ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ನ ಅಧ್ಯಕ್ಷರಾದ ಶ್ರೀ ವಾಮನ್ ಕೆ. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯೊಂದಿಗೆ ವೈದ್ಯಕೀಯ ಸೇವೆಯನ್ನು ಮಾಡುತ್ತಿರುವುದು ತುಂಬಾ ಒಳ್ಳೆಯ ಕೆಲಸವಾಗಿದೆ. ಜನರು ಇನ್ನಷ್ಟು ಹೆಚ್ಚಿನ ಪ್ರಯೋಜನವನ್ನು ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಮಾತನಾಡಿ ಸಂಘವು ಹಣಕಾಸಿನ ವ್ಯವಹಾರದೊಂದಿಗೆ ಸಾಮಾಜಿಕ ಸೇವೆಗೂ […]
