Blog

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು, ಇದರ ಮಾಡೂರು ಶಾಖೆಯ ದಶಮಾನೋತ್ಸವದ ಪ್ರಯುಕ್ತ ಮೆಗಾ ಆರೋಗ್ಯ ಶಿಬಿರವು ಶ್ರೀ ಶಿರಡಿ ಸಾಯಿ ಬಾಬಾ ಮಂದಿರ , ಮಾಡೂರು ಕೋಟೆಕಾರು, ಇವರ ಜಂಟಿ ಸಹಯೋಗದೊಂದಿಗೆ, ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ , ನಾಟೆಕಲ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಕೋಟೆಕಾರ್, ಇಲ್ಲಿಯ ನುರಿತ ವೈದ್ಯರ ತಂಡದವರಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ ಆವರಣದಲ್ಲಿ ನಡೆಯಿತು.

ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮಕ್ಕಳ ವಿಭಾಗದ ಎಚ್.ಓ.ಡಿ. ಡಾ. ಶಂಶಾದ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಹಕಾರಿ ಸೇವೆಯೊಂದಿಗೆ ಸಾಮಾಜಿಕ ಸೇವೆಯನ್ನು ಮಾಡುತ್ತಿರುವುದು ತುಂಬಾ ಒಳ್ಳೆಯ ಕೆಲಸವಾಗಿದೆ. ಮುಂದಿನ ಪೀಳಿಗೆಯವರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉತ್ತಮ ಆಹಾರ ಪದ್ಧತಿಯನ್ನು ಅನುಸರಿಸಬೇಕು. ಒಳ್ಳೆಯ ಆರೋಗ್ಯ ಬೇಕಾದರೆ ಉತ್ತಮ ಆಹಾರ ವಿಧಾನ ಪಾಲಿಸಬೇಕು” ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಂಘದ ಸ್ಥಾಪಕ ಸದಸ್ಯರೂ ಹಾಗೂ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪ್ರಧಾನ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಧ್ವಜಾರೋಹಣ ನೆರವೇರಿಸಿದರು.

ಸಂಘದ ದಶಮಾನೋತ್ಸವದ ಪ್ರಯುಕ್ತ ರಾಷ್ಟ್ರಕ್ಕಾಗಿ ಸೇವೆಗೈದ ಹತ್ತು ಮಂದಿ ಯೋಧರಾದ ಶ್ರೀ ಉಮೇಶ್ ಕೊರಗೋಡ್, ಶ್ರೀ ವಿಲಾಸ್, ಶ್ರೀ ಸುಧಾಕರ್ ಎಮ್, ಶ್ರೀ ಶಿವರಾಮ್, ಶ್ರೀ ನಾಯಕ್ ಶಂಕರ್, ಶ್ರೀ ಹನುಮಂತ್ ಬೆಳಿಕುಪ್ಪಿ, ಶ್ರೀ ಗಮ್ ನಾಮ್ ದೇವ್, ಡಾ. ದೊಡ್ಡ ನಂಜಯ್ಯ ಎಚ್. ಎಮ್, ಶ್ರೀ ಅಶೋಕ್ ಕುಮಾರ್, ಶ್ರೀ ಆನಂದ್ ಪೂಜಾರಿ ರವರು ಆತ್ಮ ಸನ್ಮಾನ ಗೌರವವನ್ನು ಸ್ವೀಕರಿಸಿದರು. ಯೋಧರಾದ ಶ್ರೀ ವಿಲಾಸ್ ಗೌರವ ಸ್ವೀಕರಿಸಿ ಮಾತನಾಡಿ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ತಾವು ಪಾಲ್ಗೊಂಡಿದ್ದ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ದಶಮಾನೋತ್ಸವ ಪ್ರಯುಕ್ತ ಸಂಘದ ಪಂಜಿಮೊಗರು ಶಾಖೆಯ ವತಿಯಿಂದ ಬಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಪಡೀಲ್, ಮಂಗಳೂರು, ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ಶ್ರೀ ಶಾರದೋತ್ಸವ ಸೇವಾ ಟ್ರಸ್ಟ್, ಪಂಜಿಮೊಗರು ಇವರ ಜಂಟಿ ಸಹಯೋಗದೊಂದಿಗೆ, ಮಾತಾ ಅಮೃತಾನಂದಮಯಿ ಮಠ ಬೋಳೂರು ಇದರ ನುರಿತ ತಜ್ಞ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಮತ್ತು ಕಣ್ಣಿನ ತಪಾಸಣಾ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕೂಳೂರು ಇವರಿಂದ ಕೋವಿಡ್-19 ಬೂಸ್ಟರ್ ಡೋಸ್ ಲಸಿಕಾ ಶಿಬಿರವು ಪಂಜಿಮೊಗರು ವಿದ್ಯಾನಗರ ಶ್ರೀ ಕೃಷ್ಣ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್‍ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಆರೋಗ್ಯ ಶಿಬಿರದಂತಹ ಸಾಮಾಜಿಕ ಕಾರ್ಯವನ್ನು ಹಮ್ಮಿಕೊಳ್ಳುವ ಮೂಲಕ ಜನರ ಮನಸ್ಸನ್ನು ಮುಟ್ಟುವಂತಹ ಕೆಲಸವನ್ನು ಮಾಡುತ್ತಿದೆ ಎಂದರು. ಮಾತಾ ಅಮ್ರತನಂದಾಮಯಿ ಮಠ ಬೋಳೂರು ಇದರ ವೈದ್ಯರಾದ ಡಾ. ದೇವದಾಸ್‍ರವರು ಮಾತನಾಡಿ ಜನರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉತ್ತಮ ಆಹಾರ ಪದ್ಧತಿಯನ್ನು ಅನುಸರಿಸಬೇಕು. ಸಣ್ಣ ಆರೋಗ್ಯ ಸಮಸ್ಯೆ ಇದ್ದರೂ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2021-22ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2021-22” ಪ್ರಶಸ್ತಿಯನ್ನು ದಿನಾಂಕ 05.08.2022 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2021-22ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಬಿ. ನಿರಂಜನ್, ಶ್ರೀ ಎಂ. ವಾದಿರಾಜ್ ಶೆಟ್ಟಿ, ಶ್ರೀ ಸದಾಶಿವ ಉಳ್ಳಾಲ್, ಶ್ರೀ ಎಸ್.ರಾಜು ಪೂಜಾರಿ, ಶ್ರೀ ಶಶಿಕುಮಾರ್ ರೈ ಬಿ., ಶ್ರೀ ರಾಜೇಶ್ ರಾವ್, ಶ್ರೀ ಎಸ್.ಬಿ.ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಶ್ರೀ ಮೋನಪ್ಪ ಶೆಟ್ಟಿ ಎಕ್ಕಾರು, ಶ್ರೀ ಕೆ. ಜೈರಾಜ್ ಬಿ. ರೈ, ಶ್ರೀ […]

ಸ್ವಾತಂತ್ರ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆ.13 ರಿಂದ 15ರ ವರೆಗೆ ಹಮ್ಮಿಕೊಂಡಿರುವ ‘ಹರ್ ಘರ್ ತಿರಂಗಾ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂಘದ ಕೇಂದ್ರ ಕಚೇರಿ ಪಡೀಲ್ ಶಾಖೆಯ ಶಾಖಾ ವ್ಯವಸ್ಥಾಪಕರಾದ ಶ್ರೀ ಸಚಿನ್‌ರವರು ಗ್ರಾಹಕರಾದ ಶ್ರೀ ಕಿಶೋರ್ ಕುಮಾರ್‌ರವರಿಗೆ ಧ್ವಜವನ್ನು ನೀಡುವುದರ ಮೂಲಕ ಚಾಲನೆ ನೀಡಿದರು.

ರಾಷ್ಟ ಪ್ರೇಮದ ಸಂಕೇತವಾದ ರಾಷ್ಟಧ್ವಜವನ್ನು ಸಂಘದ ಸದಸ್ಯರು, ಗ್ರಾಹಕರು ಹಾಗೂ ಸಾರ್ವಜನಿಕರು ಮನೆ ಮನೆಯಲ್ಲೂ ಹಾರಿಸಲು ಅನುಕೂಲವಾಗಲು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿAದ ರಾಷ್ಟಧ್ವಜವನ್ನು ವಿತರಿಸಲಾಗುವುದು. ಸಂಘದ ೨೩ ಶಾಖೆಗಳಲ್ಲಿಯೂ ರಾಷ್ಟಧ್ವಜ ಲಭ್ಯವಿದ್ದು ಧ್ವಜವೊಂದಕ್ಕೆ ಸರಕಾರ ನಿಗದಿ ಪಡಿಸಿದ ದರ ರೂ.22ರಂತೆ ಮಾರಾಟ ಮಾಡಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ತಿಳಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ಲೆಕ್ಕಿಗ ಶ್ರೀ ವಿಶ್ವನಾಥ್ ಹಾಗೂ ಸಿಬ್ಬಂದಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ದಶಮಾನೋತ್ಸವದ ಪ್ರಯುಕ್ತ ವನಮಹೋತ್ಸವ ದಿನಾಚರಣೆಯನ್ನು ಸಂಘದ ಪ್ರಧಾನ ಕಛೇರಿ, ಆತ್ಮಶಕ್ತಿ ಸೌಧ, ಪಡೀಲ್ ಇಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ಸಾರ್ವಜನಿಕ ಆರೋಗ್ಯ,ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶ್ರೀ ಸಂದೀಪ್ ಗರೋಡಿ ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಂಘದ ವತಿಯಿಂದ ಪಡೀಲ್ ರಾಷ್ಟಿçÃಯ ಹೆದ್ದಾರಿಯ ಡಿವೈಡರ್ ಹಾಗು ಸುತ್ತಮುತ್ತ ಪರಿಸರದಲ್ಲಿ ಸುಮಾರು ೫೦೦ ಗಿಡಗಳನ್ನು ನೆಡಲಾಗಿದೆ ಹಾಗೂ ಈ ಸಸಿಗಳ ಪೋಷಣೆಯ ಸಂಪೂರ್ಣ ಜವಾಬ್ದಾರಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತೊಕ್ಕೊಟ್ಟು ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಗ್ರಾಹಕರಾದ ನ್ಯಾಯವಾದಿ ಶ್ರೀ ಮನೋಹರ, ಶ್ರೀ ಹಮ್ಮಬ್ಬ, ಶ್ರೀ ಸದಾನಂದ ಯು ಆಚಾರ್ಯ ಹಾಗೂ ಶ್ರೀ ಕಿರಣ್ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.

ಸಂಘದ ಗ್ರಾಹಕರಾದ ಶ್ರೀ ಶಾಫಿಯವರು ಮಾತನಾಡಿ ಇತರೆ ಬ್ಯಾಂಕುಗಳAತೆ ನಮ್ಮ ಸಂಘವೂ ಮುಂದಿನ ದಿನಗಳಲ್ಲಿ ಮೊಬೈಲ್ ಅ್ಯಪ್ ಮೂಲಕ ಬ್ಯಾಂಕಿAಗ್ ಸೇವೆ ನೀಡುವಂತಾಗಲಿ ಎಂದರು. ಸ0ಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ ಸಂಘವು ಈಗಾಗಲೇ ಮಾನ್ಸೂನ್ ವಿಶೇಷ ಚಿನ್ನಾಭರಣ ಸಾಲ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಲ್ಲಿ ಕಡಿಮೆ ಬಡ್ಡಿಗೆ ಚಿನ್ನಾಭರಣ ಸಾಲದ ಜೊತೆಗೆ ವಿಶೇಷ ಕೊಡುಗೆಯನ್ನು ನೀಡುತ್ತಿದ್ದು ಗ್ರಾಹಕರು ಇದರ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು. ವಾರ್ಷಿಕೋತ್ಸವದ ಪ್ರಯುಕ್ತ ತೊಕ್ಕೊಟ್ಟು ಶಾಖೆಯಲ್ಲಿ ಚಿನ್ನಾಭರಣ ಸಾಲದ […]

ಬ್ಯಾಂಕಿಂಗ್ , ಆರೋಗ್ಯ, ಶಿಕ್ಷಣ ಮತ್ತು ಸಹಕಾರಿ ಕ್ಷೇತ್ರದಲ್ಲಿ ಅವಿಭಜಿತ ದ.ಕ ಜಿಲ್ಲೆಯ ಕೊಡುಗೆ ಅಪಾರವಾದುದು. ಅದೇ ರೀತಿ ಜಿಲ್ಲೆ ಸಮಗ್ರ ಅಭಿವೃದ್ಧಿಯಾಗಲು ಸಹಕಾರಿ ರಂಗವೇ ಕಾರಣ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು. ಪಡುಬಿದ್ರಿ ಮುಖ್ಯ ರಸ್ತೆಯ ಧನ್ವಂತರಿ ಕೃಪಾ ಅಂಚನ್ ಸಂಕೀರ್ಣದಲ್ಲಿ ಆರಂಭಗೊಂಡ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 23ನೇ ಪಡುಬಿದ್ರಿ ಶಾಖೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ, ಅತೀ ಕಡಿಮೆ ಅವಧಿಯಲ್ಲಿ 23 ಶಾಖೆಗಳನ್ನು ಹೊಂದುವ ಮೂಲಕ ಬಲಿಷ್ಠಗೊಂಡ ಸಂಸ್ಥೆಯು ಅತೀ ಶೀಘ್ರವಾಗಿ 100 ಶಾಖೆಗಳನ್ನು ಹೊಂದುವಂತಾಗಲಿ ಎಂದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ , ದಶಮಾನೋತ್ಸವ ಸಂಭ್ರಮದಲ್ಲಿರುವ ಆತ್ಮಶಕ್ತಿ ಸಂಘವು ಅತೀ ಶೀಘ್ರದಲ್ಲಿ ಸಂಘದ 24ನೇ ಶಾಖೆ ಗಂಜಿಮಠದಲ್ಲಿ ಮತ್ತು 25ನೇ ಶಾಖೆ ಕಾಪುವಿನಲ್ಲಿ ಆರಂಭಿಸಲಿದೆ ಎಂದರು. ಪಡುಬಿದ್ರಿ ಸಹಕಾರಿ ವ್ಯವಸಾಯಿಕ […]

ಆತ್ಮಶಕ್ತಿ ವಿವಿದೋದ್ದೇಶ ಸಹಕಾರಿ ಸಂಘದ 22ನೇ ನೀರುಮಾರ್ಗ ಶಾಖೆಯ ಉದ್ಘಾಟನೆ ಸಮೃದ್ಧಿ ಕಟ್ಟಡದಲ್ಲಿ ಶುಕ್ರವಾರ ನೆರವೇರಿತು.

ಶಾಖೆಯನ್ನು ಉದ್ಘಾಟಿಸಿದ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಬೆಳೆಯುತ್ತಿರುವ ಮಂಗಳೂರು ಮಹಾನಗರವು ಗ್ರಾಮೀಣ ಮಟ್ಟಕ್ಕೂ ವಿಸ್ತರಣೆಯಾಗುತ್ತಿದೆ. ಇಂತಹ ಸಂದರ್ಭ ಆತ್ಮಶಕ್ತಿ ವಿವಿದೋದ್ದೇಶ ಸಹಕಾರಿ ಸಂಘವು ತನ್ನ ಶಾಖೆಗಳನ್ನು ವಿಸ್ತರಿಸುವ ಮೂಲಕ ಮಹತ್ತರ ಕೊಡುಗೆ ನೀಡುತ್ತಿದೆ. ಆತ್ಮಶಕ್ತಿ ಸಂಘವು ಕೇವಲ 10 ವರ್ಷಗಳಲ್ಲೇ 22 ಶಾಖೆ ಸ್ಥಾಪನೆ ಮಾಡಿ ಮಹತ್ತರ ಸಾಧನೆ ಮಾಡಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ, ಕೃಷಿ ಹಿನ್ನಲೆಯ ನೀರುಮಾರ್ಗದಲ್ಲಿ ಆತ್ಮಶಕ್ತಿ ಶಾಖೆ ಸ್ಥಾಪನೆ ಮಾಡಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರ. […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 21 ನೇ ನೂತನ ಶಾಖೆಯ ಉದ್ಘಾಟನೆಯು ಅಡ್ಯಾರ್ ಕಟ್ಟೆಯ ಶಾರದಮ್ಮ ಟವರ್ ಕಟ್ಟಡದಲ್ಲಿ ಶುಕ್ರವಾರ ನೇರವೇರಿತು.

ಸಂಘವು ಅತ್ಯಲ್ಪ ಕಾಲದಲ್ಲಿ ಯಶಸ್ವಿ ಸಂಘವಾಗಿ ರೂಪುಗೊಂಡು, ವಿವಿಧ ಕಡೆಗಳಲ್ಲಿ ಶಾಖೆ ತೆರೆದು ಗ್ರಾಹಕರಿಗೆ ಉತ್ತಮ ಸೇವೆಯನ್ನು ಕಲ್ಪಿಸಿದೆ. ಮತ್ತಷ್ಟು ಶಾಖೆಗಳು ಗ್ರಾಹಕರಿಗೆ ಲಭಿಸುವಂತಾಗಲಿ ಎಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಡ್ಯಾರ್ ಇದರ ಅಧ್ಯಕ್ಷ ಯಾದವ ಪೂಜಾರಿ ಭಂಡಾರಮನೆ ಹೇಳಿದರು. ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿದ್ದರು. ಸಂಘವು 10 ವರ್ಷಗಳಲ್ಲಿ ದ.ಕ ಜಿಲ್ಲೆಯಲ್ಲಿ20 ಶಾಖೆ ತೆರೆದು ಸ್ವಂತ ಕಟ್ಟಡವನ್ನು ಪಡೀಲಿನ ಬೈರಾಡಿಕೆರೆ ಬಳಿ ಲೋಕಾರ್ಪಣೆಗೊಳಿಸಿದೆ. ಪ್ರಸಕ್ತ ಆರ್ಥಿಕ ಸಾಲಿನಲ್ಲಿ […]