಿಕ್ಕಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ (ನಿ.) ಮಂಗಳೂರು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169 ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಛೇರಿಯಲ್ಲಿ ದಿನಾಂಕ 31.08.2023 ರಂದು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಮಹಿಳಾ ಸಿಬ್ಬಂದಿಗಳು ಭಜನೆ ಹಾಗೂ ಕುಣಿತ ಭಜನೆಯನ್ನು ಭಕ್ತಿಪೂರ್ವಕವಾಗಿ ನಡೆಸಿಕೊಟ್ಟರು. ಪುರೋಹಿತರಾದ ಶ್ರೀಯುತ ಮನೋಜ್ ಶಾಂತಿ ಇವರು ಗುರುಪೂಜೆ ನಡೆಸಿ ನಂತರ ಪ್ರಸಾದ ವಿತರಣೆಯನ್ನು ನಡೆಸಿದರು.

ಈ ಶುಭ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ , ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ್ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ,ಶ್ರೀ ರಮಾನಾಥ್ ಸನಿಲ್,ಶ್ರೀ ಬಿ.ಪಿ ದಿವಾಕರ್,ಶ್ರೀ ಗೋಪಾಲ್ ಎಮ್,ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಶ್ರೀ ವಾಮನ್ ಕೆ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಂಘದ ಸದಸ್ಯರುಗಳು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ 53ನೇ ಉಚಿತ ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ ಬೋಳೂರು ಮಂಗಳೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ, ಶ್ರೀನಿವಾಸ್ ಇನ್ಸ್ಟ್ಯೂಟ್ ಆ¥s಼ï ಡೆಂಟಲ್ ಸಾಯನ್ಸ್ ಮುಕ್ಕ ಇಲ್ಲಿಯ ನುರಿತ ವೈದ್ಯ ತಂಡದವರೊAದಿಗೆ ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ.) ಮಂಗಳೂರು ಇದರ ಸದಸ್ಯರಿಗೆ ಉಚಿತ ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ದಿನಾಂಕ ೨೭.೦೮.೨೦೨೩ರಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಸಮುದಾಯ ಭವನದ ಸಭಾಂಗಣದಲ್ಲಿ ಜರುಗಿತು.

ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ನಿ.) ಇದರ ಅಧ್ಯಕ್ಷರಾದ ಶ್ರೀ ಪಿ ಕೆ ಕೃಷ್ಣ ರವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ “ಸಹಕಾರಿ ಸಂಸ್ಥೆಗಳು ಕೇವಲ ಲಾಭದ ದೃಷ್ಟಿಯನ್ನು ಹೊಂದದೆ ಜೊತೆಗೆ ಜನರ ಅರೋಗ್ಯ ದೃಷ್ಟಿಯಿಂದ ಉಚಿತವಾಗಿ ಸಾರ್ವಜನಿಕರಿಗೆ ಇಂತಹ ವ್ಯೆದಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಉತ್ತಮ ಗುಣಮಟ್ಟದಲ್ಲಿ ನೀಡುತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆಲಸ ಶ್ಲಾಘನೀಯ. ಸಂಘದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸಿ ,ಸಮಾಜಿಕ ಕಳಕಳಿಯನ್ನು ಹೊಂದಿರುವ ಅತ್ಮಶಕ್ತಿ […]

ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು “ಆಟಿದ ಅರಗಣೆ ” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ(ನಿ.) ಮಂಗಳೂರು ಇದರ ಪ್ರಧಾನ ಕಛೇರಿಯಲ್ಲಿ ದಿನಾಂಕ 06.08.2023 ರಂದು ಆಚರಿಸಲಾಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತಾಡಿದ ಇವರು ಆಟಿ ತಿಂಗಳಲ್ಲಿ ಆಚರಣೆ ಮಾಡುವ ಆಟಿಡೊಂಜಿ ದಿನವನ್ನು ನಮ್ಮ ಸಂಸ್ಥೆಯಲ್ಲಿ “ಆಟಿದ ಅರಗಣೆ ” ಎಂಬ ಹೆಸರಿನಿಂದ ನಮ್ಮ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳ ಪೂರ್ಣ ಸಹಕಾರದಿಂದ ಅತ್ಯಂತ ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಾ ಇದ್ದೇವೆ. ಇದರಲ್ಲಿ ನಮ್ಮ ಸಿಬ್ಬಂದಿಗಳು ಅವರ ಮನೆಯಲ್ಲಿ ತಯಾರು ಮಾಡಿದ ರುಚಿ ರುಚಿಯಾದ ತುಳುನಾಡಿನ ಆಟಿ ತಿಂಗಳಿನ ವಿವಿಧ ತಿಂಡಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ(ನಿ.) ಉಳ್ಳಾಲ ಶಾಖೆಯ 8ನೇ ವಾರ್ಷಿಕೋತ್ಸದ ಪ್ರಯುಕ್ತ 51ನೇ ಉಚಿತ ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು , ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ವಿಭಾಗ, ಬಂಡಿಕೊಟ್ಯ , ಉಳ್ಳಾಲ , ಶಿವಶಕ್ತಿ ಯುವಕ ಮಂಡಲ (ರಿ.) ಉಳ್ಳಾಲ ಮತ್ತು ವಿದ್ಯಾರಣ್ಯ ಯುವಕ ವೃಂದ (ರಿ.) ಮತ್ತು ವಿದ್ಯಾರಣ್ಯ ಕಲಾವೃಂದ , ಉಳ್ಳಾಲ , ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ , ಯೆನೆಪೆÇೀಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ಹಾಗೂ ಸಮುದಾಯ ದಂತ ವಿಭಾಗ , ಯೆನೆಪೆÇೀಯ ದಂತ ಕಾಲೇಜು ಮತ್ತು ಆಸ್ಪತ್ರೆ , ದೇರಳಕಟ್ಟೆ ಇಲ್ಲಿಯ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ ವು ದಿನಾಂಕ 18/06/2023 ರಂದು ಸಮುದಾಯ ಭವನ, ಉಳ್ಳಾಲ ನಗರಸಭೆ ಇಲ್ಲಿ ಜರುಗಿತು. ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ಭಗವತಿ ದೇವಸ್ಥಾನದ ಅರ್ಚಕರಾದ ಶ್ರೀ ಕಂದಪ್ಪ ಕರ್ನವಾರ್ ರವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು.

ಆರೋಗ್ಯ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ಸ್ಥಾನವನ್ನು ವಹಿಸಿದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀಚಿತ್ತರಂಜನ್ ಬೋಳಾರ್ ರವರು ಮಾತಾಡಿ ಆರೋಗ್ಯವೇ ಭಾಗ್ಯ ಈ ನಿಟ್ಟಿನಲ್ಲಿ ಸಂಘವು ಹನ್ನೊಂದನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು ಸಂಘವು ತನ್ನ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ನಿರಂತರವಾಗಿ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದೆ. 51 ನೆ ೀ ಉಚಿತ ಆರೋಗ್ಯ ಶಿಬಿರವು ಇದಾಗಿದ್ದು ಉಳ್ಳಾಲದಲ್ಲಿ ಸತತ 7 ವರ್ಷಗಳಿಂದ ಆರೋಗ್ಯ ಶಿಬಿರವನ್ನು ನಡೆಸುತ್ತಾ ಬಂದಿರುತ್ತದೆ. ನಮ್ಮ ಸಹಕಾರ ಸಂಘದ ಮೂಲಕ ಏರ್ಪಡಿಸಿದ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತೊಕ್ಕೊಟ್ಟು ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ” ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ತೊಕ್ಕೊಟ್ಟು ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಕೆ. ರಘುಚಂದ್ರ ಬಳ್ಳಾಲ್ , ಶ್ರೀ ಪಿ. ಸಂಜೀವ ಶೆಟ್ಟಿ ಮತ್ತು ಶ್ರೀ ಚಂದ್ರಶೇಖರ್ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಸಂಘದ ಅಭಿವೃದ್ಧಿಯಲ್ಲಿ ಆಡಳಿತ ಮಂಡಳಿಯೊಂದಿಗೆ ಸಿಬ್ಬಂದಿ ವರ್ಗ, ಎಲ್ಲಾ ಸದಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ಪ್ರತಿ ವರ್ಷದಂತೆ ಈ ವರ್ಷವು ಸಂಘವು ಹೆಚ್ಚಿನ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಸಂಘವು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಶಾಖೆಗಳನ್ನು ತೆರೆದು ಗ್ರಾಹಕರಿಗೆ ಇನ್ನೂ ಉತ್ತಮ ರೀತಿಯ Œಸೇವೆಗಳನ್ನು ನೀಡುವುದಾಗಿ ತಿಳಿಸಿದರು. ಸಂಘದ ಪ್ರತಿ ಶಾಖೆಗಳಲ್ಲೂ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸುತ್ತಿದ್ದು, ಮುಂಬರುವ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಮಲ್ಲಿಕಟ್ಟೆ ಮಂಗಳೂರು ಇವರ ಸಹಯೋಗದಲ್ಲಿ ವನಮಹೋತ್ಸವದ ಪ್ರಯುಕ್ತ ಸಸಿನೆಡುವ ಕಾರ್ಯಕ್ರಮವನ್ನು ಪಡೀಲ್‍ನ ಸಂಘದ ಪ್ರಧಾನ ಕಛೇರಿ ಆತ್ಮಶಕ್ತಿ ಸೌಧದ ಬಳಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ., ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಮ್.ಎನ್. ರಾಜೇಂದ್ರ ಕುಮಾರ್‍ರವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು.

ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‍ರವರು ಪರಿಸರ ಸಂರಕ್ಷಣೆಯ ಮಹತ್ವವನ್ನು ವಿವರಿಸಿದರು. ಸಂಘದ ವತಿಯಿಂದ ಪಡೀಲ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಹಾಗೂ ಸುತ್ತಮುತ್ತ ಪರಿಸರದಲ್ಲಿ ಸುಮಾರು 300 ಗಿಡಗಳನ್ನು ನೆಡಲಾಗಿದೆ. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಇದರ ಅಧ್ಯಕ್ಷರಾದ ಶ್ರೀ ಶೀನ ಪೂಜಾರಿ, ಲಿಯೋ ಕ್ಲಬ್ ಇದರ ಅಧ್ಯಕ್ಷರಾದ ಶ್ರೀ ಕ್ರಿಸ್ ಟೆಲ್ಲಿಸ್, ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‍ನ ಪದಾಧಿಕಾರಿಗಳು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ […]