ಮಲರಾಯ ದೈವಸ್ಥಾನದ ಅರ್ಚಕರಾದ ಶ್ರೀಯುತ ಮುಂಡ ಯಾನೆ ಲತೀಶ್ ಪೂಜಾರಿ ಹಾಗೂ ಶ್ರೀ ಚೀರುಂಭ ಭಗವತಿ ಕ್ಷೇತ್ರದ ಅರ್ಚಕರಾದ ಶ್ರೀಯುತ ಕಂಡಪ್ಪ ಕಾನ್ವವರ್ ಶಿಬಿರವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಇದರ ಸದುಪಯೋಗವನ್ನು ಹೆಚ್ಚಿನ ಜನರು ಪಡೆದು ಆರೋಗ್ಯ ಪೂರ್ಣ ಜೀವನ ನಡೆಸುವಂತಗಲಿ ಎಂದರು. ಅಧ್ಯಕ್ಷತೆ ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರು ಸಂಘದ ಬೆಳವಣಿಗೆಯ ಬಗ್ಗೆ ಮಾತನಾಡಿ ನಮ್ಮ ಸಹಕಾರಿ ಸಂಘವು ನಿರಂತರವಾಗಿ ಪ್ರತಿಯೊಂದು ಶಾಖೆಯಲ್ಲಿ ಉಚಿತ ವೈದ್ಯಕೀಯ […]
