Blog

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ) ಮಂಗಳೂರು ಇದರ ಪ್ರಧಾನ ಕಛೇರಿಯಲ್ಲಿ 74ನೇ ಸ್ವಾತಂತ್ಯೋತ್ಸವವನ್ನು ಆಚರಿಸಲಾಯಿತು. ಪ್ರಧಾನ ಕಛೇರಿಯಲ್ಲಿ ನಡೆದ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ನಿವೃತ್ತ ಯೋಧ ಶ್ರೀ ಚಂದ್ರಶೇಖರ ಸುವರ್ಣ ಇವರು ಧ್ವಜಾರೋಹಣ ನೆರವೇರಿಸಿ ದೇಶ ಸೇವೆಯಲ್ಲಿ ತನ್ನ ಅನುಭವವನ್ನು ಹಂಚಿಕೊಳ್ಳುತ್ತಾ ಮಾತನಾಡಿ ಸೇನೆಯಲ್ಲಿ ಹಲವಾರು ಉದ್ಯೋಗವಕಾಶಗಳು ಇದ್ದು, ಯುವ ಪೀಳಿಗೆ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದು ದೇಶ ಸೇವೆ ಮಾಡುವ ಅವಕಾಶದ ಜೊತೆಗೆ ಗೌರವಯುತ ಉದ್ಯೋಗವನ್ನು ಹಾಗೂ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆಯಬಹುದು ಎಂದು ಹೇಳಿದರು. ಸಂಘದ ನಿರ್ದೇಶಕರಾದ ಶ್ರೀ ವಾಮನ್ ಕೆ., ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್ ಕೊಂಡಾಣ, ಶ್ರೀ ಸುರೇಶ್ ವಿ. […]

ಆತ್ಮಶಕ್ತಿ ವಿವಿಧೊದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವು ದಿನಾಂಕ 01.08.2020 ರಂದು ಮಂಗಳೂರಿನ ಕಂಕನಾಡಿ ಗರೋಡಿ ಬಳಿಯ ಹೋಟೆಲ್ ಅಟ್ಟಣೆಯಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಜೀವ ವಿಮಾ ವಿವಿಧೊದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಪುರುಷೋತ್ತಮ್ ಭಂಡಾರಿ ಇವರು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು.

ಕಾರ್ಯಕ್ರಮದ ಅದ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಅತೀ ಕಿರು ಅವಧಿಯಲ್ಲಿ 100 ಕೋಟಿಗೂ ಮಿಕ್ಕಿ ಠೇವಣಿಯನ್ನು ಸಂಗ್ರಹಿಸಿ, ಅತೀ ಕಡಿಮೆ ಅವಧಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಸಾಧನೆಗೈಯಲು ಸಿಬ್ಬಂದಿ ವರ್ಗದವರೇ ಕಾರಣ. ಈ ಸಿಬ್ಬಂದಿ ವರ್ಗದವರ ಗ್ರಾಹಕರೊಂದಿಗಿನ ಭಾಂದವ್ಯವನ್ನು ಹೆಚ್ಚಿಸಿ, ಇನ್ನೂ ಉತ್ತಮ ಸೇವೆಯನ್ನು ನೀಡಲು ಪ್ರತೀ ವರುಷದಂತೆ ಈ ವರುಷವೂ ಆಯೋಜಿಸಿರುವ ಸಿಬ್ಬಂದಿ ತರಬೇತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಹೆಚ್ಚಿನ ಮಾಹಿತಿ ಪಡೆದು, ಈ ತರಬೇತಿ ಕಾರ್ಯಗಾರವು ಯಶಸ್ವಿಯಾಗಲು ಶುಭ […]

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ(ಕಿಯೋನಿಕ್ಸ್)ದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಹರಿಕೃಷ್ಣ ಬಂಟ್ವಾಳ ಇವರನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪರವಾಗಿ ಅಧ್ಯಕ್ಷರು ಶ್ರೀ ಚಿತ್ತರಂಜನ್ ಬೋಳಾರ್‍ರವರು ಸಂಘದ ಪ್ರಧಾನ ಕಛೇರಿಯಲ್ಲಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ಪರಮೇಶ್ವರ ಜಿ.ಪೂಜಾರಿ, ಶ್ರೀ ಸುರೇಶ್ ವಿ.ಪೂಜಾರಿ, ಶ್ರೀ ಚಂದ್ರಹಾಸ ಮರೋಳಿ ಹಾಗೂ ಮುಖ್ಯ ಕಾರ್ಯನಿರ್ವಹಾಣಾಧಿಕಾರಿ(ಪ್ರ) ಶ್ರೀ ವಿಶ್ವನಾಥ ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಸದಸ್ಯರು ಹಾಗೂ ಗ್ರಾಹಕರಿಗೆ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ನೀಡುವ ಕೋವಿಡ್-19 ವಿಶೇಷ ಚಿನ್ನಾಭರಣ ಸಾಲ ಯೋಜನೆಗೆ ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ನಾಯಕ್ ಇವರು ಸಂಘದ ಪ್ರಧಾನ ಕಛೇರಿಯಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ನಾಯಕ್ ಇವರು ಪ್ರಸ್ತುತ ಪರಿಸ್ಥಿತಿಯಲ್ಲಿ ಜನರಿಗೆ ಹಣಕಾಸಿನ ಅವಶ್ಯಕತೆ ಇರುವ ಸಂದರ್ಭದಲ್ಲಿ ಈ ಹೊಸ ಚಿಂತನೆಯು ಜನರಿಗೆ ಅನುಕೂಲವಾಗಲಿದೆ. ಜನರಲ್ಲಿ ಆತ್ಮಸ್ಥೈರ್ಯ ತುಂಬುವ ಆತ್ಮಶಕ್ತಿಯ ಈ ಯೋಜನೆಯು ಯಶಸ್ವಿಯಾಗಲೆಂದು ಶುಭಹಾರೈಸಿದರು. ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ ಕೊರೋನಾ ಮಹಾಮಾರಿಯಿಂದ ಜನರ ಆರ್ಥಿಕ ಸ್ಥಿತಿಗತಿಯು ತುಂಬಾ ಹದಗೆಟ್ಟಿದ್ದು ಜೊತೆಗೆ ಮಳೆಗಾಲವು ಆರಂಭವಾಗಿರುವುದರಿಂದ ಇನ್ನಷ್ಟು ಕುಗ್ಗಿಹೋಗಿದೆ. ಇಂತಹ ಸಂದರ್ಭದಲ್ಲಿ ಸಾಲದ ಮೇಲಿನ ಬಡ್ಡಿಯನ್ನು ಭರಿಸುವುದು ಕಷ್ಟಕರವಾಗಿದ್ದು […]

ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ (ನಿ.) ಮಂಗಳೂರು ವತಿಯಿ0ದ ಕೋವಿಡ್-19 ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ. 25,000/- ನೆರವು ನೀಡಲಾಯಿತು.

ಪರಿಹಾರ ನಿಧಿಯ ಚೆಕ್ಕನ್ನು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರು ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ಆನಂದ ಎಸ್. ಕೊಂಡಾಣ, ಸುರೇಶ್ ವಿ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ(ಪ್ರ) ಶ್ರೀ ವಿಶ್ವನಾಥ್ ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿ. ಮಂಗಳೂರು ಇವರ ಸಮನ್ವಯದಲ್ಲಿ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು ಇವರಿಂದ ಸಹಕಾರ ನಿರ್ವಹಣೆಯಲ್ಲಿ ಉನ್ನತ Diploma 19ನೇ ಅಧಿವೇಶನದ Rank ವಿಜೇತರಿಗೆ ಪದಕ ಪ್ರಧಾನ ಸಮಾರಂಭವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು, ಇದರ ನಿರ್ದೇಶಕರಾದ ಶ್ರೀ ಎಸ್.ಆರ್. ಸತೀಶ್ಚಂದ್ರರವರು ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿ 25 ವರ್ಷದ ಹಿಂದೆ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯ 3 ದಿನದ ತರಬೇತಿ ಶಿಬಿರದಲ್ಲಿ ಪಾಲ್ಕೊಂಡಿಯಿರುವುದನ್ನು ಸ್ಮರಸಿ ಪ್ರಸ್ತುತ ಇದರ ಸದಸ್ಯರಾಗಿರುವುದೂ ಹೆಮ್ಮೆಯ ವಿಷಯ ಎಂದರು, ಭಾರತ ದೇಶದಲ್ಲಿ ಹಾಲಿನ ಸಹಕಾರಿ ಸಂಘಗಳು ಬೆಳೆದು ಬಂದ ಹಾದಿ ಹಾಗೂ ಪ್ರಸ್ತುತ ಸಹಕಾರಿಗಳು ವರ್ಷವಿಡಿ ತಮ್ಮ ವಿವಿಧ ಕಾರ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು. ಸಹಕಾರಿ ಸಂಘಗಳ ಉಪನಿಬಂಧಕರಾದ ಶ್ರೀ […]

ಆರೋಗ್ಯ ಶಿಬಿರ ಕಾರ್ಯಕ್ರಮದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಸಂಘದ ಉಳ್ಳಾಲ ಶಾಖೆಯಲ್ಲಿ ನಡೆಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆ, ಬಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ಘಟಕ, ಬಂಡಿಕೊಟ್ಯ, ಉಳ್ಳಾಲ, ವಿದ್ಯಾರಣ್ಯ ಯುವಕ ವೃಂದ (ರಿ) ಮತ್ತು ವಿದ್ಯಾರಣ್ಯ ಕಲಾವೃಂದ, ಉಳ್ಳಾಲ ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ, ಬೋಳೂರು , ಸಮುದಾಯ ದಂತ ವಿಭಾಗ ಯೆನೆಪೆಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು ಇಲ್ಲಿಯ ನುರಿತ ವೈದ್ಯರ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಬಜ್ಪೆ ಶಾಖೆಯ 6 ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಂಘದ ಸಲಹಾ ಸಮಿತಿ ಸದಸ್ಯರಾದ ಶ್ರೀ ಪ್ರದೀಪ್ ಕುಮಾರ್ ಸುವರ್ಣ ಹಾಗೂ ಸಂಘದ ಗ್ರಾಹಕರಾದ ಶ್ರೀ ಮಾಧವ ಅಮೀನ್ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಶ್ರೀಯುತ ಪ್ರದೀಪ್ ಕುಮಾರ್ ಸುವರ್ಣ ಇವರು ಆತ್ಮಶಕ್ತಿಯ ಪ್ರಗತಿಯಲ್ಲಿ ಸಂಸ್ಥೆಯ ಸಿಬ್ಬಂದಿಗಳ ಸೇವೆ ಅಮೂಲ್ಯವಾಗಿದ್ದು, ಗ್ರಾಹಕರು ತ್ವರಿತಗತಿಯಲ್ಲಿ ತನ್ನ ಎಲ್ಲಾ ಬ್ಯಾಂಕಿಂಗ್ ಸೇವೆಯನ್ನು ಪಡೆಯುತಿದ್ದು ಈ ಶಾಖೆಯು ಇತರ ರಾಷ್ಟ್ರೀಯ ಬ್ಯಾಂಕಿಂಗ್‍ಗೆ ಸರಿಸಮಾನವಾಗಿ ಬೆಳೆಯುತ್ತಿರುವುದು ಶ್ಲಾಘನೀಯ ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ ಸಂಘದ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಂಜಿಮೊಗರು ಶಾಖೆ, ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ(ರಿ). ಕಾವೂರು, ಯುವವಾಹಿನಿ(ರಿ) ಕೂಳೂರು ಘಟಕ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ಶ್ರೀ ಶಾರದೋತ್ಸವ ಸೇವಾ ಟ್ರಸ್ಟ್ ವಿದ್ಯಾನಗರ ಇವರ ಜಂಟಿ ಸಹಯೋಗದೊಂದಿಗೆ ಉಚಿತ ಕನ್ನಡಕ ವಿತರಣಾ ಸಮಾರಂಭವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಸಂಘದ ಪಂಜಿಮೊಗರು ಶಾಖೆಯಲ್ಲಿ ಜರುಗಿತು.

ಈ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಲ್ಲಿ 120 ಜನರಿಗೆ ಉಚಿತ ಕನ್ನಡಕವನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ಶ್ರೀ ರಾಮ್‍ದಾಸ್ ಮರೋಳಿ, ಶ್ರೀ ಜಿ ಪರಮೇಶ್ವರ್ ಪೂಜಾರಿ, ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ಶಾರದೋತ್ಸವ ಸೇವಾ ಟ್ರಸ್ಟ್ ವಿದ್ಯಾನಗರದ ಅಧ್ಯಕ್ಷರಾದ ಉಮೇಶ್ ಪೂಜಾರಿ ಹಾಗೂ ಸಲಹಾ ಸಮಿತಿ ಸದಸ್ಯರಾದ ಶ್ರೀ ಗಣೇಶ್ ಸನಿಲ್ ಉಪಸ್ಥಿತರಿದ್ದರು.