ಮುಖ್ಯ ಅತಿಥಿಯಾಗಿದ್ದ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಮಾತನಾಡಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಆದ್ಯತೆ ನೀಡುವ ಅತ್ಮಶಕ್ತಿ ವಿವಿದೋದ್ದೇಶ ಸಹಕಾರಿ ಸಂಘವು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಸೇವೆಯ ಮೂಲಕ ಜನ ಮಾನಸದಲ್ಲಿ ಅಚ್ಚಲಿಯದೆ ಉಳಿವಂತಾಗಿದ್ದು,ಇದೀಗ 25ನೇ ಶಾಖೇಯನ್ನು ಕಾಪುವಿನಲ್ಲಿ ತೆರೆಯುವ ಮೂಲಕ ಜನರಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸುವಲ್ಲಿ ಕಾರ್ಯೋನ್ಮುಖವಾಗಿರುವುದು ಶ್ಲಾಘನೀಯ. ಕೇವಲ ಬ್ಯಾಂಕಿಂಗ್ ಕ್ಷೇತ್ರ ಮಾತ್ರವಲ್ಲದೇ ವಿವಿಧ ಸಾಮಾಜಿಕ ಬದ್ದತೆಯ ಸೇವಾ ಕೆಲಸ ಕಾರ್ಯಗಳಲ್ಲಿಯೂ ಕೈ ಜೋಡಿಸಿ ಎಲ್ಲರ ಮೆಚ್ಚುಗೆ ಪಾತ್ರವಾಗಿದೆ ಎಂದರು. ಮಾಜಿ ಸಚಿವ ವಿನಯ […]
