Blog

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಹಾಗೂ ಚಂದನ ಸಾಹಿತ್ಯ ವೇದಿಕೆ ಸುಳ್ಯ ಜಂಟಿಯಾಗಿ ಆಯೋಜಿಸಿದ್ದ ಭಾವೈಕ್ಯತಾ ಕವಿಗೋಷ್ಠಿ ಮತ್ತು ಸಜ್ಜನ ಚಂದನ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭವು ರೋಟರಿ ಟ್ರಸ್ಟ ಹಾಲ್ ಪುತ್ತೂರಿನಲ್ಲಿ ಖ್ಯಾತ ಹಿರಿಯ ಸಾಹಿತಿಗಳಾದ ಶ್ರೀ ನಾರಾಯಣ ರೈ ಕುಕ್ಕುವಳ್ಳಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತರಾದ ಅಕ್ಷರ ಸಂತ ಹರೇಕಳ ಹಾಜಬ್ಬರವರು ಹಾಗೂ ಖ್ಯಾತ ಹಿರಿಯ ಸಾಹಿತಿಗಳಾದ ಶ್ರೀ ನಾರಾಯಣ ರೈ ಕುಕ್ಕುವಳ್ಳಿಯವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರಿಗೆ ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸಾಧನೆಗಾಗಿ “ಸಜ್ಜನ ಚಂದನ ಸದ್ಭಾವನಾ ಪ್ರಶಸ್ತಿ” ಯನ್ನು ಪ್ರದಾನ ಮಾಡಿದರು. ಶ್ರೀಯುತರು ಸಹಕಾರ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯೊಂದಿಗೆ ಸೇವೆಗೈದು ರಾಜ್ಯದಲ್ಲಿ ಅಲ್ಲದೆ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಇವರಿಗೆ 2016ರಲ್ಲಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ವತಿಯಿಂದ ಕರ್ನಾಟಕ ಒನ್ ಸೇವಾ ಸಂಸ್ಥೆಯ ಮೂಲಕ ಉಚಿತ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣಾ ಕಾರ್ಯಕ್ರಮವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್‍ಭಾಗ್ ಶಾಖೆಯಲ್ಲಿ ನಡೆಯಿತು.

ಮಂಗಳೂರು ಮಹಾನಗರಪಾಲಿಕೆಯ ಸದಸ್ಯರಾದ ಶ್ರೀ ಸುಧೀರ್ ಶೆಟ್ಟಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಜನರಿಗೆ ಉತ್ತಮ ಸೇವೆಯನ್ನು ನೀಡುವುದರ ಜೊತೆಯಲ್ಲಿ ಪ್ರಧಾನಿಗಳ ಆಶಯದಂತೆ ಕಡುಬಡವರಿಗೂ ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡನ್ನು ನೀಡುವುದರ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ವಿಶೇಷ ಕಾಳಜಿಯನ್ನು ವಹಿಸಿದೆ. ಆತ್ಮಶಕ್ತಿ ಸಹಕಾರಿ ವಿವಿಧೋದ್ದೇಶ ಸಹಕಾರಿ ಸಂಘವು ಉಚಿತ ಆರೋಗ್ಯ ಕಾರ್ಡ್ ಮೂಲಕ ತನ್ನ ಸಾಮಾಜಿಕ ಬದ್ಧತೆಯನ್ನು ಕೂಡ […]

ಕಳೆದ ಹದಿನೆಂಟು ವರುಷಗಳಿಂದ ಪ್ರಕಾಶನ, ಸಮಾಜ ಸೇವೆ, ಆರೋಗ್ಯ, ಶೈಕ್ಷಣಿಕ ಸಹಾಯ, ಆರ್ಥಿಕ ಕೊಡುಗೆಗಳ ಮೂಲಕ ತನ್ನ ಸೇವಾಕಾರ್ಯಗಳನ್ನು ಅನುಚಾನವಾಗಿ ನಡೆಸಿಕೊಂಡು ಸಮಾಜಮುಖಿ ಚಿಂತನೆಗಳಿಗೆ ಪ್ರೇರಣೆ ಮಾದರಿಯಾಗಿರುವ ಮಂಗಳೂರಿನ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟಬಲ್ ಟ್ರಸ್ಟ್ ರಿ. ಇದರ ವತಿಯಿಂದ ಆತ್ಮಶಕ್ತಿ ವಿವಿದ್ಧೋದ್ದೇಶ ಸಹಕಾರಿ ಸಂಘ ನಿ.    ಇದರ ಸಹಕಾರದೊಂದಿಗೆ ಇತ್ತೀಚೆಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಭವನ, ಕೊಡಿಯಲ್ ಬೈಲ್ ಇಲ್ಲಿ ಜರುಗಿದ ಸರಳ ಕಾರ್ಯಕ್ರಮದಲ್ಲಿ ಕಡು ಬಡತನದ ಅಸಹಾಯಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಹಾಗೂ ಹೃದಯ ಸಂಬಂಧಿ ಅನಾರೋಗ್ಯ ಪೀಡಿತರಿಗೆ ಧನಸಹಾಯವನ್ನು ವಿತರಿಸಲಾಯಿತು.

ಆತ್ಮಶಕ್ತಿ ಪತ್ರಿಕೆಯ ಸಂಪಾದಕರು ಹಾಗೂ ಸ್ಥಾಪಕ ಟ್ರಸ್ಟಿಗಳೂ ಆದ ಶ್ರೀ ವಾಮನ್ ಕೆ. ಇವರು ಈ ಸಂದರ್ಭದಲ್ಲಿ ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟಬಲ್ ಟ್ರಸ್ಟಿನ ವತಿಯಿಂದ ಪ್ರತೀ ವರ್ಷ ಕಡೂ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುತ್ತಿದೆ, ಪ್ರಸ್ತುತ ಕೊರೋನ ಸಂಕಷ್ಟ ಕಾಲದಲ್ಲಿ ಆರ್ಥಿಕ ಅಡಚಣೆಯಿಂದ ಬಹಳಷ್ಟು ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರಿಸಲು ಆಗದೆ ಮೊಟಕುಗೊಳಿಸಿರುವುದನ್ನು ಮನಗಂಡು ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಕಾಲೇಜು ಶುಲ್ಕವನ್ನು ಭರಿಸುವುದರ ಮೂಲಕ ಹಾಗೂ ಅನಾರೋಗ್ಯ ಪೀಡಿತರಾದ […]

ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೋಮಾ ಕೋರ್ಸ್‍ನ 36ನೇ ಅಧಿವೇಶನದ ಉದ್ಘಾಟನಾ ಸಮಾರಂಭವು ದಕ್ಷಿಣ ಕನ್ನಡ ಜಿಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಜರುಗಿತು. ಈ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೂರಿಂಜೆ ಇಂತಹ ತರಬೇತಿ ಮೂಲಕ ಸಹಕಾರಿ ಸಂಸ್ಥೆಗಳ ಬೆಳವಣಿಗೆ ಸಾಧ್ಯ, ಸಹಕಾರಿ ಸಂಘವು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕಾದರೆ ಉನ್ನತ ತರಬೇತಿಯ ಅಗತ್ಯವಿದ್ದು, ಇಂದು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮೂಲಕ ನಮ್ಮ ಜಿಲ್ಲೆಯಲ್ಲಿ ತರಬೇತಿಯನ್ನು ಆಯೋಜಿಸಿ ಜಿಲ್ಲೆಯ ಸಹಕಾರಿ ಸಂಘಗಳ ಸಿಬ್ಬಂದಿಗಳ ದಕ್ಷತೆಯನ್ನು ಹೆಚ್ಚಿಸಲು ಅನುಕೂಲ ಮಾಡಿಕೊಟ್ಟಿದೆ, ಇದರ ಸದ್ಬಳಕೆಯಾಗಲಿ ಎಂದು ಶುಭ ಹಾರೈಸಿದರು.

    ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು ಇದರ ನಿರ್ದೇಶಕರಾದ ಶ್ರೀ ಎಸ್.ಆರ್. ಸತೀಶ್ಚಂದ್ರ ರವರು ಮಾತನಾಡಿ ನಾನು ಈ ಮಟ್ಟಕ್ಕೆ ಬೆಳೆಯಲು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯ ಪಾತ್ರ ಮಹತ್ವದ್ದು ಹಾಗೂ HDCM ಕೋರ್ಸ್ ನ ಅನುಕೂಲತೆಯ ಬಗ್ಗೆ ತಿಳಿಸಿದರು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಹಕಾರಿ ಸಿಬ್ಬಂದಿಗಳಿಗೆ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯ ಮೂಲಕ ಉಭಯ ಜಿಲ್ಲೆಗಳ ಸಹಕಾರಿ ಸಂಘಗಳ ಸಿಬ್ಬಂದಿಗಳಿಗೆ ಒಂದು ಉತ್ತಮ ಅವಕಾಶವನ್ನು ಕಲ್ಪಿಸಿದೆ ಮುಂದೆಯೂ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.)ದ 2019-20ನೇ ಸಾಲಿನ 9ನೇ ವಾರ್ಷಿಕ ಸಾಮಾನ್ಯ ಸಭೆಯು ಘನವೆತ್ತ ಕರ್ನಾಟಕ ರಾಜ್ಯ ಸರಕಾರದ ಆಜ್ಞಾನು ಪ್ರಕಾರ ವೀಡಿಯೋ ಕಾನ್ಫರೆನ್ಸ್/ವರ್ಚುವಲ್ ಮುಖಾಂತರ ದಿನಾಂಕ 18-12-2020 ರ ಶುಕ್ರವಾರ ಪೂರ್ವಾಹ್ನ 9.30 ಕ್ಕೆ ಸರಿಯಾಗಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಂಘದ 2019-20 ನೇ ಸಾಲಿನ ವಾರ್ಷಿಕ ವರದಿ, ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ರವರು ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಂಡಿಸಿದರು. ಸಂಘವು 2019-20 ನೇ ಸಾಲಿನಲ್ಲಿ 17 ಶಾಖೆಗಳನ್ನು ಹೊಂದಿದ್ದು, ತನ್ನ ಕಾರ್ಯವ್ಯಾಪ್ತಿಯನ್ನು ಉಡುಪಿ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳ ಸಹಿತ 5 ಜಿಲ್ಲೆಗಳಿಗೆ ವ್ಯಾಪಿಸಿರುತ್ತದೆ . ಸಂಘವು 2020-21 ನೇ ಆರ್ಥಿಕ ಸಾಲಿನಲ್ಲಿ ಇಂದಿನವರೆಗೆ ರೂ. 120 ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದ್ದು ಇದನ್ನು ಮಾರ್ಚ್ ಅಂತ್ಯಕ್ಕೆ ರೂ. 150 ಕೋಟಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ 2021ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಜರುಗಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್‍ರವರ ಗೌರವ ಉಪಸ್ಥಿತಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಕೆ. ರವರು ಸಂಘದ 2021ರ ಕ್ಯಾಲೆಂಡರ್‍ನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅರ್ಚಕರಾದ ಶ್ರೀ ಪೂವಪ್ಪ ಶಾಂತಿ, ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ಸಂಘದ ನಿರ್ದೇಶಕರಾದ ಶ್ರೀಮತಿ ಸುಜಯ ಹೇಮಚಂದ್ರ, ಶ್ರೀಮತಿ ಕುಶಲಾಕ್ಷಿ ಯಶವಂತ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಲೆಕ್ಕಧಿಕಾರಿ ಶ್ರೀ ವಿಶ್ವನಾಥ ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2019-20ನೇ ಸಾಲಿನ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಹಾಗೂ ಬ್ಯಾಂಕ್‍ನೊಂದಿಗೆ ಉತ್ತಮ ಭಾಂದವ್ಯ ಹೊಂದಿರುವುದಕ್ಕೆ ಅಭಿನಂದಿಸಿ “ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2019-20” ಪ್ರಶಸ್ತಿಯನ್ನು ದಿನಾಂಕ 27.11.2020 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2019-20ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್.ರಾಜೇಂದ್ರಕುಮಾರ್ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿ ಗೌರವಿಸಿದರು.

ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ ನಿರ್ದೇಶಕರುಗಳಾದ ಶ್ರೀ ಬಿ. ನಿರಂಜನ್, ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಎಸ್.ರಾಜು ಪೂಜಾರಿ, ಶ್ರೀ ಕೆ.ಎಸ್. ದೇವರಾಜ್, ಶ್ರೀ ಎಂ.ವಾದಿರಾಜ್ ಶೆಟ್ಟಿ, ಶ್ರೀ ಶಶಿಕುಮಾರ್ ರೈ ಬಿ., ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಎಸ್.ಬಿ.ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಶ್ರೀ ಕೆ. ಹರಿಶ್ಚಂದ್ರ, ಶ್ರೀ ಎಂ. ಮಹೇಶ್ ಹೆಗ್ಡೆ, ಶ್ರೀ ಬಿ. ಅಶೋಕ್ ಕುಮಾರ್ ಶೆಟ್ಟಿ, ಶ್ರೀ ಮೋನಪ್ಪ […]

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ಸಹಕಾರ ಇಲಾಖೆ ಮತ್ತು ಇತರ ಎಲ್ಲಾ ವಿಧದ ಮಹಾಮಂಡಳ ಹಾಗೂ ಸಹಕಾರ ಸಂಘಗಳ ಸಹಯೋಗದೊಂದಿಗೆ 67ನೇ ಅಖಿಲ ಭಾರತ ಸಹಕಾರಿ ಸಪ್ತಾಹ 2020 ಇದರ ಪ್ರಯುಕ್ತ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಸಹಕಾರ ಕ್ಷೇತ್ರದಲ್ಲಿ ಸಾಧನೆಗೈದ ದ.ಕ ಮತ್ತು ಉಡುಪಿ ಜಿಲ್ಲೆಗಳ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ , ಶ್ರೇಷ್ಠ ಸಹಕಾರಿ ಗಳಿಗೆ ಪ್ರಶಸ್ತಿ, ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವಿಶೇಷ ಪ್ರಶಸ್ತಿ ಹಾಗೂ ಉತ್ತಮ ನವೋದಯ ಸ್ವಸಹಾಯ ಸಂಘಗಳಿಗೆ ರಾಜ್ಯದ ಉತ್ತಮ ಸಹಕಾರ ಸಂಘಗಳಿಗೆ ಪುರಸ್ಕಾರ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಮಾನ್ಯ ಶ್ರೀ ನಳಿನ್ ಕುಮಾರ್ ಕಟೀಲುರವರು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ ಡಿ. ಕಾಮತ್ ರವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರು ಆದ ಸಹಕಾರ ರತ್ನ ಡಾ! ಎಂ. ಎನ್. ರಾಜೇಂದ್ರ ಕುಮಾರ್ ರವರ ಗೌರವ ಉಪಸ್ತಿತಿಯಲ್ಲಿ ಕರ್ನಾಟಕ ಸರ್ಕಾರದ ಸಹಕಾರ ಸಚಿವರಾದ ಮಾನ್ಯ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ಸ್ಟೇಟ್ ಬ್ಯಾಂಕ್ ಶಾಖೆಯ ಐದನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಂಘದ ಸದಸ್ಯರಾದ ಶ್ರೀ ಕೃಷ್ಣಪ್ಪ ಪೂಜಾರಿ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಬಳಿಕ ಮಾತನಾಡಿ ಸಂಘವು ನೀಡುತ್ತಿರುವ ಸೇವೆಗೆ ಮೆಚ್ಚುಗೆ ವ್ಯಕ್ತ ಪಡಿಸಿದರು ಹಾಗೂ ಈಗಿನ ಡಿ.ಸಿ ಆಪೀಸ್ ಪಡೀಲ್‍ಗೆ ವರ್ಗಾವಣೆಗೊಳ್ಳುತ್ತಿದ್ದು ಪಡೀಲ್‍ನಲ್ಲಿಯೂ ಹೊಸ ಶಾಖೆ ತೆರೆಯುವ ಬಗ್ಗೆ ಪ್ರಸ್ತಾಪಿಸಿದರು. ಸಂಘದ ಸಲಹೆ ಸಮಿತಿಯ ಸದಸ್ಯರಾದ ಶ್ರಿಯುತ ಸದಾನಂದ ಸುವರ್ಣ ಮಾತನಾಡಿ ಸಂಘವು ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಥದಲ್ಲಿ ಮುಂದುವರಿಯಲಿ ಎಂದು ಹಾರೈಸಿದರು, ಮತ್ತೋರ್ವ ಸದಸ್ಯರಾದ ಡಾ. ಸೇಸಪ್ಪ ಅಮೀನ್ ಮಾತನಾಡಿ ಸಂಘದ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ನಾಟೆಕಲ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಮಂಜನಾಡಿ ಗ್ರಾಮ ಪಂಚಾಯತ್‍ನ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಮಹಮ್ಮದ್ ಹನೀಫ್, ಪಂಚಾಯತ್ ಪಿ.ಡಿ.ಒ ಶ್ರೀ ಮಂಜಪ್ಪ ,ಸದಸ್ಯರಾದ ಶ್ರೀ ಅಬ್ಬಾಸ್ ಎಮ್, ಶ್ರೀ ಭಾಸ್ಕರ್ ಪಿ. ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಶ್ರೀಯುತ ಅಬ್ಬಾಸ್ ಎಮ್ ಇವರು ಈ ಸಂಘವು ಮಹಾಮಾರಿ ಕೋವಿಡ್-19 ನ ಸಮಯದಲ್ಲಿ ಕೇವಲ 4% ಬಡ್ಡಿದರದಲ್ಲಿ ಕೋವಿಡ್-19 ವಿಶೇಷ ಚಿನ್ನಾಭರಣ ಸಾಲ ನೀಡಿದ್ಡು, ಇದರಿಂದ ಹೆಚ್ಚಿನ ಗ್ರಾಹಕರಿಗೆ ಸಹಾಯವಾಗಿದ್ದು ಇನ್ನು ಮುಂದೆಯು ಇಂತಹ ಸಾಲ ಸೌಲಭ್ಯಗಳನ್ನು ನೀಡಲಿ ಎಂದು ಹಾರೈಸಿದರು. ಪಂಚಾಯತ್ ಪಿ.ಡಿ.ಒ ಶ್ರೀ ಮಂಜಪ್ಪ ಇವರು ನಾಟೆಕಲ್ ಪ್ರದೇಶದಲ್ಲಿ ಜನರಿಗೆ ಬ್ಯಾಂಕಿಂಗ್ ಸೇವೆಯ ಅವಶ್ಯಕತೆಯನ್ನು ಮನಗಂಡ ಪಂಚಾಯತ್ ತನ್ನ ಕಟ್ಟಡದಲ್ಲಿ ಬ್ಯಾಂಕಿಂಗ್ ಸೇವೆ ತರಲು ಟೆಂಡರ್ ಕರೆದಾಗ […]