Blog

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಡಂತ್ಯಾರು ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ.) ಮಡವು, ಜೆಸಿಐ ಮಡಂತ್ಯಾರು, ಹೈಸ್ಕೂಲ್ ರಿಯೂನಿಯನ್ ಮಡಂತ್ಯಾರು ಹಾಗೂ ರೋಟರಿ ಕ್ಲಬ್ ಮಡಂತ್ಯಾರು ಇವರ ಜಂಟಿ ಸಹಯೋಗದೊಂದಿಗೆ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದವರಿAದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ಕಲಾ (ಆಶೀರ್ವಾದ್) ಸಭಾಂಗಣ, ಶ್ರೀ ದುರ್ಗಾ ಕಾಂಪ್ಲೆಕ್ಸ್, ಮುಖ್ಯರಸ್ತೆ, ಮಡಂತ್ಯಾರು ಇಲ್ಲಿ ಜರುಗಿತು.

ಈ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಮಡಂತ್ಯಾರು, ಇದರ ಅಧ್ಯಕ್ಷರಾದ ಶ್ರೀ ಮ್ಯಾûಕ್ಸಿಮ್ ಅಲ್ಬುಕರ್ಕ್ರವರು ಉದ್ಘಾಟಿಸಿ ಮಾತನಾಡಿ, “ಕಣ್ಣಿನ ಹಾಗೂ ದಂತದ ಪರೀಕ್ಷೆ ಕಾಲ ಕಾಲಕ್ಕೆ ಮಾಡುವುದು ಅತ್ಯಗತ್ಯ. ಇನ್ನು ಮುಂದೆಯೂ ನಿರಂತರವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇಂತಹ ಕಾರ್ಯಕ್ರಮಗಳನ್ನು ನಡೆಸಲಿ, ಸಾರ್ವಜನಿಕರಿಗೂ ಇದರ ಉಪಯೋಗವಾಗಲಿ ಎಂದು ಹೇಳಿದರು. ಜೆಸಿಐ ಮಡಂತ್ಯಾರು ಇದರ ಅಧ್ಯಕ್ಷರಾದ ಶ್ರೀಮತಿ ಸಾಯಿಸುಮ ಎಂ. ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಂಜಿಮೊಗರು ಶಾಖೆಯ ಒಂಬತ್ತನೇಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಶ್ರೀ ಗೋಪಾಲ ಕೃಷ್ಣ ಭಜನಾ ಮಂಡಳಿ,ಉರುAದಾಡಿ, ಪಂಜಿಮೊಗರು, ಯುವವಾಹಿನಿ (ರಿ.) ಕೂಳೂರು ಘಟಕ ,ಲಯನ್ಸ್ ಕ್ಲಬ್ ಮಂಗಳೂರು ಲೇಡಿಹಿಲ್ ಮತ್ತು ಲಯನ್ಸ್ ಕ್ಲಬ್ ಕುದುರೆಮುಖ ಹಾಗೂ ವಿಶ್ವ ಹಿಂದೂ ಪರಿಷತ್ ಭಜರಂಗದಳ ಕಾವೂರು, ಪ್ರಖಂಡ ಇವರ ಸಹಯೋಗದೊಂದಿಗೆ ಪಂಜಿಮೊಗರು ಉರುಂದಾಡಿಯ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸಭಾಭವನದಲ್ಲಿ ಜರುಗಿತು . ಈ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆಯ ಪಂಜಿಮೊಗರು ವಾರ್ಡ್ನ ಮಾಜಿ ಕಾರ್ಪೋರೇಟರ್ ಶ್ರೀ ಅನಿಲ್ ಕುಮಾರ್ ರವರು ಉದ್ಘಾಟಿಸಿ ಮಾತನಾಡಿ ,ಆತ್ಮಶಕ್ತಿ ಸಂಸ್ಥೆಯು ಗ್ರಾಮೀಣ ಭಾಗದ ಜನರಿಗೆ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು ಇಂತಹ ಸಮಾಜಮುಖಿ ಕಾರ್ಯಗಳನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಡಲಿ ಎಂದು ಶುಭ ಹಾರೈಸಿದರು.

ಮಂಗಳ ಕಾಲೇಜು ,ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ, ಮಂಗಳೂರು ಇದರ ವಿದ್ಯಾರ್ಥಿನಿ ಮಂಜುಳರವರು ಮಾತನಾಡಿ ಆರೋಗ್ಯದ ಬಗ್ಗೆ ಮುಂಜಾಗ್ರತೆ ಹಾಗೂ ಆರೋಗ್ಯದ ಮಹತ್ವದ ಬಗ್ಗೆ ತಿಳಿಸಿ ಹೇಳಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಈ ಪರಿಸರದಲ್ಲಿ ಇಂತಹ ಸಂಘ ಸಂಸ್ಥೆಗಳೊAದಿಗೆ ನಿರಂತರ ಶಿಬಿರವನ್ನು ಆಯೋಜಿಸುತ್ತಾ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ ಕಂಕನಾಡಿ ಮಂಗಳೂರು ಇಲ್ಲಿಗೆ ನಿತ್ಯ ಕುಡಿಯುವ ನೀರು ಶುದ್ದೀಕರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಕೊಡುಗೆಯಾಗಿ ಕುಡಿಯುವ ನೀರು ಶುದ್ದೀಕರಣ ಯಂತ್ರವನ್ನು ಹಸ್ತಾಂತರಿಸುವ ಕಾರ್ಯಕ್ರಮವು ಕಂಕನಾಡಿಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಇತ್ತೀಚೆಗೆ ಜರುಗಿತು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಕುಡಿಯುವ ನೀರು ಶುದ್ದೀಕರಣ ಯಂತ್ರವನ್ನು ಕಂಕನಾಡಿಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಶ್ರಿ ಚಿತ್ತರಂಜನ್ ಕೆ ಇವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ರಮಾನಾಥ್ ಸನಿಲ್, ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ಗೋಪಾಲ್ ಎಂ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಮ್ಯಾನೇಜರ್ ಶ್ರೀ ಜೆ. ಕಿಶೋರ್ ಮಜಿಲ, ಟ್ರಸ್ಟಿಗಳಾದ ಶ್ರೀ ಜಗದೀಪ್ ಡಿ. ಸುವರ್ಣ, ಶ್ರೀ ವಿಠಲ್ ಎ, ಶ್ರೀ ವಾಮನ, ಕ್ಷೇತ್ರದ ಮುಖಂಡರಾದ ಶ್ರೀ ಮೋಹನ್ ನೆಕ್ಕೆರೆಮಾರ್, ಶ್ರೀ ವಸಂತ ಪೂಜಾರಿ, […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ತೃತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಮಡಂತ್ಯಾರು ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಮನ್ಮಥ ಕಜೆಕ್ಕಾರ್, ಶ್ರೀ ಆನಂದ್ ಎನ್ , ಶ್ರೀ ಟಿ. ಪದ್ಮನಾಭ ಪೂಜಾರಿ, ಶ್ರೀ ರವಿ ಎಸ್, ಶ್ರೀ ಹಿತೇಶ್, ಶ್ರೀ ಸುರೇಂದ್ರ ಎಸ್ ಹಾಗೂ ಶ್ರೀ ಸುಧಾಕರ ಆಚಾರ್ಯ ಇವರುಗಳು ಉದ್ಘಾಟಿಸಿದರು.

ಸಂಘದ ಸದಸ್ಯರಾದ ಶ್ರೀ ಪ್ರವೀಣ್ ಭಂಡಾರಿ ಇವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಶಾಖೆಯ ಪ್ರಾರಂಭದಿAದಲೂ ಉತ್ತಮ ಸೇವೆಯನ್ನು ನೀಡುತ್ತಿದ್ದು, ಗ್ರಾಹಕರ ಬೇಡಿಕೆಗಳನ್ನು ಈಡೇರಿಸುತ್ತಾ ಬರುತ್ತಿದೆ” ಎಂದು ತಿಳಿಸಿದರು. ಸದಸ್ಯರಾದ ಶ್ರೀ ರವಿ ಎಸ್ ಇವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅತೀ ಕಡಿಮೆ ಅವಧಿಯಲ್ಲಿ ೩೩ ಶಾಖೆಗಳನ್ನು ಹೊಂದಿ, ಉತ್ತಮ ಪ್ರಗತಿಯನ್ನು ಸಾಧಿಸಿರುವುದು ಶ್ಲಾಘನೀಯ. ಇನ್ನೂ ಹೆಚ್ಚಿನ ಆಭಿವೃದ್ದಿ ಹೊಂದಲಿ” ಎಂದು […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಿ.ಸಿ ರೋಡ್ ಶಾಖೆಯ ೧೩ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಬಿ.ಸಿ ರೋಡ್ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ವಾಸು ಬಿ, ಶ್ರೀ ವೆಂಕಟರಮಣ ಎ, ಶ್ರೀ ರೊನಲ್ಡ್ ಡಿ ಸೋಜ, ಶ್ರೀ ಹುಬೆರ್ಟ್ ಲೋಬೋ ಹಾಗೂ ಶ್ರೀ ರಮೇಶ್ ಸೋಮಯಾಜಿ ಯವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.

ಸದಸ್ಯರಾದ ಶ್ರೀ ಹುಬೆರ್ಟ್ ಲೋಬೊ ಇವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಸಹಕಾರ ರಂಗದಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡಿದೆ. ಇದರಲ್ಲಿ ಸಂಘದ ಸಿಬ್ಬಂದಿಗಳ ಪಾತ್ರವು ಅತು÷್ಯತ್ತಮವಾಗಿರುವುದರಿಂದ ಸಂಘವು ಈ ಮಟ್ಟಕ್ಕೆ ಬೆಳೆಯಲು ಕಾರಣವಾಗಿದೆ” ಎಂದರು. ಸAಘದ ಸದಸ್ಯರಾದ ಶ್ರೀ ರೊನಾಲ್ಡ್ ಡಿ ಸೋಜ ಇವರು ಮಾತನಾಡಿ “ ಸಂಘದ ಸಿಬ್ಬಂದಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ ಉತ್ತಮ ಸೇವೆಯನ್ನು ನೀಡುತ್ತಿದ್ದಾರೆ. ಈ ಶಾಖೆಯು ಚಿಕ್ಕದಾಗಿರುವುದರಿಂದ ವ್ಯವಹರಿಸಲು […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೊಟ್ಟಾರ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್ ಉರ್ವಸ್ಟೋರ್, ಮಂಗಳೂರು, ಇವರ ಸಹಯೋಗದೊಂದಿಗೆ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದವರಿ0ದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ಮಂಗಳೂರಿನ ಉರ್ವಸ್ಟೋರ್‌ನ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್‌ನಲ್ಲಿ ಜರುಗಿತು .

ಈ ಕಾರ್ಯಕ್ರಮವನ್ನು ಬ್ರಹ್ಮಕುಮಾರಿಯರ ಮಂಗಳೂರು ವಿಭಾಗದ ಮುಖ್ಯಸ್ಥರಾದ ಬಿ. ಕೆ ವಿಶ್ವೇಶ್ವರಿ ರವರು ಉದ್ಘಾಟಿಸಿ ಮಾತನಾಡಿ “ಶಾರೀರಿಕ ಆರೋಗ್ಯದ ಜೊತೆಗೆ ಮನಸ್ಥಿತಿಯು ಚೆನ್ನಾಗಿರಬೇಕು. ಈ ನಿಟ್ಟಿನಲ್ಲಿ ಧ್ಯಾನವು ತುಂಬಾ ಪ್ರಯೋಜನಕಾರಿಯಾಗಿದೆ. ಉತ್ತಮ ಆರೋಗ್ಯಕ್ಕಾಗಿ ಔಷಧಿಗಳ ಜೊತೆಗೆ ಪ್ರತಿ ದಿನ ಧ್ಯಾನ ಮಾಡುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು” ಎಂದರು. ಮುಖ್ಯ ಅತಿಥಿಯಾದ ಹಿರಿಯ ಧಾರ್ಮಿಕ ಮುಖಂಡರಾದ ಶ್ರೀ ಯು. ಮಾಧವ ಸುವರ್ಣ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕಾಪು ಶಾಖೆ ಇದರ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ರೋಟರಿ ಕ್ಲಬ್ (ರಿ.) ಕಾಪು ಹಾಗೂ ಸುಜ್ಞಾನ ಚಾರಿಟೇಬಲ್ ಟ್ರಸ್ಟ್ (ರಿ.) ಕಾಪು ಇವರ ಜಂಟಿ ಸಹಯೋಗದೊಂದಿಗೆ ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಹಾಗೂ ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ಕಾಪು ಇವರ ನುರಿತ ವೈದ್ಯರ ತಂಡದವರಿ0ದ ಉಚಿತ ವೈದ್ಯಕೀಯ ಹಾಗೂ ನೇತ್ರ ತಪಾಸಣೆ ಶಿಬಿರವು ಕಾಪು ಹೊಸಮಾರಿಗುಡಿ ದೇವಸ್ಥಾನದ ಹತ್ತಿರದ ವಿವೇಕ್ ಕಾಂಪ್ಲೆಕ್ಸ್ ನಲ್ಲಿ ಜರುಗಿತು.

ಮಾಜಿ ಸಚಿವರು ಹಾಗೂ ಮಾಜಿ ಸಂಸದರಾದ ಶ್ರೀ ವಿನಯ ಕುಮಾರ್ ಸೊರಕೆ ರವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಜನರು ಆರೊಗ್ಯದ ಬಗ್ಗೆ ಕಾಳಜಿ ವಹಿಸುವುದು ಇತ್ತೀಚಿನ ದಿನಗಳಲ್ಲಿ ತುಂಬಾ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಬ್ಯಾಂಕಿAಗ್ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಂಡು ಬರುತ್ತಿದ್ದು, ಸಂಸ್ಥೆಯು ಇನ್ನೂ ಹೆಚ್ಚಿನ ಅಭಿವೃದ್ದಿ ಪಥದಲ್ಲಿ ಸಾಗಲಿ, ಸಾಮಾಜಿಕ ಸೇವೆ ನಿರಂತರವಾಗಿ ಮುಂದುವರಿಯಲಿ” […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮುಲ್ಕಿ ಶಾಖೆಯ ವತಿಯಿಂದ ಲಯನ್ಸ್ ಕ್ಲಬ್ ಬಪ್ಪನಾಡು ಇ£iï್ಸಫಯರ್ ಹಾಗೂ ಶ್ರೀ ರಾಮ ಸೇವಾ ಮಂಡಳಿ ಕಾರ್ನಾಡು ಮುಲ್ಕಿ ಇವರ ಜಂಟಿ ಸಹಯೋಗದೊಂದಿಗೆ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇವರ ನುರಿತ ತಜ್ಞ ವೈದ್ಯ ತಂಡದವರಿ0ದ ಉಚಿತ ನೇತ್ರ ತಪಾಸಣಾ ಶಿಬಿರವು ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದ ಎದುರುಗಡೆಯ ನಾಗರಾಜ ಟವರ್ಸ್ನಲ್ಲಿ ಜರುಗಿತು. ಈ ಶಿಬಿರವನ್ನು ಮುಲ್ಕಿ ನಗರ ಪಂಚಾಯತ್‌ನ ಮಾಜಿ ಮುಖ್ಯಾಧಿಕಾರಿಯಾದ ಹಾಗೂ ಹೊಸ ಅಂಗಣ ಪತ್ರಿಕೆಯ ಸಂಪಾದಕರಾದ ಶ್ರೀ ಹರಿಶ್ಚಂದ್ರ ಪಿ ಸಾಲ್ಯಾನ್ ರವರು ಉದ್ಘಾಟಿಸಿದರು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮುಲ್ಕಿ ನಗರ ಪಂಚಾಯತ್‌ನ ಮಾಜಿ ಮುಖ್ಯಾಧಿಕಾರಿ ಹಾಗೂ ಹೊಸ ಅಂಗಣ ಪತ್ರಿಕೆಯ ಸಂಪಾದಕರಾದ ಶ್ರೀ ಹರಿಶ್ಚಂದ್ರ ಪಿ ಸಾಲ್ಯಾನ್ ರವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಈಗಾಗಲೇ ೩೩ಕ್ಕೂ ಮಿಕ್ಕಿ ಶಾಖೆಗಳನ್ನು ಹೊಂದಿದ್ದು, ಬಹಳಷ್ಟು ಜನರಿಗೆ ಉದ್ಯೋಗವಕಾಶವನ್ನು ಒದಗಿಸಿ ಕೊಟ್ಟಿದೆ, ಪಿಗ್ಮಿ ಸಂಗ್ರಾಹಕರಿಗೂ ವಿಮಾ ಸೇವಾ ಸೌಲಭ್ಯವನ್ನು ಒದಗಿಸಿಕೊಟ್ಟಿದೆ. ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಉಚಿತ ವೈದ್ಯಕೀಯ […]

ತುಳುನಾಡ ರಕ್ಷಣಾ ವೇದಿಕೆ ಹಾಗೂ ತುಳುನಾಡ ಸೂರ್ಯ ಪತ್ರಿಕೆ ವತಿಯಿಂದ ಸಹಕಾರ ಸಪ್ತಾಹ-2025ರ ಅಂಗವಾಗಿ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷರಾದ ಶ್ರೀ ಯೋಗಿಶ್ ಶೆಟ್ಟಿ ಜಪ್ಪು ರವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಉರ್ವಸ್ಟೋರ್‌ನ ತುಳುಭವನದ ಸಿರಿ ಚಾವಡಿಯಲ್ಲಿ ಜರುಗಿತು.

ಸಮಾರಂಭದಲ್ಲಿ ದಿವ್ಯ ಸಾನ್ನಿದ್ಯವನ್ನು ವಹಿಸಿದ್ದ ಮೂಡಬಿದಿರೆ ಜೈನ ಮಠದ ಜಗದ್ಗುರು ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಆಶೀರ್ವಚನವನ್ನು ನೀಡುತ್ತಾ “ಮಾನವ ಆದಿಯಿಂದಲೂ ಹುಟ್ಟಿನಾರಭ್ಯ ಸಹಕಾರ ತತ್ವದಿಂದಲೇ ಬದುಕನ್ನು ಬಹುವಾಗಿ ಸಿರಿವಂತಗೊಳಿಸಿದವ. ಅದರ ಮುಂದುವರಿದ ಭಾಗವೇ ಇಂದಿನ ಸಹಕಾರ ಸಂಘಗಳ ಸೇವಾ ಭಾವ, ಮನುಕುಲೋದ್ದಾರಕ್ಕೆ ಸಹಕಾರಿ ಸಂಘಗಳು ಮತ್ತಷ್ಟೂ ಹಿರಿದಾದ ಪಾಲನ್ನು ಸಲ್ಲಿಸುವಂತಾಗಲಿ. ಈ ನಿಟ್ಟಿನಲ್ಲಿ ಇವತ್ತಿನ ಈ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿರುವ ತುಳುನಾಡ ರಕ್ಷಣಾ ವೇದಿಕೆಯ ಕಾರ್ಯವು ಶ್ಲಾಘನೀಯ” ಎಂದು ಹರಸಿದರು. ಮಾಡೂರಿನ ಶಿವ ದುರ್ಗಾಂಭ […]