ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್‌ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. ಪ್ರಸ್ತುತ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ 33 ಶಾಖೆಗಳನ್ನು ಹೊಂದಿರುವ ಸಂಘವು, 2023-24ನೇ ಸಾಲಿನಲ್ಲಿ ದುಡಿಯುವ ಬಂಡವಾಳ 23652.68 ಲಕ್ಷ ಹೊಂದಿದ್ದು, ರೂ. 3.03 ಕೋಟಿಗೂ ಮಿಕ್ಕಿ ಲಾಭ ಗಳಿಸಿರುತ್ತದೆ. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಎಂ. ವಾದಿರಾಜ್ […]
