Home
About Us
Board of Directors
Our Services
Events
Annual General Body Meeting
Awards & Rewards
News & Events
Gallery
Branches
Career
Contact us
X
Home
About Us
Board of Directors
Our Services
Events
Annual General Body Meeting
Awards & Rewards
News & Events
Gallery
Branches
Career
Contact us
X
News & Events
Athmashakthi Multi purpose Co-operative Society LTD
15
Apr
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಡಿಪು ಶಾಖೆಯ ಎಂಟನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ’’ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಮುಡಿಪು ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಶಿವರಾಮ್ ಬಿ, ಶ್ರೀ ಎಮ್ ಶಂಕರ್ ಭಟ್, ಶ್ರೀ ಸುಂದರ್ ಪೂಜಾರಿ, ಶ್ರೀ ಗುರುವಪ್ಪ ಪೂಜಾರಿ, ಶ್ರೀಮತಿ ಶಶಿಕಲಾ ಎಮ್ ಮತ್ತು ಶ್ರೀಮತಿ ಅಮೀನಾ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಟಾಟಿಸಿದರು. ಸಂಘದ ಸದಸ್ಯರಾದ ಶ್ರೀ ಶಿವರಾಮ್ ಬಿ ರವರು ಮಾತನಾಡಿ ಸಂಘದ ಬೆಳವಣಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ದಕ್ಷಿಣ ಕನ್ನಡದಲ್ಲಿ ಮಾತ್ರವಲ್ಲದೆ ಸಂಘದ ಶಾಖೆಗಳು ಕರ್ನಾಟಕದಾದ್ಯಂತ ಪ್ರಾರಂಭವಾಗಲಿ ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.
Learn more
15
Apr
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಗಂಜಿಮಠ ಶಾಖೆಯ ಪ್ರಯುಕ್ತ ಮರಾಠಿ ಸಮಾಜ ಸೇವಾ ಸಂಘ (ರಿ.) ಗಂಜಿಮಠ , ಅಳಿಕೆ ಫ್ರೆಂಡ್ಸ್ (ರಿ.) ಗಂಜಿಮಠ , ಫ್ರೆಂಡ್ಸ್ ಕ್ಲಬ್ ಮಟ್ಟಿ ಬಡಗುಳಿಪಾಡಿ, ಕಲಾವರ್ಧಕ ಯುವಕ ಮಂಡಲ (ರಿ.) ನಾರ್ಲ ಮೊಗರು ಹಾಗೂ ಲಯನ್ಸ್ ಕ್ಲಬ್ ಗುರುಪುರ ಕೈಕಂಬ ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು Œಅಭಿವೃದ್ದಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯರ ತಂಡದೊAದಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಶಿಬಿರವು ಮರಾಠಿ ಸಮಾಜ ಸೇವಾ ಸಂಘ (ರಿ.) ಗಂಜಿಮಠ ಇಲ್ಲಿ ಜರುಗಿತು .
Learn more
15
Apr
ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು “ಆಟಿದ ಪೊಲಬು” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ (ನಿ.) ಮಂಗಳೂರು ಇದರ ಪ್ರಧಾನ ಕಛೇರಿ “ಆತ್ಮಶಕ್ತಿ ಸೌಧ” ಪಡೀಲ್ನಲ್ಲಿ ಆಚರಿಸಲಾಯಿತು. ಹಿರಿಯ ನಾಟಿ ವೈದ್ಯರಾದ ಶ್ರೀಯುತ ಕಲಾಯಿ ಈಶ್ವರ ಪೂಜಾರಿ ಯವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತಾಡಿದ ಇವರು ಆಟಿ ತಿಂಗಳ ಮಹತ್ವವನ್ನು ತಿಳಿಸಿ, ನಾಟಿ ಔಷಧಿ ಪದ್ದತಿಗಳ ಬಗ್ಗೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.
Learn more
15
Apr
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ) ಮಂಗಳೂರು ಇದರ ಪ್ರಧಾನ ಕಛೇರಿಯಲ್ಲಿ ಸ್ವಾತಂತ್ಯೋತ್ಸವವನ್ನು ಆಚರಿಸಲಾಯಿತು. ಪ್ರಧಾನ ಕಛೇರಿಯಲ್ಲಿ ನಡೆದ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ನಿವೃತ್ತ ಯೋಧ ಹೊನರರಿ ಕ್ಯಾಪ್ಟನ್ ಶ್ರೀನಿವಾಸ ಅಮೀನ್ ರವರು ಧ್ವಜಾರೋಹಣ ನೆರವೇರಿಸಿ, ಮಾತನಾಡಿ ಸೇನೆಯ ಸೇವೆಯಲ್ಲಿರುವಾಗ ಯುದ್ಧದ ಸಂದರ್ಭದಲ್ಲಿ ತಾವು ಪಾಲ್ಗೊಂಡಿದ್ದ ಕಾರ್ಯಚರಣೆ ಪ್ರಸ್ತಾಪಿಸಿ ಬಾವುಕರಾದರು. ದೇಶವು ಬಲಿಷ್ಟವಾಗಬೇಕಾದರೆ ಜನರು ಬಲಿಷ್ಟರಾಗಬೇಕು. ದೇಶವನ್ನು ಬಲಿಷ್ಟಗೊಳಿಸುವ ಜವಾಬ್ದಾರಿ ಪ್ರಜೆಗಳದ್ದು, ಕರಾವಳಿಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಹೇಳಿದರು.
Learn more
15
Apr
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪಂಜಿಮೊಗರು ಶಾಖೆಯ ವತಿಯಿಂದ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ಶ್ರೀ ಶಾರದೋತ್ಸವ ಸೇವಾ ಟ್ರಸ್ (ರಿ), ಹಿಂದೂ ಯುವಸೇನೆ ವಿದ್ಯಾನಗರ ಶಾಖೆ ಪಂಜಿಮೊಗರು ಯುವವಾಹಿನಿ (ರಿ.) ಕೂಳೂರು ಘಟಕ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ನುರಿತ ತಜ್ಞ ವೈದ್ಯ ತಂಡದವರಿAದ ಉಚಿತ ವೈದ್ಯಕೀಯ ನೇತ್ರ ತಪಾಸಣೆ ಮತ್ತು ದಂತ ತಪಾಸಣ ಚಿಕಿತ್ಸೆ ಶಿಬಿರವು ಶಾರದ ನಿಕೇತನ ಶ್ರೀ ಕೃಷ್ಣ ಭಜನಾ ಮಂದಿರದ ಅಂಗಣದಲ್ಲಿ ನಡೆಯಿತು.
Learn more
15
Apr
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ 13ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಪ್ರಯುಕ್ತ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವು “ಆತ್ಮಶಕ್ತಿ ಸೌಧ” ಬೈರಾಡಿಕೆರೆ ಹತ್ತಿರ, ಪಡೀಲ್ ಮಂಗಳೂರು ಇಲ್ಲಿ ಜರುಗಿತು . ಈ ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಶ್ರೀಯುತ ಹರೀಶ್ ಪಿ.ಡಿ ರವರು ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ರವರ ಮುಂದಾಳತ್ವದಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ, ಜನರಿಗೆ ಆರೋಗ್ಯದ ಬಗ್ಗೆ ಕಾಳಜಿ ಹಾಗೂ ಜಾಗೃತಿಯನ್ನು ಮೂಡಿಸುವಲ್ಲಿ ಸಫಲತೆಯನ್ನು ಕಂಡಿದೆ ಎಂದು ಈ ಶಿಬಿರಕ್ಕೆ ಶುಭ ಹಾರೈಸಿದರು.
Learn more
15
Apr
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ 2023-24 ನೇ ಸಾಲಿನ 13ನೇ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 08.09.2024ರ ಭಾನುವಾರ ಪೂರ್ವಾಹ್ನ 10.30ಕ್ಕೆ ಪಡೀಲಿನ ಬೈರಾಡಿಕೆರೆ ಹತ್ತಿರದ ಸಂಘದ ಪ್ರಧಾನ ಕಛೇರಿ “ಆತ್ಮಶಕ್ತಿ ಸೌಧ”ದ ಸಭಾಂಗಣದಲ್ಲಿ ಜರುಗಿತು.
Learn more
15
Apr
ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ). ಮಂಗಳೂರು ಮತ್ತು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಕಣಚೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್, ಮಂಗಳೂರು ಇವರ ವೈದ್ಯರ ತಂಡದವರಿಂದ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರವು ರಾಜ್ಯ ಸರಕಾರಿ ನೌಕರರ ಸಂಘದ ಸಮುದಾಯ ಭವನ ಕಟ್ಟಡದ ಎರಡನೇ ಮಹಡಿಯಲ್ಲಿ ಜರುಗಿತು.
Learn more
15
Apr
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ (ನಿ.) ಮಂಗಳೂರು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಛೇರಿಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಧಾರ್ಮಿಕ ಚಿಂತಕ ಹಾಗೂ ಸಂಘದ ಹಿರಿಯ ಸದಸ್ಯರಾದ ಶ್ರೀ ಮಾಧವ ಸುವರ್ಣ ರವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Learn more
15
Apr
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ವಂತ ಮಾಲೀಕತ್ವದ ನೂತನ 33ನೇ ಕೃಷ್ಣಾಪುರ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇವರ ನುರಿತ ವೈದ್ಯ ತಂಡದವರಿ0ದ ಉಚಿತ ವೈದ್ಯಕೀಯ ಮತ್ತು ನೇತ್ರ ತಪಸಣಾ ಶಿಬಿರ ಹಾಗೂ ಶ್ರೀನಿವಾಸ್ ಇನ್ಸ್ಸ್ಟಿಟ್ಯೂಟ್ ಆಪ್ ಡೆಂಟಲ್ ಸಾಯನ್ಸ್ ಮುಕ್ಕ , ಸುರತ್ಕಲ್ ಇಲ್ಲಿನ ನುರಿತ ವೈದ್ಯರ ತಂಡದಿ0ದ ಉಚಿತ ದಂತ ತಪಸಣಾ ಶಿಬಿರವನ್ನು ಸುರತ್ಕಲ್‌ನ ಕೃಷ್ಣಾಪುರ 6ನೇ ಬ್ಲಾಕ್‌ನಲ್ಲಿರುವ “ICON ಐಕನ್ ಪ್ಲಾನೆಟ್” ಕಟ್ಟಡದಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.) ಮಂಗಳೂರು ಇದರ ಉಪಾಧ್ಯಕ್ಷರಾಗಿರುವ ಶ್ರೀ ವಿನಯ್ ಕುಮಾರ್ ಸೂರಿಂಜೆ ರವರು ಉದ್ಘಾಟಿಸಿದರು.
Learn more