ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಕೆ. ಹರೀಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತಾನಾಡಿದ ಅವರು ಸಹಕಾರ ಕ್ಷೇತ್ರದಲ್ಲಿ ಸಂಘಗಳ ಪ್ರಗತಿಗೆ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹಾಗೂ ಸಿಬ್ಬಂದಿಗಳ ಕೊಡುಗೆ ಅಪಾರವಾದುದ್ದು, ಸಾಲ ವಸೂಲಾತಿಯಲ್ಲಿ ಮುಂಚೂಣಿಯಲ್ಲಿದ್ದರೆ ಮಾತ್ರ ಸಂಘ ಲಾಭದಾಯಕವಾಗಿ ಕಾರ್ಯ ನಿರ್ವಹಿಸಲು ಸಾಧ್ಯ. ಇಂತಹ ಕಾರ್ಯಗಾರವನ್ನು ಆಯೋಜಿಸಿದ್ದಕ್ಕಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ […]
