ಉದ್ಘಾಟನೆ ಮಾತುಗಳನ್ನಾಡಿದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ರವರು ಸಂಘದ ಬೆಳವಣಿಗೆ ಹಾಗೂ ಉತ್ತಮ ಸೇವೆಯಿಂದ ಇಂದು ಆತ್ಮಶಕ್ತಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಸಂಘದ ಸರ್ವತೋಮುಖ ಬೆಳವಣಿಗೆಯಲ್ಲಿ ಸಂಘದ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಮತ್ತು ಎಲ್ಲಾ ಸದಸ್ಯರ ಸಹಕಾರದೊಂದಿಗೆ ಸತತವಾಗಿ ಸಂಘವು ಹೆಚ್ಚಿನ ಲಾಭಗಳಿಸಿ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ, ಸದರಿ ಶಾಖೆಯಲ್ಲಿ ಇ-ಸ್ಟಾಂಪ್ ಸೇವೆಯು ಸಂಜೆ 7 ಗಂಟೆಯವರೆಗೆ ಲಭ್ಯವಿದ್ದು, ಸದಸ್ಯರು […]
